ಬೀದರ್‌ | ಕನ್ನಡ ಸಾಹಿತ್ಯಕ್ಕೆ ಚಂದ್ರಕಲಾ ಬಿದರಿ ಕೊಡುಗೆ ಅಪಾರ

Date:

ಬೀದರ್ ನಗರದ ಕುಂಬಾರವಾಡ ರಸ್ತೆಯ ಕರುನಾಡು ಸಾಂಸ್ಕೃತಿಕ ಸಭಾಂಗಣದಲ್ಲಿಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಚಕೋರ ಸಾಹಿತ್ಯ ವಿಚಾರ ವೇದಿಕೆ ಬೀದರ ಹಾಗೂ ಶಬನಮ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಭಾಲ್ಕಿ ಇವರ ಸಹಯೋಗದಲ್ಲಿ ಇತ್ತೀಚೆಗೆ ನಿಧನರಾದ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯೆ ಡಾ.ಚಂದ್ರಕಲಾ ಬಿದರಿ ಅವರ ಬದುಕು-ಬರಹ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ ಭಾನುವಾರ ಜರುಗಿತು.

- Advertisement -

ವಚನಾಮೃತ ಕನ್ನಡ ಸಂಘದ ಅಧ್ಯಕ್ಷ ಸಿದ್ರಾಮಪ್ಪಾ ಮಾಸಿಮಾಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಚಂದ್ರಕಲಾ ಬಿದರಿ ಅವರು ಕುಟುಂಬದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸುತ್ತಾ, ಉಪನ್ಯಾಸಕ ವೃತ್ತಿಯೊಂದಿಗೆ ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ಅಪರೂಪದ ವ್ಯಕ್ತಿತ್ವವಾಗಿದ್ದು, ಅವರ ಸಾಹಿತ್ಯ ಸಾಧನೆ ಇಡೀ ರಾಜ್ಯಕ್ಕೆ ಮಾದರಿಯಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

“ಜೀವನದುದ್ದಕ್ಕೂ ಸುಖ-ದುಃಖ, ಕಷ್ಟ ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಅನೇಕ ಸಾಧನೆಗೈದ ಅವರು, ಕನ್ನಡ ಸಾಹಿತ್ಯ ಲೋಕಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ಅವರ ಅಗಲಿಕೆ ನಮ್ಮೆಲ್ಲರಿಗೂ ನೋವು ತಂದಿದೆ. ಇಂದು ನಮ್ಮೊಂದಿಗೆ ಇಲ್ಲದಿದ್ದರೂ ಅವರ ಆದರ್ಶ ಮೌಲ್ಯಗಳು ಹಾಗೂ ಸಾಹಿತ್ಯ ಪರಂಪರೆ ಸದಾ ಜೀವಂತವಾಗಿದ್ದು, ಅವರ ವ್ಯಕ್ತಿತ್ವ ಮತ್ತು ಕೃತಿಗಳು ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಲಿವೆ” ಎಂದರು.

ಸಾಹಿತಿ ರಾಮಚಂದ್ರ ಗಣಾಪೂರ ವಿಶೇಷ ಉಪನ್ಯಾಸ ನೀಡಿ ಅವರು, “ಬಾಲ್ಯದಲ್ಲಿಯೇ ಅಕ್ಕಮಹಾದೇವಿ ನಾಟಕದಲ್ಲಿ ಅಭಿನಯಿಸುವ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದ್ದ ಚಂದ್ರಕಲಾ ಬಿದರಿ ಅವರು, ನಂತರ ಸಾಹಿತ್ಯ, ಶಿಕ್ಷಣ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ನಿರಂತರ ಸೇವೆ ಸಲ್ಲಿಸಿ 30 ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿ ಕನ್ನಡ ಸಾಹಿತ್ಯಕ್ಕೆ ತಮ್ಮ ಕೊಡುಗೆ ನೀಡಿದ್ದಾರೆ” ಎಂದರು.

“ಬಿದರಿ ಅವರ ಬದುಕು ಬಹುಮುಖ ವ್ಯಕ್ತಿತ್ವದ ಪ್ರತೀಕವಾಗಿತ್ತು. ಯೋಗ, ಪ್ರಾಣಾಯಾಮ, ಚಿತ್ರಕಲೆ ಹಾಗೂ ಸಾಹಿತ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಸಾಹಿತ್ಯದ ಬೆಳವಣಿಗೆಗೆ ಪೂರಕವಾದ ಅನೇಕ ಕಾರ್ಯಕ್ರಮ, ಯೋಜನೆಗಳನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇತರರ ನೋವಿಗೆ ಸದಾ ಸ್ಪಂದಿಸುತ್ತಿದ್ದ ಅವರ ಮಾನವೀಯತೆ ಹಾಗೂ ಸಾಮಾಜಿಕ ಕಾಳಜಿ ಸದಾಕಾಲ ಸ್ಮರಣೀಯವಾಗಿರಲಿದೆ” ಎಂದು ಅಭಿಪ್ರಾಯಪಟ್ಟರು.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜೀವಕುಮಾರ್ ಅತಿವಾಳೆ ಮಾತನಾಡಿ, “ಚಂದ್ರಕಲಾ ಬಿದರಿ ಅವರು ರಾಜ್ಯದಾದ್ಯಂತ ಅನೇಕ ಸಾಹಿತಿಗಳಿಗೆ ಮಾರ್ಗದರ್ಶನ ನೀಡಿ ಸಾಹಿತ್ಯ ಕ್ಷೇತ್ರದಲ್ಲಿ ಅಸಂಖ್ಯಾತ ಪ್ರತಿಭೆಗಳನ್ನು ಬೆಳೆಸಿದ ಅಪರೂಪದ ವ್ಯಕ್ತಿತ್ವವಾಗಿದ್ದರು” ಎಂದರು.

