ಬೀದರ್ | ಕಾರುಣ್ಯ ಸೌಹಾರ್ದ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರಿ ಪ್ರಶಸ್ತಿ

Date:

ಬೀದರ್ ನಗರದ ಝೀರಾ ಕನ್ವೆನ್ಷನ್ ಹಾಲ್‌ನಲ್ಲಿ ನ.18ರಂದು ನಡೆದ ರಾಜ್ಯಮಟ್ಟದ 73ನೇ ಅಖಿಲ ಭಾರತ ಸಹಕಾರಿ ಸಪ್ತಾಹ–2026ರ ಕಾರ್ಯಕ್ರಮದಲ್ಲಿ ಬೀದರ್‌ನ ಕಾರುಣ್ಯ ಸೌಹಾರ್ದ ಪತ್ತಿನ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

- Advertisement -

ಸಂಘದ ಉತ್ತಮ ಕಾರ್ಯನಿರ್ವಹಣೆ ಹಾಗೂ ಕಡಿಮೆ ಅವಧಿಯಲ್ಲಿ ಸಾಧಿಸಿರುವ ಪ್ರಗತಿಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ಸಂಘದ ಅಧ್ಯಕ್ಷ ಜ. ರಫೀಕ್ ಅಹ್ಮದ್ ಗಾದಗಿ ಹಾಗೂ ವ್ಯವಸ್ಥಾಪಕ ಅಧ್ಯಕ್ಷ ಜ. ಮುಜ್ತಬಾ ಖಾನ್ ಅವರು ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ ಸ್ವೀಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

ಪ್ರಶಸ್ತಿ ಲಭಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಸಂಘದ ಅಧ್ಯಕ್ಷ ರಫೀಕ್ ಅಹ್ಮದ್ ಗಾದಗಿ, ಕಡಿಮೆ ಅವಧಿಯಲ್ಲಿ ಸಂಘ ಉತ್ತಮ ಸಾಧನೆ ಮಾಡಿದ್ದು, ರಾಜ್ಯಮಟ್ಟದ ಪ್ರಶಸ್ತಿ ದೊರೆತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಸಂಘದ ವ್ಯವಸ್ಥಾಪಕ ಅಧ್ಯಕ್ಷ ಮುಜ್ತಬಾ ಖಾನ್ ಮಾತನಾಡಿ, “ಸಂಘದಿಂದ ವಿತರಿಸಲಾದ ಸಾಲ ಮತ್ತು ಸಾಲದ ಮರುಪಾವತಿ ಪ್ರಮಾಣ ಸಮಾನವಾಗಿದ್ದು, ತೃಪ್ತಿಕರವಾಗಿದೆ. ಸಂಘವು ಬಡ್ಡಿರಹಿತ ಸಾಲ ಸೌಲಭ್ಯ ಒದಗಿಸುವುದರ ಜೊತೆಗೆ ವ್ಯಾಪಾರ ಸರಕುಗಳ ಖರೀದಿಗೆ ಸಾಲ ನೀಡುವ ಮೂಲಕ ಸಣ್ಣ ವ್ಯಾಪಾರಸ್ಥರಿಗೆ ನೆರವಾಗುತ್ತಿದೆ. ಇದರಿಂದ ಸಂಘವು ಸಣ್ಣ ವ್ಯಾಪಾರಸ್ಥರ ಜೀವನಾಡಿಯಾಗಿದೆ” ಎಂದು ಹೇಳಿದರು.

ಬಡ್ಡಿಮುಕ್ತ ಸಮಾಜ ನಿರ್ಮಾಣ ನಮ್ಮ ಕನಸಾಗಿದ್ದು, ಅದನ್ನು ನನಸಾಗಿಸಲು ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಯತ್ನಿಸಲಾಗುವುದು. ಬೀದರ್ ಜಿಲ್ಲೆಯ ಜನರು ಸಂಘದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಸಂಘದ ನಿರ್ದೇಶಕರಾದ ಏಹತೆಶಾಮ್ ಉಲ್ ಹಕ್, ಮಹ್ಮದ್ ಆಸಿಫೋದ್ದಿನ್, ಮಹ್ಮದ್ ಜಾವೀದ್ ಅಹ್ಮದ್, ಮುಹಮ್ಮದ್ ನಿಝಾಮೋದ್ದಿನ್, ರಹಮತುಲ್ಲಾ ಖಾನ್, ಶೇಖರ ಚವ್ಹಾಣ, ಅಶ್ಪಾಕ್ ಅಹ್ಮದ್, ಅಕ್ರಮ್ ಅಲಿ, ಮುಬಸ್ಸಿರ್ ಸಿಂಧೆ, ಸಬೀಹಾ ಖಾನಮ್, ಅಸ್ಮಾ ಬೇಗಂ ಹಾಗೂ ಸಂಘದ ವ್ಯವಸ್ಥಾಪಕ ಜ. ಮುಹಮ್ಮದ್ ಬಶಾರತ್ ಅಲಿ ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌ | ʼಬಸವ ಮಂಟಪʼ ಕೃತಿ ನಿಷೇಧಕ್ಕೆ ಆಗ್ರಹ: ರವಿ ಹಂಜ್ ಪ್ರತಿಕೃತಿ ದಹಿಸಿ ಪ್ರತಿಭಟನೆ

WhatsApp Image 2026 11 13 at 8.18.17 PM 5
eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು ಸಾಧ್ಯವೇ?

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ ಪಯಣ?

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ...

ಶಿರಹಟ್ಟಿ | ಸಮುದಾಯ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಐಇಸಿ ಸಂಯೋಜಕರ ಭೇಟಿ, ಪರಿಶೀಲನೆ

ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಕೋಗನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಮಡುವು...

ನೀವು ಆ ಕುರ್ಚಿಗೆ ಅರ್ಹರಲ್ಲ: ಸಿಜೆಐ ವಿರುದ್ಧ ಆಕ್ರೋಶಗೊಂಡ ವಕೀಲನಿಗೆ ಸುಪ್ರೀಂ ನ್ಯಾಯಾಂಗ ನಿಂದನೆ ನೋಟಿಸ್

ತೆರೆದ ನ್ಯಾಯಾಲಯದ ಕಲಾಪದ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್...