ಬೀದರ್‌ | ಹಸ್ತಪ್ರತಿಗಳ ಸಂಗ್ರಹ, ಸಂರಕ್ಷಣೆ ಅತ್ಯಗತ್ಯ : ವೀರಣ್ಣ ದಂಡೆ

Date:

ಹಳೆಗನ್ನಡ ಸಾಹಿತ್ಯ, ಶಾಸನಗಳು ಹಾಗೂ ಹಸ್ತಪ್ರತಿಗಳು ನಮ್ಮ ಜ್ಞಾನ ಪರಂಪರೆಯ ಮೂಲ ಬೇರುಗಳಾಗಿವೆ. ಇವು ದೇಶದ ಅಮೂಲ್ಯ ಆಸ್ತಿಯಾಗಿದ್ದು, ಅವುಗಳನ್ನು ಸಂಗ್ರಹಿಸುವುದರ ಜೊತೆಗೆ ವೈಜ್ಞಾನಿಕವಾಗಿ ಸಂರಕ್ಷಿಸುವುದು ನಮ್ಮೆಲ್ಲರ ಮಹತ್ವದ ಜವಾಬ್ದಾರಿಯಾಗಿದೆ ಎಂದು ಹಿರಿಯ ವಿದ್ವಾಂಸ ಡಾ. ವೀರಣ್ಣ ದಂಡೆ ಹೇಳಿದರು.

- Advertisement -

ಬೀದರ್ ನಗರದ ಕರ್ನಾಟಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಸ್ತಪ್ರತಿ ವಿಭಾಗ, ಕರ್ನಾಟಕ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಕರಾಶಿ ಸಂಸ್ಥೆಯ ಕಲ್ಯಾಣ ಕರ್ನಾಟಕ ಸಂಶೋಧನಾ ಕೇಂದ್ರ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಎರಡು ದಿನಗಳ ಕಾಲ ನಡೆದ 23ನೇ ಅಖಿಲ ಕರ್ನಾಟಕ ಹಸ್ತಪ್ರತಿ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

“ಹಸ್ತಪ್ರತಿಗಳ ಸಂಗ್ರಹದಲ್ಲಿ ಜನಸಾಮಾನ್ಯರ ಆಸಕ್ತಿ ಗಮನಾರ್ಹವಾಗಿದೆ. ಹಲವು ವಿಶ್ವವಿದ್ಯಾಲಯಗಳಲ್ಲಿಯೂ ಅಮೂಲ್ಯ ಹಸ್ತಪ್ರತಿಗಳ ಸಂಗ್ರಹವಿದೆ. ಆದರೆ, ಅವುಗಳನ್ನು ಸಂಗ್ರಹಿಸಿಟ್ಟರೆ ಮಾತ್ರ ಸಾಲದು; ಸೂಕ್ತ ಸಂರಕ್ಷಣಾ ವ್ಯವಸ್ಥೆ ಕಲ್ಪಿಸಬೇಕು. ಇಲ್ಲದಿದ್ದರೆ ಬಿಸಿಲು, ಮಳೆ ಸೇರಿದಂತೆ ಹವಾಮಾನ ವೈಪರೀತ್ಯಗಳಿಂದ ಅವು ಹಾಳಾಗುವ ಅಪಾಯವಿದೆ. ಹಲವು ವರ್ಷಗಳಿಂದ ಸಂಗ್ರಹವಾಗಿರುವ ಈ ಜ್ಞಾನ ಸಂಪತ್ತನ್ನು ಉಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ತಿಳಿಸಿದರು.

