ಬೀದರ್‌ | ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯಿಂದ ಅಣಕು ಶವಯಾತ್ರೆ

Date:

ರಾಜ್ಯ ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಹಾಗೂ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ ಎಂದು ಆರೋಪಿಸಿ ಬೀದರ್ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಗುರುವಾರ ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಅಣಕು ಶವಯಾತ್ರೆ ನಡೆಸಿ ಪ್ರತಿಭಟನೆ ನಡೆಸಲಾಯಿತು.

- Advertisement -

ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಮಾತನಾಡಿ, “ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ರಾಜ್ಯ ಸರ್ಕಾರ ಗರಿಷ್ಠ ಪ್ರಮಾಣದಲ್ಲಿ ಸಾಲ ಮಾಡಿದ್ದು, ಹೊಸದಾಗಿ ₹4 ಲಕ್ಷ ಕೋಟಿಗೂ ಅಧಿಕ ಸಾಲ ಮಾಡಲಾಗಿದೆ. ಒಟ್ಟಾರೆ ರಾಜ್ಯದ ಸಾಲದ ಮೊತ್ತ ₹8 ಲಕ್ಷ ಕೋಟಿಗೆ ತಲುಪಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

SIR ಅಕ್ರಮ | ಜ್ಞಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

7 ದಿನಗಳಲ್ಲಿ 8 ಇ-ಮೇಲ್‌ಗಳು; ಆದರೂ ಮತಪಟ್ಟಿಯಲ್ಲಿ ಉಳಿಯಲಿಲ್ಲ...

90 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ 97 ಮತದಾರರು ಎಂಬ ಸಂಖ್ಯೆ ಅತಿ ಚಿಕ್ಕದಾಗಿ ಕಾಣಬಹುದು. ಆದರೆ, ಗೋವಾದ ಈ 97 ಮತದಾರರ ಪ್ರಕರಣವು ಚುನಾವಣಾ ಆಯೋಗದ ಕಾರ್ಯವಿಧಾನ,...

ಮತದಾರರ ಪಟ್ಟಿ: ನಿರ್ಧಾರ ತೆಗೆದುಕೊಳ್ಳುವುದು, ಜಾರಿಗೆ ತರುವುದು ಯಾರು?

ಗೋವಾದ 97 ಮತದಾರರ ಪ್ರಕರಣ ಚುನಾವಣಾ ವ್ಯವಸ್ಥೆಯ ಮುಂದಿರುವ ಒಂದು ಮಹತ್ವದ ಪ್ರಶ್ನೆಯನ್ನು ಎದುರುತರುತ್ತದೆ: ಸ್ಥಳೀಯ ಮಟ್ಟದ ಮತದಾರರ ನೋಂದಣಿ ಅಧಿಕಾರಿಗಳು (ERO) ದಾಖಲೆಗಳನ್ನು ಪರಿಶೀಲಿಸಿ ಅಂತಿಮ ಪಟ್ಟಿಯಲ್ಲಿ ಸೇರಿಸಲು ಅರ್ಹರೆಂದು ಕಂಡುಕೊಂಡ...

“ಬರ ಪರಿಹಾರ ನೀಡಲು ಹಣದ ಕೊರತೆಯಿದೆ ಎಂದು ಹಣಕಾಸು ಇಲಾಖೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರೂ, ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸುಮಾರು ₹32 ಸಾವಿರ ಕೋಟಿ ಘೋಷಣೆ ಮಾಡಲಾಗಿದೆ. ಇದು ಜನರಿಗೆ ಭರವಸೆ ಮೂಡಿಸುವ ಪ್ರಯತ್ನವಷ್ಟೇ ಎಂದು ಟೀಕಿಸಿದರು.

“ರಸ್ತೆಗಳ ಅಭಿವೃದ್ಧಿಗೆ ₹10 ಸಾವಿರ ಕೋಟಿ ನೀಡುವುದಾಗಿ ಸರ್ಕಾರ ಘೋಷಿಸಿದೆ. ಆದರೆ, ರಾಜ್ಯದ ಆರ್ಥಿಕ ಪರಿಸ್ಥಿತಿ ಗಂಭೀರವಾಗಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಹಾಗೂ ರೈತರು ಮತ್ತು ಬಡವರಿಗೆ ಪರಿಹಾರ ನೀಡಲು ಸರ್ಕಾರದ ಬಳಿ ಹಣವಿಲ್ಲ. ವಿಕಲಚೇತನರು, ವೃದ್ಧರು ಹಾಗೂ ವಿಧವೆಯರಿಗೆ ಪಿಂಚಣಿ ಸೇರಿದಂತೆ ವಿವಿಧ ಸೌಲಭ್ಯಗಳ ಪಾವತಿಯಲ್ಲಿ ವಿಳಂಬವಾಗುತ್ತಿದೆ. ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಜಾಹೀರಾತುಗಳ ಮೂಲಕ ಆಡಳಿತ ನಡೆಸುತ್ತಿದೆ” ಎಂದು ದೂರಿದರು.

