ನೆರೆಯ ತೆಲಂಗಾಣದ ಸಂಗಾರೆಡ್ಡಿ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೀದರ್ ತಾಲ್ಲೂಕಿನ ಯರನಳ್ಳಿ ಗ್ರಾಮದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಸಾಯಿಕಿರಣ್ ಜೀತಪ್ಪಾ ಜೋಶಿ (25) ಹಾಗೂ ನಾಗೇಶ ಮಾಣಿಕ ಅಣ್ಣಾ (24) ಎಂದು ಗುರುತಿಸಲಾಗಿದೆ.
ಸಾಯಿಕಿರಣ್ ಹಾಗೂ ನಾಗೇಶ ಆಪ್ತ ಸ್ನೇಹಿತರಾಗಿದ್ದು, ಬೆಂಗಳೂರಿನಲ್ಲಿ ಹಳೆಯ ಬೈಕ್‌ವೊಂದನ್ನು ಖರೀದಿಸಿದ್ದರು. ಅದೇ ಬೈಕ್‌ನಲ್ಲಿ ಬೆಂಗಳೂರಿನಿಂದ ಯರನಳ್ಳಿ ಗ್ರಾಮಕ್ಕೆ ವಾಪಸ್ ಬರುತ್ತಿದ್ದ ವೇಳೆ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಅಪಘಾತದ ಬಳಿಕ ಇಬ್ಬರು ಯುವಕರು ಹೆದ್ದಾರಿಯಲ್ಲಿ ಬಿದ್ದಿರುವುದನ್ನು ಗಮನಿಸಿದ ಆಂಬುಲೆನ್ಸ್ ಸಿಬ್ಬಂದಿ, ಅವರ ಬಳಿಯಿದ್ದ ದಾಖಲೆಗಳ ಆಧಾರದ ಮೇಲೆ ವಿಳಾಸ ಪತ್ತೆಹಚ್ಚಿ ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ.
This video cannot be played in your browser. Open the video directly
ಇದನ್ನೂ ಓದಿ : ಬೀದರ್ | ಜಿಲ್ಲಾ ಪಂಚಾಯತಿ 34, ತಾಲೂಕು ಪಂಚಾಯತಿ 123 ಸ್ಥಾನಗಳಿಗೆ ಮೀಸಲಾತಿ ಪ್ರಕಟ
ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಸಂಗಾರೆಡ್ಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎನ್ನಲಾಗಿದೆ.





