ಬೀದರ್‌ | ಕೆಕೆಆರ್‌ಟಿಸಿ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಚಂದ್ರಕಾಂತ ಹಿಪ್ಪಳಗಾಂವ

Date:

ಕಾಂಗ್ರೆಸ್ ಪಕ್ಷಕ್ಕಾಗಿ ಸುಮಾರು ನಾಲ್ಕು ದಶಕಗಳಿಂದ ಸಂಘಟನೆಯಲ್ಲಿ ತೊಡಗಿಸಿಕೊಂಡು ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರೂ, ನಿಗಮ ಮಂಡಳಿಯ ನೇಮಕಾತಿಯಲ್ಲಿ ತಮ್ಮ ಹಿರಿತನಕ್ಕೆ ಸೂಕ್ತ ಮನ್ನಣೆ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಬೀದರ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಕಾಂತ ಹಿಪ್ಪಳಗಾಂವ ಅವರು ಕೆಕೆಆರ್‌ಟಿಸಿ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

- Advertisement -

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಸೇರಿದಂತೆ ಸಮಾಜ ಸೇವೆ ಮಾಡುವ ಉದ್ದೇಶದಿಂದ ಯಾವುದಾದರೂ ನಿಗಮ-ಮಂಡಳಿಯಲ್ಲಿ ಅಧ್ಯಕ್ಷ ಅಥವಾ ನಿರ್ದೇಶಕ ಸ್ಥಾನ ನೀಡುವಂತೆ ನಿರೀಕ್ಷಿಸಿದ್ದೆ. ಆದರೆ, ಸರ್ಕಾರ ಕೆಕೆಆರ್‌ಟಿಸಿಯಲ್ಲಿ ಕೇವಲ ಸದಸ್ಯ ಸ್ಥಾನ ನೀಡಿದೆ. ಈ ಜವಾಬ್ದಾರಿಯಿಂದ ತೃಪ್ತಿಯಾಗಿಲ್ಲ” ಎಂದು ಬೇಸರ ಹೊರಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

“1991-92ರಲ್ಲಿ ಖಾದಿ ಭಂಡಾರದ ಸದಸ್ಯನಾಗಿ ಕಾರ್ಯನಿರ್ವಹಿಸಿದ್ದೇನೆ. ಸುಮಾರು 18 ವರ್ಷಗಳ ಕಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಗೆ ಶ್ರಮಿಸಿದ್ದೇನೆ. ಪಕ್ಷವು ವಿವಿಧ ಸಂದರ್ಭಗಳಲ್ಲಿ ನೀಡಿದ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಿದ್ದೇನೆ. ಡಾ.ಬಾಬು ಜಗಜೀವನ ರಾಮ್ ಅವರ ಹೆಸರಿನ ನಿಗಮ ಸೇರಿದಂತೆ ಸಮಾಜಕ್ಕೆ ಸಂಬಂಧಿಸಿದ ಯಾವುದೇ ನಿಗಮದಲ್ಲಿ ಅಧ್ಯಕ್ಷ ಅಥವಾ ನಿರ್ದೇಶಕ ಸ್ಥಾನ ನೀಡಿದ್ದರೂ ಸಂತೋಷದಿಂದ ಕಾರ್ಯನಿರ್ವಹಿಸುತ್ತಿದ್ದೆ. ಸಮಾಜದ ಋಣ ತೀರಿಸಲು ಇದೊಂದು ಅವಕಾಶವಾಗಬಹುದು ಎಂಬ ನಿರೀಕ್ಷೆ ಹೊಂದಿದ್ದೆ. ಆದರೆ, ನನ್ನ ನಿರೀಕ್ಷೆಗೆ ವಿರುದ್ಧವಾಗಿ ಕೆಎಸ್‌ಆರ್‌ಟಿಸಿಯಲ್ಲಿ ಸದಸ್ಯ ಸ್ಥಾನ ನೀಡಿರುವುದು ಬೇಸರ ತಂದಿದೆ” ಎಂದರು.

