ಬೀದರ್‌ | ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು : ವಿಜಯೋತ್ಸವ

Date:

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಭಾರಿ ಗೆಲುವು ಸಾಧಿಸಿದ ಪ್ರಯುಕ್ತ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ನಗರದ ರಾಮ ಚೌಕ್‍ನಲ್ಲಿ ಸೋಮವಾರ ಪಟಾಕಿ ಸಿಡಿಸಿ, ಪರಸ್ಪರ ಸಿಹಿ ತಿನ್ನಿಸಿ ಸಂಭ್ರಮಿಸಿದರು.

- Advertisement -

ಬಿಜೆಪಿ ಮುಖಂಡ ರೇವಣಸಿದ್ದಪ್ಪ ಜಲಾದೆ ಮಾತನಾಡಿ, ʼಐದು ರಾಜ್ಯಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದೆ. ಪಶ್ಚಿಮ ಬಂಗಾಳದ ಜನ ಬಿಜೆಪಿಗೆ ಅಭೂತಪೂರ್ವ ಗೆಲುವು ನೀಡುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ. ಮುಕ್ತ, ನ್ಯಾಯ ಸಮ್ಮತ ಚುನಾವಣೆ ಹಾಗೂ ಹಿಂದೂಗಳ ಒಗ್ಗಟ್ಟಿನ ಪ್ರಯತ್ನದ ಪ್ರತಿಫಲ ಇದಾಗಿದೆʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...
BJP Vijayotsav At Ram Chowk Bidar

ʼದೇಶದ್ರೋಹಿ ಹಾಗೂ ಸಮಾಜಘಾತುಕ ಚಟುವಟಿಕೆಗಳ ಕಾರಣ ಪಶ್ಚಿಮ ಬಂಗಾಳ ಸರ್ಕಾರ ದೇಶಕ್ಕೆ ಆಘಾತಕಾರಿಯಾಗಿ ಪರಿಣಮಿಸಿತ್ತು. ಭ್ರಷ್ಟಾಚಾರ, ದಬ್ಬಾಳಿಕೆ ಸೇರಿ ಜನ ವಿರೋಧಿ ಆಡಳಿತದಿಂದ ಅಲ್ಲಿಯ ಜನ ಬೇಸತ್ತಿದ್ದರು. ಟಿಎಂಸಿಯನ್ನು ಕಿತ್ತೊಗೆದಿದ್ದರಿಂದ ಈಗ ಅವರಿಗೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದೆ. 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ದೇಶದ ಜನ ಬಿಜೆಪಿ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ನಿದರ್ಶನವಾಗಿದೆ’ ಎಂದರು.

ಮುಖಂಡರಾದ ಶ್ರೀರಾಮ ಅಂಬುರೆ, ರಾಜಕುಮಾರ ಬಿಜ್ಜಾ, ಶಿವು ಫುಲಸೆ, ಸಂಗಮೇಶ್ ನಾಸಿಗಾರ, ವಿಲಾಸ್ ಪಾಟೀಲ, ಜಾಧವ್, ಬಸವರಾಜ ಸ್ವಾಮಿ, ಶಿವಕಾಂತ ಪಾಟೀಲ ಮತ್ತಿತರ ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದೂ ಮುಖಂಡರು ಇದ್ದರು.

ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಸಂಭ್ರಮಾಚರಣೆ :

ದೇಶದ ಮೂರು ಪ್ರಮುಖ ರಾಜ್ಯಗಳಾದ ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿಯಲ್ಲಿ ಬಿಜೆಪಿ (ಎನ್‌ಡಿಎ) ಐತಿಹಾಸಿಕ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ಮನ್ನಾಏಖೇಳ್ಳಿ ಗ್ರಾಮದಲ್ಲಿ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ನೇತೃತ್ವದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.

ಶಾಸಕ ಶೈಲೇಂದ್ರ ಬೆಲ್ದಾಳೆ ಮಾತನಾಡಿ, ʼದೇಶದ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಹಾಗೂ ಗೃಹ ಮಂತ್ರಿ ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರ ಮತ್ತು ಕಾರ್ಯಕರ್ತರ ಪರಿಶ್ರಮದ ಫಲವಾಗಿ ಇಂದು ಮೂರು ರಾಜ್ಯಗಳಲ್ಲಿ ಈ ಭರ್ಜರಿ ಜಯ ಸಾಧಿಸಲು ಸಾಧ್ಯವಾಗಿದೆʼ ಎಂದು ಹೇಳಿದರು.

