ಬೀದರ್‌ | ಈಶ್ವರ ಖಂಡ್ರೆಗೆ ಡಿಸಿಎಂ ಸ್ಥಾನ ನೀಡಲು ಕಾಂಗ್ರೆಸ್ ಮುಖಂಡರ ಆಗ್ರಹ

Date:

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ಕಾಂಗ್ರೆಸ್‌ ನೇತ್ರತ್ವದ ನೂತನ ಸರ್ಕಾರದಲ್ಲಿ ಅರಣ್ಯ, ಪರಿಸರ, ಜೀವಶಾಸ್ತ್ರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಜಿಲ್ಲೆಯ ಕಾಂಗ್ರೆಸ್ ಮುಖಂಡರು ಬೇಡಿಕೆ ಮಂಡಿಸಿದ್ದಾರೆ.

- Advertisement -

ಈಶ್ವರ ಖಂಡ್ರೆ ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಲ್ಲೊಬ್ಬರಾಗಿದ್ದು, ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಸೇರಿದಂತೆ ರಾಜ್ಯಾದ್ಯಂತ ಪಕ್ಷದ ಬಲವರ್ಧನೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಅವರ ಶ್ರಮ ಅಪಾರವಾಗಿದೆ ಎಂದು‌ ಕಾಂಗ್ರೆಸ್ ಪಕ್ಷದ ಜಿಲ್ಲಾ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದಲ್ಲಿ ಇಂಪೀಚ್‌ಮೆಂಟ್‌ ಮೂಲಕ ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಲು...

ಮುಖ್ಯ ಚುನಾವಣಾ ಆಯುಕ್ತರಾದ ಗ್ಯಾನೇಶ್ ಕುಮಾರ್ ಅವರಿಗೆ 2023ರ ಕಾಯ್ದೆಯ ಮೂಲಕ ಸರ್ಕಾರ ಕಾನೂನು ರಕ್ಷಣೆ ಕೊಟ್ಟಿರಬಹುದು, ಆದರೆ ಅವರಿಗೆ ಯಾವುದೇ ರೀತಿಯ ಸಾಂವಿಧಾನಿಕ ರಕ್ಷಣೆ ಇಲ್ಲ. ಹಾಗಾಗಿ ಅವರು ತಾವಾಗಿಯೇ ರಾಜೀನಾಮೆ...

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ...

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ಈಶ್ವರ ಖಂಡ್ರೆ ಅವರು ನಾಲ್ಕನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಈ ಹಿಂದೆ ಪೌರಾಡಳಿತ ಸಚಿವರಾಗಿ ಮಾದರಿಯ ಆಡಳಿತ ನೀಡಿದ್ದಾರೆ. ಪ್ರಸ್ತುತ ಅರಣ್ಯ, ಪರಿಸರ, ಜೀವಶಾಸ್ತ್ರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಮರ್ಥವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಹಸಿರು ಕ್ರಾಂತಿಯತ್ತ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ. ರಾಜ್ಯದ ಪ್ರಭಾವಿ ಸಚಿವರಲ್ಲಿ ಒಬ್ಬರಾಗಿರುವ ಅವರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿಯೂ ರಾಜ್ಯದಾದ್ಯಂತ ಪ್ರಭಾವ ಹೊಂದಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾತ್ಯತೀತ ತತ್ವಗಳಲ್ಲಿ ನಂಬಿಕೆ ಇಟ್ಟುಕೊಂಡಿರುವ ದೂರದೃಷ್ಟಿಯ ನಾಯಕನಾದ ಈಶ್ವರ ಖಂಡ್ರೆ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವುದು ಅಗತ್ಯವಾಗಿದೆ. 2028ರ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಅವರಂತಹ ಧುರೀಣರಿಗೆ ಸೂಕ್ತ ಸ್ಥಾನಮಾನ ನೀಡಬೇಕಾಗಿದೆ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ‘ಅಹಿಂದ’ ನಾಯಕನ ನಿರ್ಗಮನ

ಖಂಡ್ರೆ ಅವರಿಗೆ ಡಿಸಿಎಂ ಸ್ಥಾನ ನೀಡಿದರೆ ಕಲ್ಯಾಣ ಕರ್ನಾಟಕ ಭಾಗ ಹಾಗೂ ರಾಜ್ಯದ ಅಭಿವೃದ್ಧಿಗೆ ಮತ್ತಷ್ಟು ಉತ್ತೇಜನ ದೊರೆಯಲಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಪ್ರಧಾನ ಕಾರ್ಯದರ್ಶಿ ಎಂ.ಎಂ.ಸಮಿ, ಜಾರ್ಜ್ ಫರ್ನಾಂಡೀಸ್, ಕಾರ್ಯದರ್ಶಿ ಸುನೀಲ್ ಬಚ್ಚನ್, ರವೀಂದ್ರ, ಕೆಪಿಸಿಸಿ ಸದಸ್ಯ ಬಾಬುರಾವ್ ತುಂಬಾ, ಬೀದರ್ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಚನಶೆಟ್ಟಿ, ಭಾಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಣಮಂತರಾವ್ ಚವ್ಹಾಣ್, ನಿಸಾರ್ ಅಹಮ್ಮದ್, ಬಸವಕಲ್ಯಾಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೀಲಕಂಠ ರಾಠೋಡ್, ಔರಾದ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ ಹಲಬರ್ಗೆ, ಆನಂದ ಚವಾಣ್, ಬಿಡಿಎ ಸದಸ್ಯರಾದ ಭಗವಾನರಾವ್ ಪಾಂಡ್ರೆ, ವಿನೋದಕುಮಾರ ಬಂದಿಗೆ, ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಕೆ. ಸಂಜುಕುಮಾರ, ಜಯಸೂರ್, ಪರಿಶಿಷ್ಟ ಪಂಗಡ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ರಾಕೇಶ್ ಕುರುಬಖೇಳಗಿ, ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಘಟಕದ ವಕ್ತಾರ ಶಂಕರ ಜ್ಯಾಂತಿಕರ್ ಮತ್ತಿತರರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ ರಾಜಕೀಯ ಒತ್ತಡ, ಬ್ಲ್ಯಾಕ್‌ಮೇಲ್‌ನ ಆಯುಧವಾಗಬಾರದು

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ...

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ವಿಡಿಯೋ: ಇಬ್ಬರು ಪೊಲೀಸ್ ವಶಕ್ಕೆ

ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಉದ್ದೇಶದಿಂದ...

ಫಾರ್ಮ್‌ 6 ಸುಳ್ಳು ಘೋಷಣೆಗೆ ಒತ್ತು ನೀಡುತ್ತಿದೆ: ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ವೇಳೆ ಮತದಾರರ...