ಬೀದರ್‌ | ಬಸವಣ್ಣನವರ ಅಪ್ಪಟ ಅನುಯಾಯಿ ಚನ್ನಬಸವ ಪಟ್ಟದ್ದೇವರು : ಸಚಿವ ಈಶ್ವರ ಖಂಡ್ರೆ

Date:

ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರು ಅಪ್ಪಟ ಬಸವಣ್ಣನವರ ಅನುಯಾಯಿ ಆಗಿದ್ದರು. ತಮ್ಮ ಇಡೀ ಬದುಕು ಬಸವತತ್ವ ಪ್ರಚಾರ ಪ್ರಸಾರಕ್ಕೆ ಮುಡಿಪಾಗಿಟ್ಟಿದ್ದರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

- Advertisement -

ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಸೋಮವಾರ ಆಯೋಜಿಸಿದ್ದ ಡಾ.ಚನ್ನಬಸವ ಪಟ್ಟದ್ದೇವರ 136ನೆಯ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿ,ʼಚನ್ನಬಸವ ಪಟ್ಟದ್ದೇವರು ಅಪಾರ ದೂರದೃಷ್ಟಿ ಉಳ್ಳುವರಾಗಿದ್ದರು. ಗಡಿಭಾಗದ ಸಮಗ್ರ ಅಭಿವೃದ್ಧಿಗೆ ಶಿಕ್ಷಣ ಪ್ರಮುಖ ಅಸ್ತ್ರವೆಂದರಿತು 1936ರಲ್ಲಿ ಶಾಂತಿವರ್ಧಕ ಶಿಕ್ಷಣ ಸಂಸ್ಥೆ ಆರಂಭಿಸಿ ಈ ಭಾಗದ ಅಭಿವೃದ್ಧಿಗೆ ನಾಂದಿ ಹಾಡಿದ್ದರುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ʼಚನ್ನಬಸವ ಪಟ್ಟದ್ದೇವರ ಸೇವೆ ಕೇವಲ ಬಸವತತ್ವ ಪ್ರಚಾರ ಪ್ರಸಾರಕ್ಕೆ ಸೀಮಿತ ಆಗಿರದೇ ಗಡಿಭಾಗವನ್ನು ಕನ್ನಡ ನೆಲದಲ್ಲಿ ಉಳಿಸಲು ಹೋರಾಟ ನಡೆಸಿದರು. ಅವರ ನಡೆ-ನುಡಿ ಒಂದೆ ಆಗಿತ್ತು. ಮಾತಿನ ಸದ್ದು ದೂರ ಕೇಳಿಸುತ್ತದೆ, ಕೆಲಸದ ಸದ್ದು ಅದಕ್ಕಿಂತಲೂ ದೂರ ಕೇಳಿಸುತ್ತದೆ. ಹಾಗಾಗಿ ಪೂಜ್ಯರು ಮಾತಿನ ಸ್ವಾಮೀಜಿ ಆಗಿರದೇ ಕೆಲಸದ ಸ್ವಾಮೀಜಿ ಆಗಿದ್ದರು. ಅಂತಹ ಪೂಜ್ಯರು ನಮಗೆ ಸಿಕ್ಕಿರುವುದು ನಮ್ಮೆಲ್ಲರ ಸೌಭಾಗ್ಯ ಅವರ ವಿಚಾರಧಾರೆ ಎಲ್ಲರೂ ಅನುಸರಿಸಿ ಭವ್ಯ, ಸುಂದರ ಬದುಕು ರೂಪಿಸಿಕೊಳ್ಳಬೇಕುʼ ಎಂದು ಸಲಹೆ ನೀಡಿದರು.

WhatsApp Image 2025 12 22 at 9.46.03 PM

ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕ ಪ್ರಕಾಶ ಖಂಡ್ರೆ ಮಾತನಾಡಿ, ʼಚನ್ನಬಸವ ಪಟ್ಟದ್ದೇವರು ಬದುಕು ನಮ್ಮೆಲ್ಲರಿಗೂ ಆದರ್ಶಪ್ರಾಯವಾಗಿದೆ. ಪೂಜ್ಯರು ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆ ಅನುಪಮವಾಗಿದೆʼ ಎಂದು ತಿಳಿಸಿದರು.

