ಬೀದರ್‌ | ಮಹಾತ್ಮ ಗಾಂಧೀಜಿ ಚೌಕ್ ನಿರ್ಮಾಣಕ್ಕೆ ಭೂಮಿ ಪೂಜೆ

Date:

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯೊಂದಿಗೆ ಚೌಕ್ ನಿರ್ಮಾಣಕ್ಕೆ ನಗರದ ವಾಣಿಜ್ಯ ಕೇಂದ್ರ ಗಾಂಧಿ ಗಂಜ್‍ನಲ್ಲಿ ಸೋಮವಾರ ಭೂಮಿ ಪೂಜೆ ನೆರೆವೇರಿಸಲಾಯಿತು.

- Advertisement -

ದಿ ಗ್ರೇನ್ ಆ್ಯಂಡ್ ಸೀಡ್ಸ್ ಮರ್ಚಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಬಸವರಾಜ ಧನ್ನೂರ ಅವರು ಭೂಮಿ ಪೂಜೆ ನೆರವೇರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

ಬಳಿಕ ಮಾತನಾಡಿದ ಅವರು, “ಮಹಾತ್ಮ ಗಾಂಧೀಜಿ ಅವರ ಹೆಸರನ್ನೇ ಹೊಂದಿರುವ ಗಾಂಧಿಗಂಜ್‍ನಲ್ಲಿ ಈವರೆಗೆ ಗಾಂಧೀಜಿ ಅವರ ಪ್ರತಿಮೆ ಇರಲಿಲ್ಲ. ಹೀಗಾಗಿ ಈಚೆಗೆ ನಡೆದ ದಿ ಗ್ರೇನ್ ಆ್ಯಂಡ್ ಸೀಡ್ಸ್ ಮರ್ಚಂಟ್ಸ್ ಅಸೋಸಿಯೇಷನ್ ಸಭೆಯಲ್ಲಿ ಚೌಕ್ ನಿರ್ಮಿಸಿ ಸುಂದರ ಧ್ಯಾನಸ್ಥ ಪ್ರತಿಮೆ ಸ್ಥಾಪಿಸಲು ನಿರ್ಧರಿಸಲಾಗಿತ್ತು. ಅದರಂತೆ ಚೌಕ್ ನಿರ್ಮಾಣಕ್ಕೆ ಚಾಲನೆ ಕೊಡಲಾಗಿದೆ” ಎಂದು ಹೇಳಿದರು.

ಅಸೋಸಿಯೇಷನ್ ನೇತೃತ್ವದಲ್ಲಿ ಗಾಂಧಿಗಂಜ್‍ನ ಎಲ್ಲ ವ್ಯಾಪಾರಿಗಳ ಸಹಕಾರದೊಂದಿಗೆ ಚೌಕ್ ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ : ವಚನ ಕಲ್ಯಾಣ | ಹದತಪ್ಪಿ ಕುಟ್ಟಲು ನುಚ್ಚಲ್ಲದೆ ಅಕ್ಕಿಯಿಲ್ಲ!

ಮಲ್ಲಯ್ಯ ಸ್ವಾಮಿ ಬೋರಂಚಿ, ಅಸೋಸಿಯೇಷನ್ ಉಪಾಧ್ಯಕ್ಷ ನಾಗಶೆಟ್ಟೆಪ್ಪ ದಾಡಗೆ, ಕಾರ್ಯದರ್ಶಿ ಭಗವಂತ ಔದತ್ತಪುರ, ಕೋಶಾಧ್ಯಕ್ಷ ಬಂಡೆಪ್ಪ ಗಡ್ಡೆ, ನಿರ್ದೇಶಕರಾದ ಸೋಮನಾಥ ಗಂಗಶೆಟ್ಟಿ, ರಾಜಕುಮಾರ ಬಸವಣ್ಣನವರ್, ನಾಗಶೆಟ್ಟಿ ಕಾರಾಮುಂಗಿ, ಶಿವಾನಂದ ಸ್ವಾಮಿ, ಗುಂಡಪ್ಪ ಎಮ್ಮೆ, ರಮೇಶ ಪಾಟೀಲ ಮೈಲೂರು, ಬಸವರಾಜ ಲಾಧಾ, ರಾಜಕುಮಾರ ಹಜ್ಜರಗಿ, ವೀರಭದ್ರಯ್ಯ ಸ್ವಾಮಿ, ರಮೇಶ ವಿಳಾಸಪುರ, ಪ್ರದೀಪ್ ಬಿರಾದಾರ, ಕಲ್ಯಾಣರಾವ್ ಪಾಟೀಲ, ಸಂತೋಷ್ ಗಾದಗಿ, ಎಂಜಿನಿಯರ್ ಕೀರ್ತಿ ವಾಲೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ವಾತಂತ್ರ್ಯ ಹೋರಾಟದ ಇತಿಹಾಸ ಸಾರುವ ಪ್ರವಾಸಿ ತಾಣವಾಗಿ ಶಿವಪುರ ಸೌಧ ಅಭಿವೃದ್ಧಿ

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ದೇಶಪ್ರೇಮದ ಇತಿಹಾಸವನ್ನು ಮುಂದಿನ ಪೀಳಿಗೆಗೆ...

ವಾಟ್ಸ್‌ಆ್ಯಪ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ!

ಕಂಪ್ಯೂಟರ್‌ಗಳಲ್ಲಿ ವಾಟ್ಸ್‌ಆ್ಯಪ್ ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯದ ರಾಷ್ಟ್ರೀಯ ಸೈಬರ್...

ದೆಹಲಿ ರಸ್ತೆಗಳಲ್ಲಿ ಕೇವಲ BS-VI ವಾಹನಗಳಷ್ಟೇ ಓಡಾಡಲಿ: ವಾಯುಮಾಲಿನ್ಯ ತಡೆಗೆ ಸುಪ್ರೀಂ ಮಹತ್ವದ ಇಂಗಿತ!

ರಾಷ್ಟ್ರ ರಾಜಧಾನಿ ದೆಹಲಿಯ ವಾಯುಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ...

ಶಿವಮೊಗ್ಗ | 67 ಕ್ವಿಂಟಾಲ್ ಪಡಿತರ ಅಕ್ಕಿ ಕೊರತೆ: ಪರಿಶೀಲನೆಗೆ ಆಗ್ರಹ

ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ಸಂಬಂಧಪಟ್ಟ ಆಹಾರ ಇಲಾಖೆಯ ಆಹಾರ ನಿರೀಕ್ಷಕರಾದ...