ಬೀದರ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಏ.20ರಂದು ಬೆಳಿಗ್ಗೆ 11 ಗಂಟೆಗೆ ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತ್ಯುತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.
ಅರಣ್ಯ, ಜೀವಿಶಾಸ್ತರ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಮುಖ್ಯ ಅತಿಥಿಗಳಾಗಿ ಬೀದರ ಲೋಕಸಭಾ ಸದಸ್ಯ ಸಾಗರ ಈಶ್ವರ ಖಂಡ್ರೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಾಲಾ ನಾರಾಯಣರಾವ್, ಔರಾದ(ಬಿ) ಶಾಸಕ ಪ್ರಭು ಬಿ.ಚವ್ಹಾಣ್, ಬಸವಕಲ್ಯಾಣ ಶಾಸಕ ಶರಣು ಸಲಗರ, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕ ಡಾ.ಸಿದ್ದು ಪಾಟೀಲ, ವಿಧಾನ ಪರಿಷತ್ ಶಾಸಕರುಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ ಜಿ.ನಮೋಶಿ, ಭೀಮರಾವ ಪಾಟೀಲ್, ಎಂ.ಜಿ.ಮೂಳೆ ಹಾಗೂ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಕೃಷ್ಣಾ ಮೇಲ್ದಂಡೆ ಯೋಜನೆ (ಕಾಡಾ) ಭೀಮರಾಯನಗುಡಿ ಕಲಬುರಗಿಯ ಅಧ್ಯಕ್ಷ ಬಾಬು ಹೊನ್ನನಾಯ್ಕ, ಬೀದರ ನಗರಸಭೆ ಅಧ್ಯಕ್ಷ ಮಹಮ್ಮದ ಗೌಸ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅವರು ಭಾಗವಹಿಸಲಿದ್ದಾರೆ.
ಇದನ್ನೂ ಓದಿ : ಪ್ರತಿಷ್ಠಿತ ಪಂಪ ಪ್ರಶಸ್ತಿಗೆ ದೇವನೂರ ಮಹಾದೇವ, ಅಕ್ಕಮಹಾದೇವಿ ಪ್ರಶಸ್ತಿಗೆ ಕೆ ನೀಲಾ ಭಾಜನ
ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬಸವಬೆಳವಿಯ ಶ್ರೀ ಚರಮೂರ್ತಿ ಚರಂತೇಶ್ವರ ವಿರಕ್ತಮಠದ ಪೂಜ್ಯ ಶ್ರೀ ಶರಣ ಬಸವ ಮಹಾಸ್ವಾಮಿಗಳು ಅತಿಥಿ ಉಪನ್ಯಾಸವನ್ನು ನೀಡಲಿದ್ದಾರೆ.