ಒಂದು ತಾಳೆಗರಿ ಹಸ್ತಪ್ರತಿ ನಾಶವಾಗುವುದೆಂದರೆ ಕೇವಲ ಒಂದು ದಾಖಲೆ ಕಳೆದುಹೋದಂತಲ್ಲ. ಅದರೊಂದಿಗೆ ತಲೆಮಾರುಗಳಿಂದ ಹರಿದುಬಂದ ಜ್ಞಾನ, ಅನುಭವ ಹಾಗೂ ಪರಂಪರೆಯೂ ನಾಶವಾದಂತೆ. ಹೀಗಾಗಿ ಹಸ್ತಪ್ರತಿಗಳ ಸಂರಕ್ಷಣೆ ಎಂದರೆ ಪ್ರಾಚೀನ ದಾಖಲೆಗಳನ್ನು ಉಳಿಸುವುದಷ್ಟೇ ಅಲ್ಲ, ನಮ್ಮ ಪರಂಪರೆಯ ಜ್ಞಾನಸಂಪತ್ತನ್ನು ಮುಂದಿನ ಪೀಳಿಗೆಗೆ ತಲುಪಿಸುವ ಮಹತ್ವದ ಕಾರ್ಯವಾಗಿದೆ ಎಂದು ಹೇಳಿದರು.

WhatsApp Image 2026 10 28 at 7.43.45 PM

ಪರಂಪರೆಯ ಜ್ಞಾನವನ್ನು ಉಳಿಸಿಕೊಳ್ಳಲು ಹಿರಿಯರೊಂದಿಗೆ ಸಂವಾದ ನಡೆಸಬೇಕು. ಅವರ ಅನುಭವಗಳು, ನೆನಪುಗಳು ಹಾಗೂ ಅವರು ತಿಳಿದಿರುವ ಅಮೂಲ್ಯ ಸಂಗತಿಗಳನ್ನು ದಾಖಲಿಸಿಕೊಳ್ಳಬೇಕು. ಇದರಿಂದ ಮುಂದಿನ ಪೀಳಿಗೆಗೆ ಆ ಜ್ಞಾನವನ್ನು ತಲುಪಿಸಲು ಸಾಧ್ಯವಾಗುತ್ತದೆ. ಹಸ್ತಪ್ರತಿಗಳಲ್ಲಿರುವ ಜ್ಞಾನ ಪರಂಪರೆಯನ್ನು ಸಮಗ್ರವಾಗಿ ಅಧ್ಯಯನ ಮಾಡಿ, ಕೃತಿಗಳ ರೂಪದಲ್ಲಿ ಪ್ರಕಟಿಸುವ ಕಾರ್ಯವೂ ನಡೆಯಬೇಕು ಎಂದು ಸಲಹೆ ನೀಡಿದರು.

ಹಸ್ತಪ್ರತಿ ಅಧ್ಯಯನದಲ್ಲಿ ಯುವಜನರು ತೊಡಗಿಸಿಕೊಳ್ಳಲಿ

ಸಮ್ಮೇಳನದ ಸರ್ವಾಧ್ಯಕ್ಷ ಡಾ.ನಾ.ಗೀತಾಚಾರ್ಯ ಮಾತನಾಡಿ, “ಹಸ್ತಪ್ರತಿಗಳು ನಮ್ಮ ಸಾಂಸ್ಕೃತಿಕ ಹಾಗೂ ಬೌದ್ಧಿಕ ಜ್ಞಾನವನ್ನು ಜಾಗೃತಗೊಳಿಸುತ್ತಾ ಬಂದಿವೆ. ಇಂದಿನ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಹಸ್ತಪ್ರತಿ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು. ಹಸ್ತಪ್ರತಿ ಕ್ಷೇತ್ರದ ಪುನರುಜ್ಜೀವನಕ್ಕಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಸ್ತಪ್ರತಿ ವಿಭಾಗವು ಕಳೆದ 35 ವರ್ಷಗಳಿಂದ ನಿರಂತರವಾಗಿ ಶ್ರಮಿಸುತ್ತಿದೆ. ಹಸ್ತಪ್ರತಿ ಸಮ್ಮೇಳನಗಳನ್ನು ಆಯೋಜಿಸುವ ಮೂಲಕ ಕನ್ನಡ ವಿಶ್ವವಿದ್ಯಾಲಯವು ಮಹತ್ವದ ಕಾರ್ಯ ಮಾಡುತ್ತಿದೆ” ಎಂದು ಹೇಳಿದರು.

