ಬೀದರ್‌ | ವಿಬಿ-ಜಿ ರಾಮ್‌ ಜಿ ಕಾಮಗಾರಿ ಸ್ಥಳಕ್ಕೆ ಸಿಇಒ ಭೇಟಿ; ಪರಿಶೀಲನೆ

Date:

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಅವರು ಶುಕ್ರವಾರ ತಾಲೂಕಿನ ಧೂಪತಮಹಾಗಾಂವ ಗ್ರಾಮದಲ್ಲಿ ವಿಬಿ-ಜಿ ರಾಮ್‌ ಜಿ ಯೋಜನೆಯಡಿ ನಡೆಯುತ್ತಿರುವ ಸಿಸಿಟಿ (ಕಾಂಟೂರ್ ಟ್ರೆಂಚ್) ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

ಬಳಿಕ ಮಾತನಾಡಿ, “ವಿಬಿ-ಜಿ ರಾಮ್ ಜಿ ಯೋಜನೆಯು ಗ್ರಾಮೀಣ ಜನರಿಗೆ ಉದ್ಯೋಗ ಕಲ್ಪಿಸುವುದರ ಜೊತೆಗೆ ಜಲ ಸಂರಕ್ಷಣೆ, ಮಣ್ಣಿನ ಸಂರಕ್ಷಣೆ ಹಾಗೂ ಪರಿಸರ ಸಂರಕ್ಷಣೆಗೆ ಪೂರಕವಾಗುವ ಶಾಶ್ವತ ಆಸ್ತಿಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಕೆಲಸಕ್ಕಾಗಿ ವಲಸೆ ಹೋಗದೆ, ನಿಮ್ಮೂರಲ್ಲೇ ಕೆಲಸ ಮಾಡಿ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

“ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರು ಉದ್ಯೋಗಕ್ಕಾಗಿ ವಲಸೆ ಹೋಗುವ ಅಗತ್ಯವಿಲ್ಲ. ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ನಿಮ್ಮೂರಲ್ಲೇ ಸಾಕಷ್ಟು ಕೆಲಸದ ಅವಕಾಶಗಳನ್ನು ಕಲ್ಪಿಸಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು. ವಿಬಿ-ಜಿ ರಾಮ್ ಜಿ ಯೋಜನೆಯಡಿ ದಿನಗೂಲಿ ಮೊತ್ತವನ್ನು 370 ರಿಂದ 382ಕ್ಕೆ ಹೆಚ್ಚಿಸಲಾಗಿದೆ. ವಾರ್ಷಿಕ ಉದ್ಯೋಗಾವಕಾಶವನ್ನು 100 ದಿನಗಳಿಂದ 125 ದಿನಗಳಿಗೆ ವಿಸ್ತರಿಸಲಾಗಿದ್ದು, ಗ್ರಾಮೀಣ್ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ಹೊಂದಿರುವ ಕುಟುಂಬವು ವರ್ಷಕ್ಕೆ 47,750ರವರೆಗೆ ಆದಾಯ ಗಳಿಸಲು ಅವಕಾಶ ಕಲ್ಪಿಸಲಾಗಿದೆ” ಎಂದು ಮಾಹಿತಿ ನೀಡಿದರು.

“ವಿಬಿ-ಜಿ ರಾಮ್ ಜಿ ಯೋಜನೆಯಡಿ ಹೆಚ್ಚು ಮಾನವ ದಿನಗಳ ಸೃಜನೆಗೆ ಒತ್ತು ನೀಡಬೇಕು. ಅರ್ಹ ಗ್ರಾಮೀಣ ಕುಟುಂಬಗಳಿಗೆ ನಿರಂತರ ಉದ್ಯೋಗಾವಕಾಶ ಕಲ್ಪಿಸುವ ಮೂಲಕ ಯೋಜನೆಯ ಸೌಲಭ್ಯಗಳು ಪ್ರತಿಯೊಬ್ಬ ಫಲಾನುಭವಿಗೂ ತಲುಪುವಂತೆ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