ಭಾರತೀಯ ಬಸವ ಬಳಗದ ರಾಜ್ಯಾಧ್ಯಕ್ಷ ಬಾಬು ವಾಲಿ ಬಸವ ಗುರುವಿನ ಪೂಜೆ ನೆರವೇರಿಸಿದರು. ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ನೇತ್ರತ್ವ ವಹಿಸಿದರು. ಬಸವಲಿಂಗ ಸ್ವಾಮೀಜಿ, ಶಿವಯೋಗೀಶ್ವರ ಸ್ವಾಮೀಜಿ, ಚನ್ನವೀರ ಸ್ವಾಮೀಜಿ, ಶಿವಪ್ರಸಾದ ಸ್ವಾಮೀಜಿ ನೇತೃತ್ವ ವಹಿಸಿದ್ದರು. ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಸಾನ್ನಿಧ್ಯ ವಹಿಸಿದ್ದರು. ಶರಣಬಸವ ಸ್ವಾಮೀಜಿ ಅನುಭಾವ ನೀಡಿದರು.

ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಮಾಜಿ ಅಧ್ಯಕ್ಷ ಡಿ.ಕೆ.ಸಿದ್ರಾಮ, ಹಿರಿಯ ನ್ಯಾಯವಾದಿ ರಾಜಶೇಖರ ಅಷ್ಟೂರೆ, ಬೀದರ್ ಲೋಕೋಪಯೋಗಿ ಇಲಾಖೆಯ ಇಇ ಶಿವಶಂಕರ ಕಾಮಶೆಟ್ಟಿ, ಕರ್ನಾಟಕ ರಾಜ್ಯ ಮಹಿಳಾ ಮಂಡಳದ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ, ನೀಲಮ್ಮ ವಿಕೆ ಪಾಟೀಲ್, ಯುವ ಮುಖಂಡರಾದ ರವಿ ಮೀಸೆ, ಪ್ರಕಾಶ ಟೊಣ್ಣೆ, ಬಂಡೆಪ್ಪ ಕಂಟೆ, ಪ್ರಕಾಶ ಘೂಳೆ, ಭಾರತೀಯ ಬಸವ ಬಳಗದ ಜಿಲ್ಲಾಧ್ಯಕ್ಷ ಡಾ.ಸಂಜುಕುಮಾರ ಜುಮ್ಮಾ ಸೇರಿದಂತೆ ಹಲವರು ಇದ್ದರು. ಹಾಸ್ಯ ಕಲಾವಿದ ನವಲಿಂಗ ಪಾಟೀಲ್ ನಿರೂಪಿಸಿ, ವಂದಿಸಿದರು.

ಕಾಯಕ ಪ್ರಶಸ್ತಿ ಪ್ರದಾನ :

ಬಸವಕಲ್ಯಾಣ ವಿಶ್ವಬಸವಧರ್ಮ ಟ್ರಸ್ಟ್ ಅನುಭವ ಮಂಟಪದ ಕಾರ್ಯದರ್ಶಿ ಡಾ.ಎಸ್.ಬಿ.ದುರ್ಗೆ ಅವರಿಗೆ 2025ನೇ ಸಾಲಿನ ಡಾ.ಚನ್ನಬಸವ ಪಟ್ಟದ್ದೇವರು ಕಾಯಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ದಾಸೋಹಿ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಮಾಜಿ ಅಧ್ಯಕ್ಷ ಡಿ.ಕೆ.ಸಿದ್ರಾಮ ಪ್ರಶಸ್ತಿ ಪ್ರದಾನ ಮಾಡಿದರು.

ಗ್ರಂಥ ಲೋಕಾರ್ಪಣೆ :

ಸಾಹಿತಿ ಸುನಿತಾ ದಾಡಗೆ ಬರೆದ ಕನ್ನಡದ ನಂದಾದೀಪ, ಚನ್ನಬಸವೇಶ್ವರ ಗುರುಕುಲ ಸಮುಚ್ಛಯದ ಅಧೀಕ್ಷಕ, ಸಾಹಿತಿ ಗಣಪತಿ ಭೂರೆ ಅವರು ಬರೆದ ಅಕ್ಷರಲೋಕದ ನಕ್ಷತ್ರ ಗ್ರಂಥ ಬಿಡುಗಡೆಗೊಂಡವು. ಜತೆಗೆ ಗುರುಪ್ರಸಾದ ಚಂದ್ರಶೇಖರ ನಿರ್ದೇಶನದಲ್ಲಿ ಹೊರತಂದ ʼದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆʼ ಎಂಬ ಕಿರುಚಿತ್ರ ಬಿಡುಗಡೆಗೊಂಡಿತು. ಎನ್‌ಎಸ್‌ಎಸ್‌ಕೆ ಮಾಜಿ ಅಧ್ಯಕ್ಷ ಡಿ.ಕೆ.ಸಿದ್ರಾಮ ಪುಸ್ತಕ ಬಿಡುಗಡೆಗೊಳಿಸಿದರು.