ಹಸ್ತಪ್ರತಿಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ವೀರೇಶ ಬಡಿಗೇರ, ಕರ್ನಾಟಕ ಮಹಾವಿದ್ಯಾಲಯದ ಪ್ರಾಚಾರ್ಯ ಸೋಮನಾಥ ಬಿರಾದಾರ, ಶಾಹೀನ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಅಬ್ದುಲ್ ಖದೀರ, ಕ.ರಾ.ಶಿ.ಸಂಸ್ಥೆಯ ಉಪಾಧ್ಯಕ್ಷ ಬಿ.ಜಿ.ಶೆಟಕಾರ್‌, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಮಹಾನಂದ ಮಡಕಿ, ಲಕ್ಷ್ಮೀ ಕುಂಬಾರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಹಸ್ತಪ್ರತಿಗಳು ಬಹುಶಾಸ್ತ್ರೀಯ ಜ್ಞಾನ ಸಂಪತ್ತಿನ ಪ್ರತೀಕ: ಡಾ.ವೀರೇಶ ಬಡಿಗೇರ

ಕನ್ನಡದ ಹಸ್ತಪ್ರತಿಗಳು ಹಿರಿಯರ ಜ್ಞಾನ ಸಂಪತ್ತನ್ನು ಪರಿಚಯಿಸುವ ಪ್ರಮುಖ ಆಕರಗಳಾಗಿವೆ. ಹಸ್ತಪ್ರತಿಗಳು ನಿರ್ಜೀವ ವಸ್ತುಗಳಲ್ಲ; ಅವು ಕ್ರಿಯಾಶೀಲ ಜ್ಞಾನ ಭಂಡಾರದ ಪ್ರತೀಕಗಳಾಗಿವೆ ಎಂದು ಹಸ್ತಪ್ರತಿ ವಿಭಾಗದ ಮುಖ್ಯಸ್ಥ ಹಾಗೂ ಸಂಶೋಧಕ ಡಾ. ವೀರೇಶ ಬಡಿಗೇರ ಹೇಳಿದರು.

WhatsApp Image 2026 10 28 at 7.43.30 PM

ಕರ್ನಾಟಕ ಮಹಾವಿದ್ಯಾಲಯದಲ್ಲಿ ನಡೆದ ಅಖಿಲ ಕರ್ನಾಟಕ 23ನೇ ಅಖಿಲ ಕರ್ನಾಟಕ ಹಸ್ತಪ್ರತಿ ಸಮ್ಮೇಳನದ ಎರಡನೇ ದಿನ ಬೆಳಿಗ್ಗೆ ‘ಬೀದರ್ ಜಿಲ್ಲೆಯ ಹಸ್ತಪ್ರತಿ ಸಂಪತ್ತು’ ವಿಷಯದ ಕುರಿತು ನಡೆದ ನಾಲ್ಕನೇ ಗೋಷ್ಠಿಯಲ್ಲಿ ಅವರು ವಿಷಯ ಮಂಡಿಸಿದರು.

“ಹಸ್ತಪ್ರತಿಗಳ ಅಧ್ಯಯನವು ಜ್ಞಾನಾರ್ಜನೆಯೊಂದಿಗೆ ಆತ್ಮತೃಪ್ತಿಯನ್ನೂ ನೀಡುತ್ತದೆ. ಜ್ಞಾನ ಸಂಪತ್ತಿನ ಪ್ರಸಾರಕ್ಕೂ ಸಹಕಾರಿಯಾಗಿದೆ. ಕನ್ನಡದ ಲಿಪಿಕಾರರು ಬಹುಭಾಷಾ ಜ್ಞಾನಿಗಳಾಗಿದ್ದರು. ವಚನ ಸಾಹಿತ್ಯ ಹಾಗೂ ಶಾಸ್ತ್ರ ಸಾಹಿತ್ಯದಲ್ಲಿನ ಮಹತ್ವದ ವಿಚಾರಗಳನ್ನು ಬೆಳಕಿಗೆ ತರುವಲ್ಲಿ ಹಸ್ತಪ್ರತಿಗಳು ಪ್ರಮುಖ ಪಾತ್ರ ವಹಿಸುತ್ತವೆ. ಬೀದರ್ ಜಿಲ್ಲೆಯಲ್ಲಿ ಈವರೆಗೆ ಸುಮಾರು 932 ಹಸ್ತಪ್ರತಿಗಳ ಕಟ್ಟುಗಳು ದೊರೆತಿದ್ದು, ಅವುಗಳಲ್ಲಿ 1,535ಕ್ಕೂ ಹೆಚ್ಚು ಕೃತಿಗಳಿವೆ. ಇದು ಜಿಲ್ಲೆಯ ಶ್ರೀಮಂತ ಜ್ಞಾನ ಪರಂಪರೆ ಮತ್ತು ಸಾಹಿತ್ಯಿಕ ವೈಭವವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು” ಎಂದರು.