Advertisements

ಶಿಕ್ಷಣ ಇಲಾಖೆಯಲ್ಲಿಯೂ ಶಾಲಾ ಮಕ್ಕಳಿಗೆ ವಿತರಿಸಿರುವ ಶೂ ಮತ್ತು ಸಾಕ್ಸ್‌ಗಳ ಗುಣಮಟ್ಟದ ಬಗ್ಗೆ ಪ್ರಶ್ನೆಗಳಿವೆ. ಶಿಕ್ಷಕರ ನೇಮಕಾತಿ ಹಾಗೂ ವೇತನ ಪಾವತಿಗೂ ಸಮಸ್ಯೆಯಾಗಿದ್ದು, ಯುವಕರಿಗೆ ಉದ್ಯೋಗ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ. ರಾಜ್ಯದ ನೈಜ ಆರ್ಥಿಕ ಪರಿಸ್ಥಿತಿಯನ್ನು ಜನರ ಮುಂದಿಡಲು ಮುಖ್ಯಮಂತ್ರಿ ಶ್ವೇತಪತ್ರ ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ : ಬೀದರ್‌ | ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಘಟಕದ ಪ್ರಮುಖರಾದ ರಾಜಶೇಖರ ನಾಗಮೂರ್ತಿ, ಬಾಬು ವಾಲಿ, ಬಾಬುರಾವ ಕಾರುಬಾರಿ, ರಾಜರೆಡ್ಡಿ, ಬಸವರಾಜ ಪವಾರ, ಮಹೇಶ್ವರ ಸ್ವಾಮಿ, ರಾಜಕುಮಾರ ಪಾಟೀಲ ನೇಮತಾಬಾದ, ರಾಜಕುಮಾರ ಚಿದ್ರಿ, ಸಂಗಮೇಶ ನಾಸಿಗಾರ, ಸೋಮಶೇಖರ ಪಾಟೀಲ ಗಾದಗಿ, ಶಶಿ ಹೊಸಳ್ಳಿ, ದೀಪಕ ಗಾದಗೆ, ರಾಜೇಂದ್ರ ಪೂಜಾರಿ, ಅಶೋಕಕುಮಾರ ಕರಂಜಿ, ಸಂಗಮೇಶ ಗುಮ್ಮೆ, ರೋಷನ್ ವರ್ಮಾ, ಸುನೀಲ ಗೌಳಿ, ವಿಶ್ವನಾಥ ಪಾಟೀಲ ಮೊಗದಾಳ, ಚಂದು ಪಾಟೀಲ, ಗುರುನಾಥ ಜ್ಯಾಂತಿಕರ್, ಭೂಷಣ ಪಾಠಕ್, ವಿಕ್ರಮ ಮುದಾಳೆ, ಮಹೇಶ ಪಾಲಂ, ನವೀನ ಚಿದ್ರೆ, ನರೇಶ ಗೌಳಿ, ವೀರಯ್ಯ ಸ್ವಾಮಿ, ಗೋಪಾಲ, ಲುಂಬಿಣಿ ಗೌತಮ್, ಹಣಮಂತ ಬುಳ್ಳಾ, ಶ್ರೀನಿವಾಸ ಚೌದರಿ, ಗಣೇಶ ಭೋಸ್ಲೆ, ಬಸವರಾಜ ಮೂಲಗೆ ನೌಬಾದ ಸೇರಿದಂತೆ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

IIT ಬಾಂಬೆ ವಿದ್ಯಾರ್ಥಿ ಸಾಹಿಲ್‌ ಆತ್ಮಹತ್ಯೆ ಪ್ರಕರಣ | ಪೋಷಕರ ಬೆಂಬಲಕ್ಕೆ ನಿಂತ ರಾಹುಲ್‌ ಗಾಂಧಿ

IIT ಬಾಂಬೆ ವಿದ್ಯಾರ್ಥಿ ಸಾಹಿಲ್‌ ವಕೋಡೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌...

ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಹಸಿರು ನಿಶಾನೆ; ಚಾಲಕರ ಸಂಘದಿಂದ ಸುಪ್ರೀಂಗೆ ಮೇಲ್ಮನವಿ

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಹಸಿರು ನಿಶಾನೆ ತೋರಿಸಿದ್ದ ಹೈಕೋರ್ಟ್ ತೀರ್ಪು...

EC ಒಳಜಗಳ | ಗ್ಯಾನೇಶ್‌ ಕುಮಾರ್‌ ಎಡವಟ್ಟುಗಳಿಗೆ ಆಕ್ಷೇಪಗಳ ಸರಮಾಲೆ

SIR ವಿಚಾರದಲ್ಲಿ ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯ ಬಹಿರಂಗಗೊಂಡ ಬೆನ್ನಲ್ಲೇ, ಮುಖ್ಯ ಚುನಾವಣಾ...

ಏಷ್ಯನ್ ಗೇಮ್ಸ್: ಜಪಾನ್ ಅಂಗಳದಲ್ಲಿ ಭಾರತದ ಭರ್ಜರಿ ಪ್ರದರ್ಶನ; ಶೂಟರ್‌ಗಳ ಕಮಾಲ್, ಕ್ರಿಕೆಟ್‌ನಲ್ಲಿ ಮಿನುಗಿದ ಚಿನ್ನ

ಜಪಾನ್‌ನ ಐಚಿ–ನಾಗೋಯಾದಲ್ಲಿ ಅತ್ಯಂತ ಅದ್ದೂರಿಯಾಗಿ ನಡೆಯುತ್ತಿರುವ 20ನೇ ಆವೃತ್ತಿಯ ಏಷ್ಯನ್ ಗೇಮ್ಸ್...