WhatsApp Image 2026 08 07 at 1.27.08 PM

ಇದೇ ಸಂದರ್ಭದಲ್ಲಿ ಕಾಮಗಾರಿ ಸ್ಥಳದಲ್ಲಿ ಕೂಲಿಕಾರ್ಮಿಕರೊಂದಿಗೆ ಸಂವಾದ ನಡೆಸಿದ ಸಿಇಒ ಅವರು, ಕೂಲಿಕಾರ್ಮಿಕರ ಸಮಸ್ಯೆಗಳನ್ನು ಆಲಿಸಿ ಆರೋಗ್ಯ ವಿಚಾರಿಸಿದರು. ಬಳಿಕ ಕೂಲಿಕಾರ್ಮಿಕರಿಗೆ ಬಾಳೆಹಣ್ಣು ವಿತರಿಸಿದರು.

ಇದನ್ನೂ ಓದಿ : SIR | ಕಲ್ಯಾಣ ಕರ್ನಾಟಕದಲ್ಲಿ 18.11 ಲಕ್ಷ ಮತದಾರರು ಡಿಲೀಟ್ ಆಗುವ ಆತಂಕ!

ಜಿಲ್ಲಾ ಪಂಚಾಯತ್ ಸಹಾಯಕ ನಿರ್ದೇಶಕ (ಆಡಳಿತ) ಜಯಪ್ರಕಾಶ, ಔರಾದ್ ತಾಲೂಕು ಪಂಚಾಯತ್ ಇಒ ಕಿರಣ ಪಾಟೀಲ್, ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ಎಡಿಪಿಸಿ ದೀಪಕ ಕಡಿಮನಿ, ಗ್ರಾಮ ಪಂಚಾಯತ್ ಪಿಡಿಒ ನಂದಕಿಶೋರ, ತ್ರಾಂತಿಕ ಸಂಯೋಜಕ ಆನಂದ ಕಾಳಗಾಪೂರೆ, ತಾಂತ್ರಿಕ ಸಹಾಯಕ ಶರಣಪ್ಪ, ಐಇಸಿ ಅಂಬಾದಾಸ ಪಾಟೀಲ್, ಗ್ರಾಪಂ ಸಿಬ್ಬಂದಿ, ಕೂಲಿಕಾರ್ಮಿಕರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಸುಪ್ರೀಂ’ ನಲ್ಲಿ ವಂದೇ ಮಾತರಂ ವಿಚಾರಣೆ-  ಟಿ.ಎಂ.ಕೃಷ್ಣ ನಕ್ಸಲೈಟ್ ಎಂದು ಜರೆದ ಸಾಲಿಸಿಟರ್ ಜನರಲ್

ಮಂಗಳವಾರ ಸುಪ್ರೀಮ್ ಕೋರ್ಟಿನಲ್ಲಿ ವಿಚಾರಣೆಯ ಸಂದರ್ಭದಲ್ಲಿ ಸಾಲಿಸಿಟರ್ ಜನರಲ್  ತುಷಾರ್ ಮೆಹ್ತಾ...

‘ವಂದೇ ಮಾತರಂ’ ಹಾಡದಿದ್ದರೆ ಅಪರಾಧವಲ್ಲ, ಶಿಕ್ಷೆಯೂ ಇಲ್ಲ: ಸುಪ್ರೀಂ ಕೋರ್ಟ್

‘ವಂದೇ ಮಾತರಂ’ನ ಹಾಡುವುದು ಕಡ್ಡಾಯವಲ್ಲ. ಹಾಡದಿದ್ದ ಕಾರಣಕ್ಕೆ ಶಿಕ್ಷೆ ನೀಡಲಾಗುವುದಿಲ್ಲ ಎಂದು...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ: ಸೆ.22 ವಿಶ್ವ ಗುಲಾಬಿ ದಿನ

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ...

ಜಗತ್ತಿನಲ್ಲೇ ಮೊದಲು: ಹಂದಿ ಮೂತ್ರಪಿಂಡದಿಂದ 9 ತಿಂಗಳು ಜೀವಿಸಿದ ವ್ಯಕ್ತಿ

ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬೆಳವಣಿಗೆಯೊಂದು ನಡೆದಿದೆ. ತಳಿವಿಜ್ಞಾನದ (ಜೆನೆಟಿಕ್ಸ್‌) ಮೂಲಕ...