ವಿದ್ಯಾರ್ಥಿಗಳ ಮನೋಭಾವವನ್ನು ಅರ್ಥಮಾಡಿಕೊಂಡು, ಅವರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು.ಮಕ್ಕಳಿಗೆ ಉತ್ತಮ ಸಂಸ್ಕಾರ ಮತ್ತು ಮೌಲ್ಯಾಧಾರಿತ ಶಿಕ್ಷಣ ನೀಡಬೇಕು. ವಿದ್ಯಾರ್ಥಿಗಳು ದಾರಿ ತಪ್ಪದಂತೆ ಎಚ್ಚರ ವಹಿಸಿ, ಅವರನ್ನು ಸನ್ಮಾರ್ಗದಲ್ಲಿ ಮುನ್ನಡೆಸಬೇಕು. ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಅಭಿರುಚಿಯನ್ನು ಬೆಳೆಸಿಕೊಂಡು, ಅಧ್ಯಯನದಲ್ಲಿ ತೊಡಗಿಸಿಕೊಂಡರೆ ಅವರಲ್ಲಿ ಮಾನವೀಯ ಮೌಲ್ಯಗಳು ಬೆಳೆಯಲು ಸಾಧ್ಯವಾಗುತ್ತದೆ ಎಂದರು.

WhatsApp Image 2026 10 28 at 7.43.56 PM

ಗೋಷ್ಠಿಯಲ್ಲಿ ಪ್ರಮುಖರಾದ ವಿಶ್ವನಾಥ ಮಠಪತಿ ಗೋರ್ಟಾ, ಡಾ.ಬಸವರಾಜ ಬಲ್ಲೂರ, ಡಾ.ರಾಮಚಂದ್ರ ಗಣಾಪೂರ ಹಾಗೂ ಡಾ.ಈಶ್ವರಯ್ಯ ಕೋಡಂಬಲ ಪ್ರತಿಕ್ರಿಯೆ ನೀಡಿದರು. ಗೌರವ ಅತಿಥಿಗಳಾಗಿ ಕ.ರಾ.ಶಿ. ನ್ಯಾಸದ ಕಾರ್ಯದರ್ಶಿ ಮಡಿವಾಳಪ್ಪ ಗಂಗಶೆಟ್ಟಿ, ಉಪ ಪ್ರಾಚಾರ್ಯ ಡಾ.ಶಶಿಧರ ಪಾಟೀಲ, ರಾಮಲಿಂಗೇಶ್ವರ (ಸಿಸಿರಾ) ಸೇರಿದಂತೆ ಇತರರು ಉಪಸ್ಥಿತರಿದ್ದರು.

ಬಳಿಕ ನಡೆದ ಐದನೇ ಗೋಷ್ಠಿ ‘ಪ್ರಾಚೀನ ಗದ್ಯ ಸಾಹಿತ್ಯ: ಮರು ಓದು’ ವಿಷಯದ ಗೋಷ್ಠಿಯಲ್ಲಿ ಡಾ ಲಕ್ಷ್ಮಿಕಾಂತ ಪಾಂಚಾಳ ಅವರು ‘ಚಾವುಂಡರಾಯ ಪುರಾಣ’, ಡಾ. ಶಿವಗಂಗಾ ರುಮ್ಯಾ ‘ದೇವಚಂದ್ರನ ರಾಜಾವಳಿ ಕಥೆ’, ಪ್ರೊ. ಪಾಟೀಲ ಶ್ರೀಕಾಂತ ‘ರಾಜೇಂದ್ರನಾಮೆ’ ಹಾಗೂ ಡಾ.ರಾಜಕುಮಾರ ಅಲ್ಲೂರ ‘ಕೆಂಪುನಾರಾಯನ ಮುದ್ರಾಮಂಜೂಷ’ ಕೃತಿಗಳ ಕುರಿತು ಪ್ರಬಂಧ ಮಂಡಿಸಿದರು.