WhatsApp Image 2026 11 13 at 8.18.17 PM

ನಿಗಮ ಮಂಡಳಿಗಳ ನೇಮಕಾತಿಯಲ್ಲಿ ತಮ್ಮನ್ನು ಕಡೆಗಣಿಸಲಾಗಿದೆ. ಪಕ್ಷಕ್ಕಾಗಿ ಯಾರು ಎಷ್ಟು ಕೆಲಸ ಮಾಡಿದ್ದಾರೆ, ಯಾರಿಗೆ ಯಾವ ಜವಾಬ್ದಾರಿ ನೀಡಬೇಕು ಎಂಬುದನ್ನು ಸರ್ಕಾರ ಸಮರ್ಪಕವಾಗಿ ಪರಿಶೀಲಿಸಬೇಕಿತ್ತು. ಬೀದರ್ ಜಿಲ್ಲೆಯ ನೇಮಕಾತಿ ವಿಚಾರದಲ್ಲಿಯೂ ಸಮತೋಲನ ಕಾಯ್ದುಕೊಳ್ಳಬೇಕಿತ್ತು. ಆದರೆ, ಈ ಎಲ್ಲ ಅಂಶಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ ಎಂದು ಹೇಳಿದರು.

ಪಕ್ಷದ ವರಿಷ್ಠರನ್ನು ಭೇಟಿಯಾಗಿ ತಮ್ಮ ಅಸಮಾಧಾನ ತಿಳಿಸಲು ಬೆಂಗಳೂರಿಗೆ ತೆರಳಲು ವಿಮಾನದ ಟಿಕೆಟ್ ಕೂಡ ಕಾಯ್ದಿರಿಸಿದ್ದೇನೆ. ಆದರೆ, ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಪಕ್ಷದ ಹಿರಿಯ ನಾಯಕ ಈಶ್ವರ ಖಂಡ್ರೆ ಅವರು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅವರೊಂದಿಗೆ ಚರ್ಚಿಸಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ಸದ್ಯಕ್ಕೆ ನೀಡಿರುವ ಜವಾಬ್ದಾರಿಯನ್ನು ಸ್ವೀಕರಿಸಿಲ್ಲ. ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತ ಎಂದು ಸ್ಪಷ್ಟಪಡಿಸಿದರು.

ಕೆಸಿಆರ್‌ವಿ ಅಧ್ಯಕ್ಷ ಅನಿಲ ನೀಡೋದಾ ಮಾತನಾಡಿ, “ಚಂದ್ರಕಾಂತ ಹಿಪ್ಪಳಗಾಂವ ಅವರು ಸುಮಾರು 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಪಕ್ಷದ ಗೆಲುವಿಗಾಗಿ ಶ್ರಮಿಸಿದ್ದಾರೆ. ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಪಕ್ಷ ನೀಡಿದ ವಿವಿಧ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಹೀಗಾಗಿ, ಅವರಿಗೆ ನೀಡಿರುವ ನಿರ್ದೇಶಕ ಸ್ಥಾನಕ್ಕಿಂತ ಉನ್ನತ ಜವಾಬ್ದಾರಿಯಾಗಿ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಪಕ್ಷ ಗುರುತಿಸಬೇಕು” ಎಂದು ಒತ್ತಾಯಿಸಿದರು.

ರಾಜೇಶ ಯರನಳ್ಳಿ, ಅರ್ಜುನ ನಂದಗಂವಾಕರ, ಅನಿಲ ಬೆನಕನಳ್ಳಿಕರ, ನ್ಯೂಟನ್ ಮಾರ್ಕ್, ಸಂಜು ಮರ್ಕಲ್, ನಾಗೇಶ ಯರ್ನಳ್ಳಿ ಹಾಗೂ ಅನಿಲಕುಮಾರ ಮೇತ್ರೆ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌ | ಕನೇರಿ ಸ್ವಾಮಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲು ಆಗ್ರಹ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ ಕೇಂದ್ರ!

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು ಸಂಸಾರ ʻಜಾಲವಾಡಗಿʼ

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು...

ಈ ದಿನ ಸಂಪಾದಕೀಯ | ನರಾಧಮ ಇಸ್ರೇಲಿನ ನೀಚ ಕೃತ್ಯಗಳು ಮತ್ತು ಮೋದಿ ಮೌನಕ್ಕೆ ಕೊನೆಯೇ ಇಲ್ಲವೇ?

ಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷ ಕುರಿತ ಭಾರತದ ನಿಲುವು ಅತ್ಯಂತ ನಿರಾಶಾಜನಕ. ಮೋದಿ...

ಕ್ಷೇತ್ರ ಪುನರ್ವಿಂಗಡಣೆ ಮಸೂದೆ: ‘ವಿಶೇಷ ಅಧಿವೇಶನ’ ಅಸ್ತ್ರ ಪ್ರಯೋಗಿಸಲಿದೆಯೇ ಕೇಂದ್ರ?

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ 'ಕ್ಷೇತ್ರ ಮರುವಿಗಂಡಣೆಯೊಂದಿಗೆ ಬೆಸೆದಿರುವ ಮೋದಿ...