ಬೀದರ್‌ | ಬಲಗೈ ಸಮುದಾಯದ ಹೋರಾಟಗಾರರ ಮೇಲೆ ಪ್ರಕರಣ : ಡಿವಿಪಿ ಖಂಡನೆ

Date:

ಒಳಮೀಸಲಾತಿ ಜಾರಿಯಿಂದ ಬಲಗೈ ಸಮುದಾಯದ ವಿದ್ಯಾರ್ಥಿಗಳಿಗೆ ಅನ್ಯಾಯ ಆಗುತ್ತಿರುವುದನ್ನು ಖಂಡಿಸಿ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದಲ್ಲಿ ಪ್ರತಿಭಟನೆ ನಡೆಸಿದ ಬಲಗೈ ಸಮುದಾಯದ ಹೋರಾಟಗಾರರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿರುವ ಪ್ರಕರಣ ಕೂಡಲೇ ಹಿಂಪಡೆಯಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಬೀದರ ಜಿಲ್ಲಾ ಘಟಕ ಆಗ್ರಹಿಸಿದೆ.

- Advertisement -

ಈ ಸಂಬಂಧ ಸೋಮವಾರ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಲಿತ ವಿದ್ಯಾರ್ಥಿ ಪರಿಷತ್ತಿನ ಜಿಲ್ಲಾ ಸಂಚಾಲಕ ಸಂದೀಪ ಕಾಂಟೆ ಮಾತನಾಡಿ, ʼಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಇತ್ತೀಚೆಗೆ ಸರ್ಕಾರ ಜಾರಿಗೆ ತಂದ ಒಳ ಮೀಸಲಾತಿ ಆದೇಶದಲ್ಲಿ ಬಲಗೈ ಸಮುದಾಯದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ಹಿನ್ನಡೆಯುಂಟಾಗುವ ರೀತಿಯಲ್ಲಿ ಕ್ರಮ ಕೈಗೊಂಡಿರುವುದನ್ನು ಖಂಡಿಸಿ ಫೆ.19 ದಿಲೀಪ ಸಿದ್ದಪ್ಪಾಜಿ ಮತ್ತು ಎಸ್.ಸಿದ್ದಪ್ಪ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಈ ಪ್ರತಿಭಟನೆಯಲ್ಲಿ ಸುಮಾರು ಎರಡು ಸಾವಿರಕ್ಕೂ ಅಧಿಕ ಜನರು ಭಾಗವಹಿಸಿದ್ದರು.ಆದರೆ ಪ್ರತಿಭಟನೆ ಶಾಂತಿಯುತವಾಗಿ ನಡೆಸಿಲ್ಲ ಎಂಬ ಆರೋಪದಡಿ ಪ್ರಕರಣ ದಾಖಲಿಸಲಾಗಿದೆʼ ಎಂದು ತಿಳಿಸಿದರು.

ʼಒಳ ಮೀಸಲಾತಿ ಆದೇಶದಲ್ಲಿ ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಬಲಗೈ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ಮರು ಆದೇಶ ಹೊರಡಿಸಬೇಕೆಂಬುದು ಪ್ರತಿಭಟನೆಯ ಉದ್ದೇಶ ಆಗಿತ್ತು. ಈ ವೇಳೆ ಕೆಲವು ಹೋರಾಟಗಾರರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುವ ಸಲುವಾಗಿ ಮುಖ್ಯಮಂತ್ರಿಗಳು, ಗೃಹ ಸಚಿವರು ಹಾಗೂ ಸಮಾಜ ಕಲ್ಯಾಣ ಸಚಿವರ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ಆದರೆ ಶಾಂತಿಯುತವಾಗಿ ಪ್ರತಿಭಟನೆ ಶಾಂತಿಯುತವಾಗಿ ನಡೆಸಿಲ್ಲʼ ಎಂಬ ಕ್ಷುಲಕ ಕಾರಣ ನೀಡಿ ಪ್ರಕರಣ ದಾಖಲಿಸಿರುವುದು ನಾಚಿಕೆಗೇಡಿನ ಸಂಗತಿʼ ಎಂದು ದಲಿತ ವಿದ್ಯಾರ್ಥಿ ಪರಿಷತ್ ಖಂಡಿಸಿದೆ.

ಹೋರಾಟಗಾರರಾದ ದಿಲೀಪ ಸಿದ್ದಪ್ಪಾಜಿ ಮತ್ತು ಎಸ್.ಸಿದ್ದಪ್ಪ ಅವರ ಮೇಲಿನ ಪ್ರಕರಣಗಳನ್ನು ತಕ್ಷಣವೇ ಹಿಂಪಡೆಯಬೇಕು. ಇಲ್ಲವಾದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮುಂದಿನ ಹೋರಾಟ ರೂಪಿಸಲಾಗುವುದುʼ ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.

ಇದನ್ನೂ ಓದಿ : ಬೀದರ್‌ | ಮಾಧ್ಯಮಗಳಲ್ಲಿ ಮಹಿಳೆಯರು ಹೆಚ್ಚು ತೊಡಗಿಕೊಳ್ಳಲಿ : ಬಸವರಾಜ ಹೊರಟ್ಟಿ

ಈ ಸಂದರ್ಭದಲ್ಲಿ ದಲಿತ್‌ ವಿದ್ಯಾರ್ಥಿ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶೀ ರಮೇಶ ಮಾಲೆ, ಉಪಾಧ್ಯಕ್ಷ ಮಹೇಂದ್ರಕುಮಾರ ಹೊಸಮನಿ, ಜಿಲ್ಲಾ ಕಾರ್ಯದರ್ಶಿ ಅನೀಲ ಮಡ್ಡೆ, ಬಹುಜನ ಯುತ್‌ ಪ್ಯಾಂಥರ್‌ ಜಿಲ್ಲಾಧ್ಯಕ್ಷ ಜನಾರ್ಧನ ದೀನೆ, ಸಾಯಿ ಕೌರವ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್ | ಶೋಷಿತ ಸಮುದಾಯಗಳ ರಾಜಕೀಯ ಜಾಗೃತಿಗೆ ಶ್ರಮಿಸಿದ ಕಾನ್ಶಿರಾಂ

ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ರಾಜಕೀಯ ಹಕ್ಕುಗಳಿಗಾಗಿ ಹೋರಾಟ ರೂಪಿಸಿ, ಬಹುಜನ...

ಹುಮನಾಬಾದ್ ತಾಲೂಕು ಟೋಕರೆ ಕೋಳಿ ಸಮಾಜ ಸಂಘದ ಅಧ್ಯಕ್ಷರಾಗಿ ಸಂತೋಷ ಸಂಗಮ ಆಯ್ಕೆ

ಬೀದರ್‌ ಜಿಲ್ಲೆಯ ಹುಮನಾಬಾದ್ ತಾಲೂಕು ಎಸ್‌ಟಿ ಟೋಕರೆ ಕೋಳಿ ಸಮಾಜ ಸಂಘದ...

ಬೀದರ್‌ | ಹೆಕ್ಟೇರ್‌ಗೆ ₹35 ಸಾವಿರ ಬರ ಪರಿಹಾರ ನೀಡಲು ಆಗ್ರಹ

ಬರದಿಂದಾಗಿ ಬೆಳೆ ಹಾನಿಗೊಳಗಾದ ಬೀದರ್ ಜಿಲ್ಲೆಯ ರೈತರಿಗೆ ಮಹಾರಾಷ್ಟ್ರ ಮಾದರಿಯಲ್ಲಿ ಹೆಕ್ಟೇರ್‌ಗೆ...