ಎರಡು ದಿನಗಳ ಸಮ್ಮೇಳನದಲ್ಲಿ ಭಾಗವಹಿಸಿದ್ದ ವಿವಿಧ ಕಾಲೇಜುಗಳ ಉಪನ್ಯಾಸಕರು, ಪ್ರಾಧ್ಯಾಪಕರು ಹಾಗೂ ಸಂಶೋಧನಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಸಮ್ಮೇಳನದಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಸಾಹಿತ್ಯಾಸಕ್ತರು ಪಾಲ್ಗೊಂಡಿದ್ದರು.

WhatsApp Image 2026 10 10 at 7.46.08 PM 27
ಜಾಹೀರಾತು

ಸಮ್ಮೇಳನದ ಅಂಗವಾಗಿ ಆಯೋಜಿಸಿದ್ದ ಹಸ್ತಪ್ರತಿಗಳ ಪ್ರದರ್ಶನವು ಸಂಶೋಧಕರು, ಸಾಹಿತ್ಯಾಸಕ್ತರು ಹಾಗೂ ವಿದ್ಯಾರ್ಥಿಗಳ ಗಮನ ಸೆಳೆಯಿತು. ವಿವಿಧ ಬಗೆಯ ಹಸ್ತಪ್ರತಿಗಳ ಮೂಲಕ ಪಾರಂಪರಿಕ ಜ್ಞಾನ, ಸಂಪ್ರದಾಯಗಳು, ಸಾಂಸ್ಕೃತಿಕ ಪರಂಪರೆ ಹಾಗೂ ವಿವಿಧ ಶಾಸ್ತ್ರಗಳ ಕುರಿತು ವಿದ್ಯಾರ್ಥಿಗಳು ಮಾಹಿತಿ ಪಡೆದುಕೊಂಡರು.

ಇ‌ದನ್ನೂ ಓದಿ : SIR | ಬೀದರ್ ಜಿಲ್ಲೆಯ 2.15 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರಕ್ಕೆ!

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...

ಬಸವಣ್ಣನವರ ಕನಸಿನ ಸಮಸಮಾಜ ಇನ್ನೂ ನಿರ್ಮಾಣವಾಗಿಲ್ಲ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಸವಣ್ಣನವರು 12ನೇ ಶತಮಾನದಲ್ಲಿಯೇ ಜಾತಿರಹಿತ, ವರ್ಗರಹಿತ ಮತ್ತು ಲಿಂಗಭೇದವಿಲ್ಲದ ಸಮಸಮಾಜ ನಿರ್ಮಾಣದ...

ಜೋಯ್ಡಾ | ದೂರು ಹಿಂಪಡೆಯಲು ರೂ.10 ಲಕ್ಷ ಬೇಡಿಕೆ! ಅಬಕಾರಿ ನಿರೀಕ್ಷಕರಿಂದ ದೂರು

ಉತ್ತರ ಕನ್ನಡ ಜಿಲ್ಲೆ, ಜೋಯ್ಡಾದ ಅನಮೋಡ ಅಬಕಾರಿ ಇಲಾಖೆಯ ಅಧಿಕಾರಿಗಳ ವಿರುದ್ಧ...

ಅಲಹಾಬಾದ್ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳ ವಿರುದ್ಧ ವಕೀಲರ ಆಕ್ರೋಶ: ಪೀಠೋಪಕರಣಗಳ ಎಸೆದಾಟ

ವಕೀಲರೊಬ್ಬರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಅಜಯ್...