ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕಾರ್ಯಕ್ಕೆ ನಿಯೋಜನೆಗೊಂಡ ಮತಗಟ್ಟೆ ಅಧಿಕಾರಿಯೊಬ್ಬರು (ಬಿಎಲ್‌ಒ) ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಭಾಲ್ಕಿ ಮೂಲದ ಸುನೀಲ್ (45) ಮೃತ ಬಿಎಲ್ ಒ. ಬೀದರ್ ತಾಲೂಕಿನ ಅಮಲಾಪುರ ಗ್ರಾಮದ 33ನೇ ಬೂತ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಬಳಿಕ ಕುಸಿದು ಬಿದ್ದಿದ್ದಾರೆ.
ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಸ್ಟಂಟ್ ಅಳವಡಿಸಲಾಗಿತ್ತು. ಜುಲೈ 4ರಂದು ಶುಕ್ರವಾರ ಮೃತಪಟ್ಟಿದ್ದಾರೆ. ಶನಿವಾರ ಅಂತ್ಯಕ್ರಿಯೆ ನಡೆದಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಬೀದರ್ | ಚನ್ನಬಸವ ಪಟ್ಟದ್ದೇವರು, ಪ್ರಭುರಾವ ಕಂಬಳಿವಾಲೆ ಪುಸ್ತಕ ಲೋಕಾರ್ಪಣೆ




