ಬೀದರ್‌ | ಪ್ರತ್ಯೇಕ ಮಹಿಳಾ ಮೀಸಲಾತಿ ಮಸೂದೆ ತನ್ನಿ : ಸಂಸದ ಸಾಗರ ಖಂಡ್ರೆ 

Date:

ಕೇಂದ್ರ ಸರಕಾರ ಮಂಡಿಸಿದ ಸಂವಿಧಾನ ತಿದ್ದುಪಡಿ ಮಸೂದೆ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿ ಈ ಮಸೂದೆಯನ್ನು ತಿರಸ್ಕರಿಸಿದೆ ಎಂದು ಸಂಸದ ಸಾಗರ ಖಂಡ್ರೆ ತಿಳಿಸಿದ್ದಾರೆ. 

- Advertisement -

ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಸರಕಾರ ತನ್ನ ರಾಜಕೀಯ ಅಜೆಂಡಾದ ಭಾಗವಾಗಿ ಕ್ಷೇತ್ರ ಮರುಹಂಚಿಕೆ (ಡಿಲಿಮಿಟೇಶನ್) ಮಸೂದೆಯನ್ನು ತರಲು ಪ್ರಯತ್ನಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

“ಈ ಮಸೂದೆ ನಿಜವಾಗಿ ಮಹಿಳಾ ಮೀಸಲಾತಿಗೆ ಸಂಬಂಧಿಸಿದದ್ದಲ್ಲ, ಕ್ಷೇತ್ರ ಮರುಹಂಚಿಕೆಗೆ ಸಂಬಂಧಿಸಿದದ್ದಾಗಿದೆ. ಕ್ಷೇತ್ರ ಮರುಹಂಚಿಕೆಯ ಮೂಲಕ ವಿಶೇಷವಾಗಿ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗುವ ಸಾಧ್ಯತೆಯಿದೆ. ಇದಲ್ಲದೆ, ಕೇಂದ್ರ ಸರಕಾರ ತನ್ನ ಇಚ್ಛೆಯಂತೆ ಕ್ಷೇತ್ರಗಳ ಗಡಿಗಳನ್ನು ಮರುರಚನೆ ಮಾಡುವ ಮೂಲಕ ರಾಜಕೀಯ ಹಾಗೂ ಚುನಾವಣಾ ಲಾಭ ಪಡೆಯುವ ಉದ್ದೇಶ ಹೊಂದಿದೆ” ಎಂದು ಆರೋಪಿಸಿದ್ದಾರೆ.

“ಇಂತಹ ಮರು ರಚನೆ ಕ್ರಮಗಳು ಈಗಾಗಲೇ ಅಸ್ಸಾಂ ಮತ್ತು ಜಮ್ಮು-ಕಾಶ್ಮೀರ ರಾಜ್ಯಗಳಲ್ಲಿಯೂ ಕಂಡುಬಂದಿವೆ. ಈ ಕಾರಣದಿಂದಲೇ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಯು ಈ ಮಸೂದೆಯನ್ನು ಬೆಂಬಲಿಸಿಲ್ಲ. ಸರಕಾರ ನಿಜವಾಗಿಯೂ ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲು ಬಯಸಿದರೆ, ಅದನ್ನು ಕ್ಷೇತ್ರ ಮರು ಹಂಚಿಕೆಯಿಂದ ಸಂಪೂರ್ಣವಾಗಿ ಬೇರ್ಪಡಿಸಿ, ಪ್ರತ್ಯೇಕ ಮಹಿಳಾ ಮೀಸಲಾತಿ ಮಸೂದೆಯನ್ನು ತರಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಸಾಂಸ್ಕೃತಿಕ ನಾಯಕ ಬಸವಣ್ಣ ಹೆಸರಿನ ಭಾವಚಿತ್ರ ಅಳವಡಿಸಿ

ಇಂತಹ ಮಸೂದೆಗೆ ಎಲ್ಲ ವಿರೋಧ ಪಕ್ಷಗಳಿಂದ ಏಕಮತ ಬೆಂಬಲ ದೊರೆಯಲಿದ್ದು, ಅದು ಸಂಸತ್ತಿನಲ್ಲಿ ಸುಗಮವಾಗಿ ಅಂಗೀಕರಿಸಲಾಗುತ್ತದೆ ಎಂದು ಪ್ರಕಟಣೆ ಮೂಲಕ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನೆಹರೂ–ಗಾಂಧಿ, ಯಾದವ್ ಕುಟುಂಬಗಳ ನಾಯಕತ್ವ ಬೇಡ’: ಒವೈಸಿ ಹೇಳಿಕೆಗೆ ವಿಪಕ್ಷಗಳ ತೀವ್ರ ಆಕ್ರೋಶ

ಮುಸ್ಲಿಂ ಯುವಕರು ನೆಹರೂ–ಗಾಂಧಿ ಮತ್ತು ಯಾದವ್ ಕುಟುಂಬಗಳ ರಾಜಕೀಯ ನಾಯಕತ್ವವನ್ನು ಅನುಸರಿಸುವುದನ್ನು...

ಬೀದರ್‌ | ಗಾಯಕ ದೇವದಾಸಗೆ ಒಲಿದ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ

ಕರ್ನಾಟಕ ಜಾನಪದ ಅಕಾಡೆಮಿಯು 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...

ಬಡತನ ಮೆಟ್ಟಿ ಬಿಲ್ಲುಗಾರಿಕೆ ಒಲಿಸಿಕೊಂಡ ದೇವಮ್ಮ: ಒಲಂಪಿಕ್ಸ್‌ ಕನಸಿಗೆ ಸ್ಪೂರ್ತಿ ತುಂಬಿದ ಎಂ.ಬಿ ಪಾಟೀಲ್‌

ಬಡತನದ ನಡುವೆಯೂ ಬಿಲ್ಲುಗಾರಿಕೆಯಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಕಲ್ಯಾಣ ಕರ್ನಾಟಕದ ಪ್ರತಿಭೆ...

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ ಲಾರೆನ್ಸ್ ಬಿಷ್ಣೋಯ್‌ವರೆಗೆ!

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ...