ಬೀದರ್ ಜಿಲ್ಲೆ ಕಮಲನಗರ ತಾಲೂಕಿನಲ್ಲಿ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಹಾಗೂ ಕೊಲೆ ಪ್ರಕರಣವು ಅತ್ಯಂತ ಅಮಾನವೀಯ ಹಾಗೂ ಖಂಡನೀಯ ಎಂದು ಕರ್ನಾಟಕ ಬಾಲಕಾರ್ಮಿಕ ಪದ್ಧತಿ ವಿರೋಧಿ ಆಂದೋಲನ ತೀವ್ರವಾಗಿ ಖಂಡಿಸಿದೆ.
ಈ ಪ್ರಕರಣವನ್ನು ಯಾವುದೇ ಪಕ್ಷಪಾತ ಮಾಡದೆ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು ಮತ್ತು ಬಾಲಕಿಯ ಸಾವಿಗೆ ಮತ್ತು ಕುಟುಂಬದವರಿಗೆ ಸೂಕ್ತ ನ್ಯಾಯ ಒದಗಿಸಿ ಕೊಡುವಂತೆ ಬಾಲಕಾರ್ಮಿಕ ಪದ್ಧತಿ ವಿರೋಧಿ ಆಂದೋಲನ ರಾಜ್ಯ ಸಂಚಾಲಕರಾದ ಸರಸ್ವತಿ, ಸಹ ಸಂಚಾಲಕ ಸಂಪತ್ ಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಬೀದರ್ | KKRTC ಬಸ್‌ಗಳಲ್ಲಿ UPI ಕ್ರಾಂತಿ: ಚಿಲ್ಲರೆ ಸಮಸ್ಯೆಗೆ ಸಿಕ್ತು ಮುಕ್ತಿ!




