ಬೀದರ್‌ನ ಜನಪರ ಸಾಂಸ್ಕೃತಿಕ ಪ್ರತಿಷ್ಠಾನದ ಸಹಯೋಗದಲ್ಲಿ ನಾಳೆ (ಜು.26) ಯುವ ಕವಿ ಅಶ್ವಜೀತ ದಂಡಿನ ಅವರ ‘ಚಿಮ್ಮಿದ ಬುಗ್ಗೆ’ ವೈಚಾರಿಕ ಕವನ ಸಂಕಲನ ಬಿಡುಗಡೆ, ಕವಿಗೋಷ್ಠಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಗೌರವ ಸನ್ಮಾನ ಸಮಾರಂಭ ನಡೆಯಲಿದೆ.
ಬೀದರ್ ನಗರದ ಗುರುನಾನಕ ಗೇಟ್ ಎದುರಿನ ಹೋಟೆಲ್ ಕೃಷ್ಣ ರೆಜೆನ್ಸಿಯಲ್ಲಿ ಭಾನುವಾರ ಬೆಳಿಗ್ಗೆ 11ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಉದ್ಘಾಟಿಸಲಿದ್ದು, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ಹಾಗೂ ಜನಪರ ಸಾಂಸ್ಕೃತಿಕ ವೇದಿಕೆಯ ಸಂಚಾಲಕ ಸಂಜೀವಕುಮಾರ ಅತಿವಾಳೆ ಅಧ್ಯಕ್ಷತೆ ವಹಿಸಲಿದ್ದಾರೆ.
ಉಪನ್ಯಾಸಕ ಮಯೂರ ಬಸವರಾಜ ಅವರು ‘ಚಿಮ್ಮಿದ ಬುಗ್ಗೆ’ ಕೃತಿಯನ್ನು ಬಿಡುಗಡೆ ಮಾಡಲಿದ್ದಾರೆ. ಸಾಹಿತಿ ಪಾರ್ವತಿ ಸೋನಾರೆ ಅವರು ಕೃತಿ ಪರಿಚಯ ಮಾಡಿಕೊಡಲಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಅಮೃತರಾವ ಚಿಮಕೋಡೆ, ಹಿರಿಯ ಚಿಂತಕ ಕಾಶಿನಾಥ ಚೆಲ್ವಾ, ಶಿಕ್ಷಕ-ಸಾಹಿತಿ ಎಂ.ಎಸ್. ಮನೋಹರ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಖಜಾಂಚಿ ದೇವಪ್ಪ ಚಾಂಬಳೆ ಮಾಳೆಗಾಂವ ಹಾಗೂ ಸಾಹಿತಿ-ಸಂಘಟಕ ಸುಬ್ಬಣ್ಣ ಕರಕನಳ್ಳಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ : ಬೀದರ್ | ಬ್ರಿಮ್ಸ್‌ನಲ್ಲಿ ʼಮಮತೆಯ ತೊಟ್ಟಿಲುʼ ಉದ್ಘಾಟಿಸಿದ ಡಿಸಿ ಶಿಲ್ಪಾ ಶರ್ಮಾ
ಸಾಹಿತ್ಯಾಸಕ್ತರು, ಕವಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜನಪರ ಸಾಂಸ್ಕೃತಿಕ ಪ್ರತಿಷ್ಠಾನದ ಸಂಚಾಲಕ ಸಂಜೀವಕುಮಾರ ಅತಿವಾಳೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