WhatsApp Image 2025 12 22 at 9.46.50 PM

ವಿಶೇಷ ಸನ್ಮಾನ :

ಕಲಬುರಗಿ ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರ ಶರಣಪ್ಪ ಸುಲಗುಂಟೆ, ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷ ಶರಣಪ್ಪ ಸಲಾದಪುರ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ
ಬಬಲೇಶ್ವರ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ, ವಿದ್ಯುತ್ ಮಂಡಳ ಎಂಜನಿಯರ್‌ಗಳ ಸಂಘದ ಶಾಶ್ವತ ನಿರ್ದೇಶಿತ ಸದಸ್ಯ ವೀರಭದ್ರಪ್ಪ, ವಿದ್ಯುತ್ ಮಂಡಳ ಎಂಜನಿಯರ್‌ಗಳ
ಸಂಘದ ಉಪಾಧ್ಯಕ್ಷ ಸಚಿನ ಜಿ.ಹೆಚ್, ಕೇಂದ್ರ ಸಮಿತಿ ಸದಸ್ಯ ರಮೇಶ ಪಾಟೀಲ್, ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಸದಸ್ಯ ಮಹೇಶ ಘಾಳೆ ಮತ್ತು ಗುರುಪ್ರಸಾದ ಚಂದ್ರಶೇಖರ ಅವರನ್ನು ಶ್ರೀಮಠದ ಪರವಾಗಿ ವಿಶೇಷವಾಗಿ ಸನ್ಮಾನಿಸಲಾಯಿತು.

ಪಟ್ಟದ್ದೇವರ ಜನಪರ, ಜೀವಪರ ಸೇವೆ ಪ್ರೇರಣೆ :

ಗಡಿಭಾಗದಲ್ಲಿ ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರು ಸಲ್ಲಿಸಿರುವ ಜನಪರ, ಜೀವಪರ ಸೇವೆ ನಮ್ಮೆಲ್ಲರಿಗೂ ಪ್ರೇರಣೆಯಾಗಿ ನಿಲ್ಲುತ್ತವೆ ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.

ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರ 136ನೆಯ ಜಯಂತ್ಯುತ್ಸವ ನಿಮಿತ್ತ ಸೋಮವಾರ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

WhatsApp Image 2025 12 22 at 9.49.19 PM

ʼನಿಜಾಂನ ಆಡಳಿತದಲ್ಲಿ ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರು ದಿಟ್ಟತನ ಪ್ರದರ್ಶಿಸಿ ಕನ್ನಡ ಉಳಿಸಿ, ಬೆಳೆಸುವುದರ ಜತೆಗೆ ಗಡಿಭಾಗವನ್ನು ಕನ್ನಡ ನೆಲದಲ್ಲಿ ಉಳಿಯುವಂತೆ ಮಾಡಿದರು. ಅನುಭವ ಮಂಟಪ ಪೂನರ್ ನಿರ್ಮಿಸಿ ಬಸವಾದಿ ಶರಣರ ವಿಚಾರಧಾರೆಗಳನ್ನು ಜನರಿಗೆ ತಲುಪಿಸಿದರು. ಚನ್ನಬಸವ ಪಟ್ಟದ್ದೇವರ ಕೊಡುಗೆಯನ್ನು ವಿದ್ಯಾರ್ಥಿಗಳಿಗೆ ತಿಳಿಹೇಳುವ ಸದಾಶಯದೊಂದಿಗೆ ಬಸವಾದಿ ಶರಣರ ಮತ್ತು ಚನ್ನಬಸವ ಪಟ್ಟದ್ದೇವರು ಜೀವನ ಸಾಧನೆ ಕುರಿತು ವಿವಿಧ ಸ್ಪರ್ದೆಗಳು ಏರ್ಪಡಿಸಲಾಗಿದೆʼ ಎಂದು ಅವರು ತಿಳಿಸಿದರು.

