ಬೀದರ್‌ | ಮೊಬೈಲ್‌ಗಿಂತ ಕಲೆಯತ್ತ ಮಕ್ಕಳ ಆಸಕ್ತಿ ಹೆಚ್ಚಲಿ: ಸಿದ್ರಾಮ ಸಿಂಧೆ

Date:

ಇಂದಿನ ಮಕ್ಕಳು ಮೊಬೈಲ್ ಬಳಕೆಗೆ ಹೆಚ್ಚಿನ ಸಮಯ ಮೀಸಲಿಡುತ್ತಿರುವುದರಿಂದ ಅವರ ಸೃಜನಶೀಲ ಚಟುವಟಿಕೆಗಳಿಗೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಮಕ್ಕಳನ್ನು ಕಲೆ, ಸಂಸ್ಕೃತಿ ಹಾಗೂ ಪರಂಪರೆಯೊಂದಿಗೆ ಬೆಸೆಯುವ ಅಗತ್ಯವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಹೇಳಿದರು.

- Advertisement -

ಬೀದರ್ ನಗರದ ಮೈಲೂರ ರಸ್ತೆಯಲ್ಲಿರುವ ವಿದ್ಯಾಶ್ರೀ ಮಾದರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಬುಧವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿದ್ಯಾಶ್ರೀ ಮಾದರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಸಹಯೋಗದಲ್ಲಿ ಆಯೋಜಿಸಿದ್ದ ಚಿಗುರು–2026-27ನೇ ಸಾಲಿನ ಬಾಲ ಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಕ್ರೀಡೆ, ವ್ಯಾಪಾರ ಮತ್ತು ಮೌನ: ಲಿಯೋನೆಲ್ ಮೆಸ್ಸಿ ಎಂಬ...

2013ರ ಪ್ರವಾಸದ ವೇಳೆ ಅವರು ಇಸ್ರೇಲ್‌ನ ವೆಸ್ಟರ್ನ್ ವಾಲ್‌ನಲ್ಲಿ 'ಕಿಪ್ಪಾ' (ಯಹೂದಿಗಳ ಸಾಂಪ್ರದಾಯಿಕ ಟೋಪಿ) ಧರಿಸಿ ನಿಂತಿದ್ದ ಚಿತ್ರವು, ಅವರ ಇಸ್ರೇಲ್ ಪರ ಒಲವಿಗೆ ಅಳಿಸಲಾಗದ ಸಾಕ್ಷಿಯಾಗಿ ಉಳಿದುಕೊಂಡಿದೆ. ಶಾಂತಿ ಪ್ರವಾಸದ ಹೆಸರಿನಲ್ಲಿ...

“ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ‘ಚಿಗುರು’ನಂತಹ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿವೆ. ಕಲೆ, ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸುತ್ತವೆ. ಇಂತಹ ವೇದಿಕೆಗಳ ಮೂಲಕ ಮಕ್ಕಳು ವಿವಿಧ ಕಲಾ ಪ್ರಕಾರಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸುವುದರ ಜತೆಗೆ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳುತ್ತಾರೆ” ಎಂದರು.

ವಿದ್ಯಾಶ್ರೀ ಶಾಲೆಯ ಪ್ರಾಂಶುಪಾಲ ರಾಘವೇಂದ್ರ ಕುಲಕರ್ಣಿ ಮಾತನಾಡಿ, “ಮಕ್ಕಳಿಗಾಗಿಯೇ ಇಂತಹ ವಿನೂತನ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ. ಮಕ್ಕಳ ಪ್ರತಿಭೆಯನ್ನು ಗುರುತಿಸಿ ಬೆಳೆಸಲು ಇಂತಹ ವೇದಿಕೆಗಳು ಅಗತ್ಯವಾಗಿವೆ. ವಿವಿಧ ಕಲಾ ಪ್ರಕಾರಗಳಲ್ಲಿ ಭಾಗವಹಿಸುವುದರಿಂದ ಮಕ್ಕಳ ಸೃಜನಶೀಲತೆ ಹಾಗೂ ಆತ್ಮವಿಶ್ವಾಸ ಹೆಚ್ಚುತ್ತದೆ” ಎಂದರು.

WhatsApp Image 2026 10 07 at 6.30.56 PM

ಕಾರ್ಯಕ್ರಮದಲ್ಲಿ ಮಕ್ಕಳು ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ಜಾನಪದ ಗೀತೆ, ಸಮೂಹ ನೃತ್ಯ, ನಾಟಕ ಹಾಗೂ ಏಕಾಭಿನಯ ಸೇರಿದಂತೆ ವಿವಿಧ ಕಲಾ ಪ್ರಕಾರಗಳ ಪ್ರದರ್ಶನ ಗಮನ ಸೆಳೆಯಿತು.