“ಚಂದ್ರಕಲಾ ಬಿದರಿ ಅವರು ನನ್ನ ಸಾಹಿತ್ಯದ ಗುರುಗಳಾಗಿದ್ದರು. ನಾನು ಸಾಹಿತ್ಯ ಮತ್ತು ಸಾರ್ವಜನಿಕ ಬದುಕಿನಲ್ಲಿ ಗುರುತಿಸಿಕೊಳ್ಳಲು ಅವರ ಮಾರ್ಗದರ್ಶನವೇ ಪ್ರಮುಖ ಕಾರಣ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸ್ಥಾನಕ್ಕೆ ನನ್ನ ಹೆಸರನ್ನು ಮೊದಲ ಬಾರಿಗೆ ಶಿಫಾರಸು ಮಾಡಿದವರೂ ಅವರೇ. ಅವರ ವಿಶ್ವಾಸ, ಪ್ರೋತ್ಸಾಹ ಮತ್ತು ಆಶೀರ್ವಾದ ನಾನೆಂದಿಗೂ ಮರೆಯಲು ಸಾಧ್ಯವಿಲ್ಲ” ಎಂದು ಸ್ಮರಿಸಿದರು.

ಹಿರಿಯ ಸಾಹಿತಿ ಸುನೀತಾ ಬಿರಾದಾರ ಹಾಗೂ ಚಕೋರ ಸಾಹಿತ್ಯ ವಿಚಾರ ವೇದಿಕೆಯ ಜಿಲ್ಲಾ ಸಂಚಾಲಕಿ ಮುಕ್ಕುಂಬಿ ಎಂ. ಅವರು ಚಂದ್ರಕಲಾ ಬಿದರಿ ಅವರ ಬದುಕಿನ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ : ಬೀದರ್‌ | ಚನ್ನಬಸವ ಪಟ್ಟದ್ದೇವರು, ಪ್ರಭುರಾವ ಕಂಬಳಿವಾಲೆ ಪುಸ್ತಕ ಲೋಕಾರ್ಪಣೆ

ಕಾರ್ಯಕ್ರಮದಲ್ಲಿ ಪ್ರಮುಖರಾದ ಶಂಭುಲಿಂಗ ವಾಲ್ದೊಡ್ಡಿ ರವೀಂದ್ರ ಲಂಜವಾಡಕರ್, ಓಂಕಾರ ಉಪ್ಪೆ, ಗೊಂಡ ಬಾಬುರಾವ, ಸೂರ್ಯಕಾಂತ್ ವಿಶ್ವಕರ್ಮ, ಆರ್.ಎಸ್.ಬಿರಾದಾರ ಸೇರಿದಂತೆ ಸಾಹಿತಿಗಳು, ಪ್ರಗತಿಪರ ಚಿಂತಕರು ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು. ಸಂತೋಷಕುಮಾರ ಜೋಳದಪಕೆ ಸ್ವಾಗತಿಸಿದರು. ಲಕ್ಷ್ಮಣ ಮೇತ್ರೆ ನಿರೂಪಿಸಿದರು, ಅಜೀತ್ ನೇಳಗಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು ಸಾಧ್ಯವೇ?

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ ಪಯಣ?

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ...

ಶಿರಹಟ್ಟಿ | ಸಮುದಾಯ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಐಇಸಿ ಸಂಯೋಜಕರ ಭೇಟಿ, ಪರಿಶೀಲನೆ

ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಕೋಗನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಮಡುವು...

ನೀವು ಆ ಕುರ್ಚಿಗೆ ಅರ್ಹರಲ್ಲ: ಸಿಜೆಐ ವಿರುದ್ಧ ಆಕ್ರೋಶಗೊಂಡ ವಕೀಲನಿಗೆ ಸುಪ್ರೀಂ ನ್ಯಾಯಾಂಗ ನಿಂದನೆ ನೋಟಿಸ್

ತೆರೆದ ನ್ಯಾಯಾಲಯದ ಕಲಾಪದ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್...