ಬೀದರ್‌ | ಚನ್ನಬಸವ ಪಟ್ಟದ್ದೇವರು, ಪ್ರಭುರಾವ ಕಂಬಳಿವಾಲೆ ಪುಸ್ತಕ ಲೋಕಾರ್ಪಣೆ

Date:

ಉತ್ತಮ ಪುಸ್ತಕಗಳಿಗೆ ಮನಸ್ಸು ಮತ್ತು ಮನುಷ್ಯರನ್ನು ಪರಿವರ್ತಿಸುವ ಅಗಾಧ ಶಕ್ತಿ ಇರುತ್ತದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಹೇಳಿದರು.

- Advertisement -

ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ಸಭಾ ಭವನದಲ್ಲಿ ಶನಿವಾರ ಆಲೂರು ವೆಂಕಟರಾವ್ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಧಾರವಾಡ, ಚನ್ನಬಸವೇಶ್ವರ ಗುರುಕುಲ ಕರಡ್ಯಾಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಏಕೀಕರಣ ಹೋರಾಟಗಾರರ ವ್ಯಕ್ತಿಚಿತ್ರ ಮಾಲೆ ಚನ್ನಬಸವ ಪಟ್ಟದ್ದೇವರ ಹಾಗೂ ಪ್ರಭುರಾವ್ ಕಂಬಳಿವಾಲೆ ಅವರ ಪುಸ್ತಕ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಮಹಾತ್ಮರ ಕುರಿತಾದ ಪುಸ್ತಕಗಳಲ್ಲಿ ಅಡಗಿರುವ ಜೀವನ ಸಂದೇಶ, ಅನುಭವ ಸುಂದರ ಸಮಾಜ ನಿರ್ಮಿಸಲು ಪ್ರೇರಣೆ ನೀಡುತ್ತದೆ. ಉತ್ತಮ ಸಾಹಿತ್ಯಕ್ಕೆ ಓದುಗರನ್ನು ತನ್ನತ್ತ ಆಕರ್ಷಿಸುವ ಅದ್ಭುತ ಶಕ್ತಿ ಇರುತ್ತದೆ. ಚನ್ನಬಸವ ಪಟ್ಟದ್ದೇವರ ಹಾಗೂ ಪ್ರಭುರಾವ್ ಕಂಬಳಿವಾಲೆ ಅವರ ಪುಸ್ತಕಗಳು ನಾಡು, ನುಡಿ, ಭಾಷೆ, ಇತಿಹಾಸ ಹಾಗೂ ಆಧ್ಯಾತ್ಮದ ಚಿಂತನೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಅತ್ಯಮೂಲ್ಯ ಗ್ರಂಥಗಳಾಗಿವೆ” ಎಂದು ಹೇಳಿದರು.

ಆಲೂರು ವೆಂಕಟರಾವ್ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಧಾರವಾಡದ ಅಧ್ಯಕ್ಷ ರಂಜಾನ್ ದುರ್ಗಾ ಮಾತನಾಡಿ, “ಚನ್ನಬಸವ ಪಟ್ಟದೇವರು ಗುರುಗಳಲ್ಲಿಯೇ ಶ್ರೇಷ್ಠ ಗುರುವಾಗಿದ್ದರು. ಪ್ರಭುರಾವ್ ಕಂಬಳಿವಾಲೆ ಅವರು ಸಾಮಾಜಿಕ ಸೇವೆ ಸಲ್ಲಿಸಿದವರಲ್ಲಿ ಹೆಸರು ವಾಸಿಯಾಗಿದ್ದಾರೆ. ಈ ಇಬ್ಬರು ಮಹನೀಯರ ಪುಸ್ತಕ ಲೋಕಾರ್ಪಣೆ ಆಗುತ್ತಿರುವುದು ತುಂಬಾ ಸಂತೋಷದ ಸಂಗತಿ” ಎಂದು ಹೇಳಿದರು.

“ನಮ್ಮ ಟ್ರಸ್ಟ್ ವತಿಯಿಂದ ಕರ್ನಾಟಕ ಏಕೀಕರಣಕ್ಕಾಗಿ ದುಡಿದ ಸುಮಾರು 250 ಜನ ಮಹನೀಯರ ವ್ಯಕ್ತಿ ಚಿತ್ರಗಳು ಹೊರ ತರುವ ಯೋಜನೆ ಇದೆ. ಇಂದಿನ ಯುವಜನತೆ ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ ಮಹನೀಯರ ಕುರಿತು ತಿಳಿದುಕೊಳ್ಳುವುದು ಅತ್ಯವಶ್ಯಕವಾಗಿದೆ” ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ, ಚನ್ನಬಸವ ಪಟ್ಟದ್ದೇವರು ಪುಸ್ತಕ ರಚಿಸಿದ ಸಾಹಿತಿ ಸೋಮನಾಥ ನುಚ್ಚಾ, ಪ್ರಭುರಾವ್ ಕಂಬಳಿವಾಲೆ ಪುಸ್ತಕ ರಚಿಸಿದ ಸಾಹಿತಿ ಜಯಶ್ರೀ ಸುಕಾಲೆ ಮಾತನಾಡಿದರು.

ಇದನ್ನೂ ಓದಿ : ಬೀದರ್‌ | ಕೈಕೊಟ್ಟ ಮುಂಗಾರು :‌ ಜೂನ್‌ ಕಳೆದರೂ ಶೇ.50ರಷ್ಟು ದಾಟದ ಬಿತ್ತನೆ

ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಶಂಭುಲಿಂಗ ಕಾಮಣ್ಣ ಪುಸ್ತಕಗಳ ಪರಿಚಯ ಮಾಡಿಕೊಟ್ಟರು. ಪ್ರಾಚಾರ್ಯ ಬಸವರಾಜ ಮೊಳಕೀರೆ ಸ್ವಾಗತಿಸಿದರು. ಲಕ್ಷ್ಮಣ ಮೇತ್ರೆ ನಿರೂಪಿಸಿದರು. ಮಾಣಿಕರಾವ್ ಪಾಂಚಾಳ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಲಸೂರ | ಗಡಿಭಾಗದ ಸರ್ಕಾರಿ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಕಸಾಪ ಮನವಿ

ಮಹಾರಾಷ್ಟ್ರದ ಗಡಿಯೊಂದಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಉರ್ದು ಹಾಗೂ...

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...