ಬೀದರ್‌ | ಸಿವಿಲ್ ಪೊಲೀಸ್ ಕಾನಸ್ಟೇಬಲ್ ಲಿಖಿತ ಪರೀಕ್ಷೆ: ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

Date:

ಪೊಲೀಸ್ ಇಲಾಖೆಯಲ್ಲಿನ ಖಾಲಿ ಇರುವ ಸಿವಿಲ್ ಪೊಲೀಸ್ ಕಾನಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್ 2ರಂದು ಬೀದರ್ ನಗರದಲ್ಲಿ ನಡೆಯಲಿರುವ ಲಿಖಿತ ಪರೀಕ್ಷೆಯನ್ನು ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಯಶಸ್ವಿಯಾಗಿ ನಡೆಸಲು ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

- Advertisement -

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಲಾದ ಸಿಬ್ಬಂದಿ ಹಾಗೂ ಅಧಿಕಾರಿಗಳು ನಿಗದಿತ ಸಮಯಕ್ಕೆ ಕಡ್ಡಾಯವಾಗಿ ಹಾಜರಾಗಿ ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ನಗರದ 17 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಕಲ್ಯಾಣ ಕರ್ನಾಟಕದ ಹೊರತಾದ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಯಲಿದ್ದು, 4,745 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸಂಜೆ 4 ಗಂಟೆಗೆ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಯಲಿದ್ದು, 5,882 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಸ್ವಚ್ಛತೆ, ವಿದ್ಯುತ್, ಬೆಳಕು ಹಾಗೂ ಫ್ಯಾನ್ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವ ಜವಾಬ್ದಾರಿ ಕೇಂದ್ರಗಳ ಮುಖ್ಯ ಅಧೀಕ್ಷಕರ ಮೇಲಿದೆ ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಪ್ರತಿ ಪರೀಕ್ಷಾ ಕೇಂದ್ರಕ್ಕೆ ವೀಕ್ಷಕರು, ಕಸ್ಟೋಡಿಯನ್ ಹಾಗೂ ಡ್ರೆಸ್ ಕೋಡ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಪ್ರಶ್ನೆ ಪತ್ರಿಕೆ ಹಾಗೂ ಓಎಂಆರ್ ಉತ್ತರ ಪತ್ರಿಕೆಗಳ ಸುರಕ್ಷಿತ ಸಾಗಣೆಗೆ 6 ರೂಟ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ತಹಶೀಲ್ದಾರರು ಸಂಪೂರ್ಣ ಮೇಲ್ವಿಚಾರಣೆ ವಹಿಸಲಿದ್ದಾರೆ.

ಎಲ್ಲ 17 ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆ ಕಡ್ಡಾಯವಾಗಿದ್ದು, ಪೊಲೀಸ್ ಅಧಿಕಾರಿಗಳು ಹಾಗೂ ಕಾಲೇಜುಗಳ ಪ್ರಾಂಶುಪಾಲರು ಅಗತ್ಯ ಭದ್ರತಾ ಮತ್ತು ಆಡಳಿತಾತ್ಮಕ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು. ಅಭ್ಯರ್ಥಿಗಳ ವಿವರಗಳ ಸ್ಕ್ಯಾನಿಂಗ್ ಕಾರ್ಯಕ್ಕಾಗಿ ಡಿಪ್ಲೊಮಾ ಕಾಲೇಜಿನ ಉಪನ್ಯಾಸಕರನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿದೆ ಎಂದು ತಿಳಿಸಿದರು.

ಪರೀಕ್ಷೆಯ ಸುಸೂತ್ರ ನಿರ್ವಹಣೆಗೆ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಲಾಯಿತು.

ಇದನ್ನೂ ಓದಿ : ಬೀದರ್‌ | ಮಾನವ ಕಳ್ಳಸಾಗಣೆ ತಡೆಗೆ ಜಾಗೃತಿ ಅಗತ್ಯ: ನ್ಯಾ.ರಾಘವೇಂದ್ರ ಉಪಾಧ್ಯ

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಡಿಡಿಪಿಯು ಚಂದ್ರಕಾಂತ ಶಾಬಾದಕರ್‌ ಹಾಗೂ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...

ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ, ಊರಲ್ಲಿ ಪಡಿತರವೂ ಇಲ್ಲ!

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು...

ಹೊಸನಗರ | ರೂ. 4 ಲಕ್ಷ ಮೌಲ್ಯದ ಸಾಗುವಾನಿ ನಾಟ ವಶ!

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳಂದೂರು ಗ್ರಾಮದಲ್ಲಿ...