ಬೀದರ್‌ | ಬಿಎಸ್‌ಎಸ್‌ಕೆ ಪುನಾರಂಭ, ರೈತರ ಸಾಲಮನ್ನಾಕ್ಕೆ ಸಂಯುಕ್ತ ಕಿಸಾನ್‌ ಮೋರ್ಚಾ ಆಗ್ರಹ

Date:

ಬಿಎಸ್‌ಎಸ್‌ಕೆ ಪುನಾರಂಭ, ಸಾಲಮನ್ನಾ ಸೇರಿದಂತೆ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಕಿಸಾನ ಮೋರ್ಚಾದ ಪ್ರಮುಖರು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಸೋಮವಾರ ಮನವಿ ಸಲ್ಲಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

- Advertisement -

2025ರ ಅಕ್ಟೋಬರ್ 12ರಿಂದ 18ರವರೆಗೆ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು. ರೈತರ ಬೇಡಿಕೆಗಳಿಗೆ ಸ್ಪಂದಿಸಿ ಸಚಿವರ ಭರವಸೆಯ ಮೇರೆಗೆ ಧರಣಿಯನ್ನು ಹಿಂಪಡೆಯಲಾಗಿದ್ದರೂ, ಹಲವು ಪ್ರಮುಖ ಸಮಸ್ಯೆಗಳು ಇನ್ನೂ ಬಗೆಹರಿಯದೆ ಉಳಿದಿವೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕಬ್ಬು ಪೂರೈಸಿದ ರೈತರಿಗೆ ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್‌ ಕಬ್ಬಿಗೆ ₹2,950 ಪಾವತಿಸುವುದು, ಬೀದರ ಸಹಕಾರ ಸಕ್ಕರೆ ಕಾರ್ಖಾನೆಯನ್ನು (ಬಿಎಸ್‌ಎಸ್‌ಕೆ) ಪುನರಾರಂಭಿಸಿ ಸರ್ಕಾರದಿಂದ ವಿಶೇಷ ಅನುದಾನ ಒದಗಿಸುವಂತೆ ಶಿಫಾರಸು ಮಾಡಬೇಕು. ರೈತರ ಸಾಲಮನ್ನಾ, ರೈತರಿಗೆ ₹6 ಲಕ್ಷದವರೆಗೆ ಬಡ್ಡಿರಹಿತ ಸಾಲ ಸೌಲಭ್ಯ, ಖರೀಫ್ ಹಂಗಾಮಿಗೆ ಅಗತ್ಯ ಬೀಜ ಮತ್ತು ಗೊಬ್ಬರವನ್ನು ಪಿಕೆಪಿಎಸ್ ಮುಖಾಂತರ ಪೂರೈಸುವುದು. ನಕಲಿ ಬೀಜ ಹಾಗೂ ಗೊಬ್ಬರ ಮಾರಾಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಸಕ್ಕರೆಯ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಲ್‌ಗೆ ₹5 ಸಾವಿರ ನಿಗದಿಪಡಿಸುವುದು ಹಾಗೂ ಕಾರಂಜಾ ಆಣೆಕಟ್ಟಿನ ಕಾಲುವೆಗಳ ಮೂಲಕ ರೈತರ ಹೊಲಗಳಿಗೆ ನೀರು ಹರಿಸುವಂತೆ ಕ್ರಮ ಕೈಗೊಳ್ಳಬೇಕು. ಈ ಎಲ್ಲಾ ಬೇಡಿಕೆಗಳನ್ನು ಶೀಘ್ರ ಈಡೇರಿಸದಿದ್ದರೆ ತೀವ್ರ ಹೋರಾಟ ಕೈಗೊಳ್ಳುವುದಾಗಿ ಸಂಯುಕ್ತ ಕಿಸಾನ ಮೋರ್ಚಾ ಎಚ್ಚರಿಸಿದೆ.

ಇದನ್ನೂ ಓದಿ : ಉಳಿದ ಅವಧಿಯನ್ನೂ ಸಿದ್ದರಾಮಯ್ಯರೇ ಪೂರೈಸುತ್ತಾರೆ : ಪರಮೇಶ್ವರ್‌

ಸಂಯುಕ್ತ ಕಿಸಾನ್‌ ಮೋರ್ಚಾದ ಪ್ರಮುಖರಾದ ಶಿವರಾಯ ಮುದಾಳೆ, ಮಲ್ಲಿಕಾರ್ಜುನ ಸ್ವಾಮಿ, ಮಾರುತಿ ಬೌದ್ಧೆ, ಬಾಬುರಾವ ಹೊನ್ನಾ, ಶಿವರಾಜ ಪಾಟೀಲ್ ಅತಿವಾಳ, ಬಸವರಾಜ ಅಷ್ಟೂರೆ, ವಿಠಲರೆಡ್ಡಿ, ಕೊಂಡಿಬಾ ಪಾಂಡ್ರೆ, ಶಾಂತಮ್ಮ ಮೂಲಗೆ, ವೀರಶೆಟ್ಟಿ ವಟಂಬೆ, ನಾಗಶೆಟ್ಟೆಪ್ಪಾ ಲಂಜವಾಡೆ, ನಜೀರ ಅಹ್ಮದ್, ಎಂ.ಡಿ.ಖಮರ್ ಪಟೇಲ್, ನನ್ನೆಸಾಬ್, ಎಂ.ಡಿ. ಶಫಾಯತ್ ಅಲಿ, ಜೈಶೀಲಕುಮಾರ, ಅರುಣ ಪಟೇಲ್, ವೀರಾರೆಡ್ಡಿ, ವಿಠಲರಾವ ಮೇತ್ರೆ, ಬಾವುರಾವ ನೆಲವಾಡೆ ಹಾಗೂ ರಾಜೇಂದ್ರ ಪಾಟೀಲ್ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೋಯಾಬೀನ್ ಖರೀದಿಗೆ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...

ಬೀದರ್‌ | ಬೈಕ್ ಅಪಘಾತ: ಇಬ್ಬರು ಯುವಕರು ಸಾವು

ನೆರೆಯ ತೆಲಂಗಾಣದ ಸಂಗಾರೆಡ್ಡಿ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಬೀದರ್‌ | ನ.28, 29ರಂದು ಅನುಭವ ಮಂಟಪ ಉತ್ಸವ : ತುಮಕೂರು ಸಿದ್ಧಗಂಗೆ ಶ್ರೀಗಳಿಗೆ ಆಹ್ವಾನ

ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪ ಪರಿಸರದಲ್ಲಿ ನವೆಂಬರ್ 28...