ಬೀದರ್‌ | ಬಸ್ ಪ್ರಯಾಣ, ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Date:

ರಾಜ್ಯ ಕಾಂಗ್ರೆಸ್ ಸರ್ಕಾರ ಬಸ್ ಪ್ರಯಾಣ ದರ ಹಾಗೂ ಹಾಲಿನ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಬೀದರ್ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ನಗರದ ಕೇಂದ್ರ ಬಸ್ ನಿಲ್ದಾಣದ ಎದುರು ಪ್ರತಿಭಟನೆ ನಡೆಸಲಾಯಿತು.

- Advertisement -

ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ, “ರಾಜ್ಯ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಜನರಿಗೆ ಹಲವು ಭರವಸೆಗಳನ್ನು ನೀಡಿತ್ತು. ಆದರೆ ಅಧಿಕಾರಕ್ಕೆ ಬಂದ ಬಳಿಕ ಒಂದಿಲ್ಲೊಂದು ರೀತಿಯಲ್ಲಿ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹಾಕುತ್ತಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

“ತೈಲ ದರ ಏರಿಕೆಯಿಂದ ಬಸ್ ಪ್ರಯಾಣ ದರ ಹೆಚ್ಚಳ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಸಮರ್ಥನೆ ಮಾಡಿಕೊಳ್ಳುತ್ತದೆ. ಆದರೆ, ಸರ್ಕಾರ ಶೇ 25-30ರಷ್ಟು ದರ ಹೆಚ್ಚಳ ಮಾಡಿದೆ. ಪುಕ್ಸಟ್ಟೆ ಗ್ಯಾರಂಟಿ ಕೊಟ್ಟು ಸರ್ಕಾರ ದಿವಾಳಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಮಾತನಾಡಿ, “ಈಗಾಗಲೇ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ವೇಳೆ ಬಸ್ ಪ್ರಯಾಣ ದರ ಏರಿಕೆಯಿಂದ ಬರೆ ಎಳೆದಂತಾಗಿದೆ. ಒಂದು ಕೈಯಲ್ಲಿ ಗ್ಯಾರಂಟಿ ಹೆಸರಿನಲ್ಲಿ ಹಣ ಕೊಟ್ಟು ಮತ್ತೊಂದು ಕೈಯಿಂದ ಕಿತ್ತುಕೊಳ್ಳುತ್ತಿರುವುದು ಖಂಡನೀಯ” ಎಂದರು.

ಬಸ್ ಪ್ರಯಾಣ ದರ ಹಾಗೂ ಹಾಲಿನ ದರ ಹೆಚ್ಚಿಸಿರುವುದು ಸಾಮಾನ್ಯ ಜನರು, ವಿದ್ಯಾರ್ಥಿಗಳು, ಮಹಿಳೆಯರು, ಕಾರ್ಮಿಕರು ಹಾಗೂ ರೈತರಿಗೆ ಹೊರೆಯಾಗಿದೆ. ಸರ್ಕಾರ ಜನರ ಹಿತದೃಷ್ಟಿಯಿಂದ ದರ ಏರಿಕೆ ನಿರ್ಧಾರವನ್ನು ಮರುಪರಿಶೀಲಿಸಿ ಕೂಡಲೇ ಹಿಂಪಡೆಯಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನಾಕಾರರು ಕೈಯಲ್ಲಿ ಭಿತ್ತಿ ಪತ್ರ ಹಿಡಿದು ಬಸ್ ನಿಲ್ದಾಣದ ಒಳಗಡೆ ಮೆರವಣಿಗೆ ನಡೆಸಿದರು. ಬಳಿಕ ಬಸ್ ನಿಲ್ದಾಣದ ಮುಖ್ಯದ್ವಾರ ಎದುರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿಯ ಪ್ರಮುಖರಾದ ಈಶ್ವರಸಿಂಗ್ ಠಾಕೂರ್, ಶಶಿ ಹೊಸಳ್ಳಿ, ಗುರುನಾಥ ಜ್ಯಾಂತೇಕರ್, ಪೀರಪ್ಪ ಔರಾದೆ, ಚನ್ನಬಸವ ಬಳತೆ, ಸಂತೋಷ ರೆಡ್ಡಿ, ದೀಪಕ ಪಾಟೀಲ, ವಿಜಯಲಕ್ಷ್ಮಿ ಕೌಟಗೆ, ಪ್ರತೀಕ್ ಚಹ್ವಾಣ, ಬಸವರಾಜ ಪವಾರ್ ಸೇರಿದಂತೆ ಅನೇಕರಿದ್ದರು.

ಇದನ್ನೂ ಓದಿ : ಬೀದರ್‌ | ಪ್ರಥಮ ದಲಿತ ಬಂಡಾಯ ಸಮ್ಮೇಳನ ಸರ್ವಾಧ್ಯಕ್ಷರಿಗೆ ಆಹ್ವಾನ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶೇಷ ಶಿಕ್ಷಕರ ರಾಜ್ಯ ಪ್ರಶಸ್ತಿ: ದಾವಣಗೆರೆಯಲ್ಲಿ ಅರ್ಹರಿಂದ ಅರ್ಜಿ ಆಹ್ವಾನ

2026-27ನೇ ಸಾಲಿನಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈಯುತ್ತಿರುವ ಸಂಸ್ಥೆಗಳು, ವಿಕಲಚೇತನರ ಕ್ಷೇತ್ರದಲ್ಲಿ...

​’ಗೃಹಲಕ್ಷ್ಮಿ’ಗೆ ₹7,400 ಕೋಟಿ ಬಿಡುಗಡೆ, ಪಿಂಚಣಿಗೆ ಫಿಕ್ಸೆಡ್‌ ಡೇಟ್: ಸಿಎಂ ಡಿ.ಕೆ. ಶಿವಕುಮಾರ್

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 'ಗೃಹಲಕ್ಷ್ಮಿ' ಯೋಜನೆಯ...

ಹಿರಿಯ ಭಾಷಾಶಾಸ್ತ್ರಜ್ಞ, ವಿಮರ್ಶಕ ಡಾ. ಕೆ.ವಿ. ನಾರಾಯಣ ನಿಧನ

ಕನ್ನಡ ಸಾಹಿತ್ಯ, ಭಾಷೆ ಮತ್ತು ಸಂಸ್ಕೃತಿಯ ಲೋಕಕ್ಕೆ ತಮ್ಮ ಅಪೂರ್ವ ಕೊಡುಗೆ...

ಬೆಂಗಳೂರಿನಲ್ಲಿ ಪತ್ನಿಯ ಕುಟುಂಬದ 7 ಜನರನ್ನು ಒರಳು ಕಲ್ಲಿನಿಂದ ಜಜ್ಜಿ ಕೊಂದ ಕ್ಯಾಬ್ ಚಾಲಕ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 45 ವರ್ಷದ ಕ್ಯಾಬ್ ಚಾಲಕನೊಬ್ಬ ತನ್ನ ಪತ್ನಿಯ...