WhatsApp Image 2026 05 04 at 4.28.18 PM 1

ʼಇಂದು ನಾವು ಆಚರಿಸುತ್ತಿರುವ ಈ ವಿಜಯೋತ್ಸವ ಕೇವಲ ಗೆಲುವಿನ ಸಂಭ್ರಮವಲ್ಲ. ಇದು ಜನರ ಸೇವೆಗೆ ಸಿಕ್ಕ ಗೌರವ ಹಾಗೂ ಉತ್ತಮ ಆಡಳಿತಕ್ಕೆ ದೊರೆತ ಮನ್ನಣೆಯಾದಾಗಿದೆ. ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಸಹ ಬಿಜೆಪಿ ಅಧಿಕಾರಕ್ಕೆ ಬರಲಿದೆʼ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ʼಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ದೇಶ ವಿಶ್ವದ ವೇದಿಕೆಯಲ್ಲಿ ಎತ್ತರಕ್ಕೆ ಏರುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಂಘಟನೆ ಶಕ್ತಿಯಿಂದ ಪಕ್ಷ ಇನ್ನಷ್ಟು ಬಲಿಷ್ಠವಾಗಿದೆ. ಈ ಗೆಲುವು ಕೇವಲ ರಾಜಕೀಯ ಜಯವಲ್ಲ, ಇದು ಜನರ ವಿಶ್ವಾಸದ ಪ್ರತಿಫಲ. ಜನರು ಅಭಿವೃದ್ಧಿ, ಸುವ್ಯವಸ್ಥೆ ಮತ್ತು ಉತ್ತಮ ಆಡಳಿತವನ್ನು ಬೆಂಬಲಿಸಿದ್ದಾರೆ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆʼ ಎಂದರು.

ಪಕ್ಷದ ಮಂಡಲ ಅಧ್ಯಕ್ಷ ಗುರುನಾಥ ರಾಜಗೀರ, ಮುಖಂಡರಾದ ರಾಜರೆಡ್ಡಿ ಶಾಬಾದ, ಝರೆಪ್ಪಾ ಹಂದಿಕೇರಾ, ಬಸವರಾಜ ಬೋರಾಳ, ರವಿ ಬಾಲೆಬಾಯಿ, ರಾಜಕುಮಾರ ಪಾಂಚಾಳ, ಜಗನಾಥ್ ಮಜಗೆ, ಹೇಮಾ ತುಕ್ಕಾರೆಡ್ಡಿ, ಸಂತೋಷಿ ನಿಡವಂಚಾ, ಶಿಲ್ಪಾ ಭಕ್ತಕುಮಾರ, ಸುಜಾತಾ, ಸುನೀತಾ ಮಂಗಲಗಿ, ತಾಜೋದಿನ್, ವಿನೋದ ಕೋಟೆ. ಮೋಹನ ಕೆಳಕೇರಿ,  ಬಸು ಸಜ್ಜನಶೆಟ್ಟಿ, ಜಗನ್ನಾಥ್ ಪಂಡಿತ್, ಮಹಾದೇವ ಚಾಮಾ, ಸೈಯದ್ ಅಬೆದ್ ಅಲಿ, ಸಂಗ್ರಾಮ ಬಿರಾದಾರ, ಬಸವ ವಗ್ಗೆರ, ಚಾಂದಪಾಶ, ವಿಠಲ ಮರಕುಂದಾ, ಗಂಗರಾಮ, ಗಣೇಶ, ಉದಯ, ಗಣಪತಿ. ದತ್ತು, ಭರತ, ಮೇಘರಾಜ, ಸಂಗಮೇಶ,   ಮಹೇಶ, ಸಂತೋಷ ಕಾಟೆ, ಓಂಕಾರ ಮತ್ತಿತರರು ಪಾಲ್ಗೊಂಡಿದ್ದರು.

ಬೀದರ್‌ ನಗರದಲ್ಲಿ ಜಿಲ್ಲಾ ಬಿಜೆಪಿ ಸಂಭ್ರಮ

ಪಂಚ ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಬೀದರ್‌ ನಗರದ ಡಾ.ಬಿ.ಆರ್.‌ ಅಂಬೇಡ್ಕರ್‌ ವೃತ್ತದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್‌ ನೇತ್ರತ್ವದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

WhatsApp Image 2026 05 04 at 5.10.07 PM

ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಬಾಬು ವಾಲಿ, ಈಶ್ವರ ಸಿಂಗ್‌ ಠಾಕೂರ್‌, ಶಶಿ ಹೊಸಳ್ಳಿ, ರಾಜಶೇಖರ್‌ ನಾಗಮೂರ್ತಿ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ಮಹಿಳಾ ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್ ತಕ್ಕ ಪಾಠ

ಪಂಚರಾಜ್ಯಗಳ ಚುನಾವಣೆಯಲ್ಲಿ ಜನತೆ ಬಿಜೆಪಿಗೆ ಬೆಂಬಲ ಸೂಚಿಸಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಾಯಕತ್ವದ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.

ʼಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಅಕ್ರಮ ಪ್ರವೇಶಕಾರರಿಗೆ ಬೆಂಬಲ ನೀಡುತ್ತಿದ್ದ ದೇಶದ್ರೋಹಿ ಶಕ್ತಿಗಳನ್ನು ಜನತೆ ಅಧಿಕಾರದಿಂದ ದೂರವಿಟ್ಟಿದ್ದಾರೆ ಎಂದರು. ಶೇ 33ರಷ್ಟು ಮಹಿಳಾ ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್ ಹಾಗೂ ಅದರ ಮೈತ್ರಿ ಪಕ್ಷಗಳಿಗೆ ಜನತೆ ತಕ್ಕ ಪಾಠ ಕಲಿಸಿದ್ದಾರೆ‌ʼ ಎಂದು ಹೇಳಿದರು.

bhagavanth khuba bidar mp
ಭಗವಂತ ಖೂಬಾ

ಪಶ್ಚಿಮ ಬಂಗಾಳ, ಪುದುಚೇರಿ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಬಿಜೆಪಿ ಪೂರ್ಣ ಬಹುಮತ ಸಾಧಿಸಿದ್ದು, ಕೆರಳ ಮತ್ತು ತಮಿಳುನಾಡಿನಲ್ಲೂ ನಿರೀಕ್ಷೆಗೂ ಮೀರಿ ಜನಬೆಂಬಲ ದೊರೆತಿದೆ. ಮುಂದಿನ ದಿನಗಳಲ್ಲಿ ಈ ರಾಜ್ಯಗಳಲ್ಲೂ ಪಕ್ಷ ಇನ್ನಷ್ಟು ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದೇಶದ ಭದ್ರತೆ ದೃಷ್ಟಿಯಿಂದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ಅತ್ಯಂತ ಮಹತ್ವದ್ದಾಗಿದೆ. ಬಾಂಗ್ಲಾದೇಶ ಹಾಗೂ ರೋಹಿಂಗ್ಯಾಗಳಿಂದ ಸ್ಥಳೀಯರನ್ನು ರಕ್ಷಿಸುವ ಅಗತ್ಯವಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಗೆಲುವು ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು. ಪಕ್ಷದ ಸಂಸ್ಥಾಪಕರಲ್ಲಿ ಒಬ್ಬರಾದ ಡಾ.ಶ್ಯಾಮಪ್ರಸಾದ ಮುಖರ್ಜಿಯವರು ಹುಟ್ಟಿ ಬೆಳೆದ ನಾಡಲ್ಲಿ ಪಕ್ಷವು ಅಧಿಕಾರಕ್ಕೆ ಬಂದಿದ್ದು ಅತ್ಯಂತ ಸಂತಸದ ವಿಷಯವಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಬಿಸಿಲಿನ ತಾಪ : ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಪೂರೈಕೆ ಸಮಯ ಬದಲಾವಣೆ ಇಲ್ಲವೇ?

ʼರಾಜ್ಯದ ಉಪಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷವು ರಾಜ್ಯದ ಆಡಳಿತ ಮರೆತು, ಸ್ವತಃ ಮುಖ್ಯಮಂತ್ರಿ ಮತ್ತು ಸಂಪೂರ್ಣ ಕ್ಯಾಬಿನೇಟ್ ಸಚಿವರು ಪ್ರಚಾರ ಮಾಡಿದ್ದರು ಜೊತೆಗೆ ಕೋಟಿ ಕೋಟಿ ಹಣ ಸುರಿದು ಈ ಎರಡು ಸ್ಥಾನಗಳು ಗೆದ್ದಿದೆ, ಇದು ರಾಜ್ಯದ ಜನರಲ್ಲಿ ಕಾಂಗ್ರೇಸ್ ಪಕ್ಷದ ಬಗ್ಗೆ ಇರುವ ತಿರಸ್ಕಾರ ಭಾವನೆ ಮೂಡಿರುವುದು ಈ ಉಪಚುನಾವಣೆಯಿಂದ ಸ್ಪಷ್ಟವಾಗಿದೆ, ಇದು 2028ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲಿದೆ ಎನ್ನುವ ಮುನ್ಸೂಚನೆ ನೀಡುತ್ತಿವೆʼ ಎಂದು ಖೂಬಾ ಅಭಿಪ್ರಾಯಪಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...