ವಿದ್ಯಾರ್ಥಿಗಳಾದ ಯಶಸ್ವಿಕಾ ಪಾಟೀಲ ಮತ್ತು ತಂಡ, ವೇದ್ ಶಶಿಕಾಂತ ಬಂಬುಳಗೆ ಮತ್ತು ತಂಡದ ಶಾಸ್ತ್ರೀಯ ಸಂಗೀತ, ನಂದಿನಿ ತಂಡದ ಸುಗಮ ಸಂಗೀತ ಹಾಗೂ ಭಾಗ್ಯಲಕ್ಷ್ಮಿ ಅವರ ಜಾನಪದ ಗೀತೆ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.

ದೀಪಿಕಾ ಮತ್ತು ಬಗದಲ್ ತಂಡದ ಸಮೂಹ ನೃತ್ಯಕ್ಕೆ ಮಕ್ಕಳು ಹೆಜ್ಜೆ-ಭಾವದ ಮೂಲಕ ವೇದಿಕೆಯಲ್ಲಿ ಚೈತನ್ಯ ತುಂಬಿದರು. ಅಸ್ಮಿತಾ ಮತ್ತು ತಂಡ ಅಭಿನಯಿಸಿದ ‘ಪರಿವರ್ತನಾ’ ನಾಟಕ ಸಾಮಾಜಿಕ ಸಂದೇಶದೊಂದಿಗೆ ಆಕರ್ಷಣೆಯಾಯಿತು. ಮಾಧವ ತಾಳಮಡಗಿ ಅವರ ಏಕಾಭಿನಯ ಮನಸೂರೆಗೊಳಿಸಿತು.

ಇದನ್ನೂ ಓದಿ : ಬೀದರ್‌ | ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಶಿಸ್ತು ಮೈಗೂಡಿಸಿಕೊಳ್ಳಿ : ಜಯಕುಮಾರ ಶಿಂಧೆ

ಸಂಸ್ಥೆಯ ಕಾರ್ಯದರ್ಶಿ ಗಣಪತಿ ಸೋಲಪೂರೆ, ಬಗದಲ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯ ಚೆನ್ನಬಸವ ಹೇಡೆ, ಘೋಡಂಪಳ್ಳಿ ಅಟಲ್ ಬಿಹಾರಿ ವಾಜಪೇಯಿ ಉಪನ್ಯಾಸಕ ದೇವಿದಾಸ್ ಜೋಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ಕ್ಲೆಮೆಂಟಿನಾ, ಜನಪದ ಕಲಾವಿದರ ಬಳಗದ ಅಧ್ಯಕ್ಷ ವಿಜಯಕುಮಾರ ಸೋನಾರೆ, ಪತ್ರಕರ್ತ ಶಶಿಕಾಂತ ಬಂಬುಳಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ಪ್ರವೀಣ್, ಗುರು, ಶಾಲೆಯ ಸಿಬ್ಬಂದಿ, ಪೋಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು. ಸರಸ್ವತಿ ಶೀಲವಂತ ಸ್ವಾಗತಿಸಿದರು. ಚಂದ್ರಕಾಂತ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರೀಮಿಯಂ ಲೇಖನ | ಉರ್ದು- ವಿಧಾನಸೌಧದ ಮೆಟ್ಟಿಲುಗಳ ವಿವಾದದಾಚೆ ಭಾರತದ ಭಾಷಾ–ಸಾಂಸ್ಕೃತಿಕ ಪರಂಪರೆಯ ಪ್ರಶ್ನೆ

ವಿಧಾನಸೌಧದ ಮೆಟ್ಟಿಲುಗಳು ಉರ್ದು ಹಬ್ಬಕ್ಕೆ ಸಿಗುತ್ತವೆಯೇ ಇಲ್ಲವೇ ಎಂಬುದು ಆಡಳಿತಾತ್ಮಕ ನಿರ್ಧಾರ....

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ ಕಾರಬಾರು!

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ...

‘ಹಾಫ್ ಹೆಲ್ಮೆಟ್’ ನಿಷೇಧ: ಇನ್ಮುಂದೆ ನಿಯಮ ಮೀರಿದರೆ ಭಾರೀ ದಂಡ; ಸಂಚಾರ ಪೊಲೀಸರ ಬಿಗಿ ಕ್ರಮ

ದ್ವಿಚಕ್ರ ವಾಹನ ಸವಾರರ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ...

ದೆಹಲಿಯಲ್ಲಿ ಮತ್ತೆ ನೆಲಕ್ಕುರುಳಿದ ಕಟ್ಟಡ; ಅವಶೇಷಗಳಡಿ ಜೀವಗಳಿಗಾಗಿ ಶೋಧ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಕಟ್ಟಡ ಕುಸಿತದ ಆತಂಕ ಎದುರಾಗಿದೆ. ಈಶಾನ್ಯ...