ಇದನ್ನೂ ಓದಿ : ಬೀದರ್‌ | ಒಂದು ಲಕ್ಷ ಮನೆಗಳಲ್ಲಿ ಗ್ರಂಥಾಲಯ ನಿರ್ಮಿಸುವ ಗುರಿ : ಡಾ.ಮಾನಸ

ಅನುಭವ ಮಂಟಪದ ಸಂಚಾಲಕ ಶಿವಾನಂದ ಸ್ವಾಮೀಜಿ, ಶಂಕರಲಿಂಗ ಸ್ವಾಮೀಜಿ, ಅನಿಲ ಮಹಾರಾಜರು ನೇತೃತ್ವ ವಹಿಸಿದ್ದರು. ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ಗಣಪತಿ ಬೋಚರೆ, ಕಸಾಪ ಮಹಿಳಾ ಪ್ರತಿನಿಧಿ ಮಲ್ಲಮ್ಮ ಆರ್ ಪಾಟೀಲ್, ಸದ್ಗುರು ವಿದ್ಯಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸೋಮನಾಥ ಮುದ್ದಾ, ಹಿರೇಮಠ ಸಂಸ್ಥಾನ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾಗಯ್ಯ ಸ್ವಾಮಿ, ನಿವೃತ್ತ ಸಹಾಯಕ ಕೃಷಿ ನಿರ್ದೇಶಕ ಸಿಕ್ರೇಶ್ವರ ಶೆಟಕಾರ್, ಸಂಗೀತ ಶಿಕ್ಷಕ ಶಿವಾಜಿ ಸಗರ, ಬಸವರಾಜ ಮಾಳಗೆ, ಲಚಮಾ ರೆಡ್ಡಿ ಇದ್ದರು. ಬಾಬು ಬೆಲ್ದಾಳ ಸ್ವಾಗತಿಸಿದರು. ಸವಿತಾ ಭೂರೆ ನಿರೂಪಿಸಿ, ವಂದಿಸಿದರು.

ಬೆಳ್ಳಂಬೆಳ್ಳಗೆ ಬಸವ ನಡಿಗೆ :

ಬೆಳಿಗ್ಗೆ 6.30ಕ್ಕೆ ಹಿರೇಮಠ ಸಂಸ್ಥಾನದಿಂದ ಬಸವ ನಡಿಗೆ ಆರಂಭಗೊಂಡು ವಿವಿಧ ವೃತ್ತ, ಮುಖ್ಯ ರಸ್ತೆ ಮೂಲಕ ಸಾಗಿ ಚನ್ನಬಸವಾಶ್ರಮ ಪರಿಸರದಲ್ಲಿ ಸಮಾವೇಶಗೊಂಡಿತು. ಬೆಳ್ಳಂಬೆಳ್ಳಗೆ ಚಳಿಯ ನಡುವೆ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದ್ದೇವರ ಸಾನ್ನಿಧ್ಯದಲ್ಲಿ ನಡೆದ ಬಸವ ನಡಿಗೆಯಲ್ಲಿ ವಿಶ್ವಗುರು ಬಸವಣ್ಣ ಮತ್ತು ಡಾ.ಚನ್ನಬಸವ ಪಟ್ಟದ್ದೇವರ ಭಾವಚಿತ್ರದ ಮೆರವಣಿಗೆ ಶ್ರದ್ಧೆ, ಭಕ್ತಿಯಿಂದ ನೆರವೇರಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.27ರಂದು ಹೂಗಾರ ಮಾದಯ್ಯನವರ ಜಯಂತಿ ಅದ್ದೂರಿ ಆಚರಣೆ

ಅಖಂಡ ಕರ್ನಾಟಕ ಹೂಗಾರ ಮಹಾಸಭಾ ಬೀದರ್ ಜಿಲ್ಲಾ ಘಟಕದ ವತಿಯಿಂದ ಸೆ.27ರಂದು...

ಭಾಲ್ಕಿ | ಮಡಿವಾಳ ಮಾಚಿದೇವರ ಕಾಯಕ ನಿಷ್ಠೆ ಸಮಾಜಕ್ಕೆ ಆದರ್ಶ: ಮಹಾಲಿಂಗ ಸ್ವಾಮೀಜಿ

ಕಾಯಕ ಹಾಗೂ ವಿಶಿಷ್ಟ ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ಮಾಡಿದ...

ಬೀದರ್‌ನಲ್ಲಿ ಸೆ.28ರಂದು ಉದ್ಯೋಗ ಮೇಳ

ಬೀದರ್ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 28ರಂದು ಬೆಳಿಗ್ಗೆ...

ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಹರಾಜು ರದ್ದು, ಲೀಸ್‌ಗೆ ನೀಡಲು ಸಿಎಂ ಭರವಸೆ : ಶ್ರೀಮಂತ ಬಿರಾದರ್

ಬೀದರ್ ಜಿಲ್ಲೆಯ ರೈತರು‌, ಕಾರ್ಮಿಕರ ಜೀವನಾಡಿಯಾಗಿರುವ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ...