ಬೀದರ್‌ | ದೇಶದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷದ ಕೊಡುಗೆ ಅನನ್ಯ : ಸಚಿವ ಈಶ್ವರ ಖಂಡ್ರೆ

Date:

ಶಿಕ್ಷಣ, ಆರೋಗ್ಯ, ಕೃಷಿ ಹಾಗೂ ಕೈಗಾರಿಕಾ ಕ್ಷೇತ್ರ ಸೇರಿದಂತೆ ದೇಶದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷ ನೀಡಿರುವ ಕೊಡುಗೆಗಳು ಅಮೂಲ್ಯವಾಗಿವೆʼ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

- Advertisement -

ಬೀದರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿ, ʼಸ್ವಾತಂತ್ರ್ಯೋತ್ತರ ಭಾರತದಲ್ಲಿ ಸಂವಿಧಾನ ರಚನೆ, ಪ್ರಜಾಸತ್ತಾತ್ಮಕ ವ್ಯವಸ್ಥೆಯ ಸ್ಥಾಪನೆ, ಜಾತ್ಯತೀತತೆ, ಸಾಮಾಜಿಕ ನ್ಯಾಯ, ಬಡವರು–ದುರ್ಬಲರ ಸಬಲೀಕರಣಕ್ಕೆ ಕಾಂಗ್ರೆಸ್‌ ಶ್ರಮಿಸಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕಾಂಗ್ರೆಸ್ ಪಕ್ಷ ಕೇವಲ ರಾಜಕೀಯ ಪಕ್ಷವಲ್ಲ. ಅದು ದೇಶದ ಏಕತೆ, ಸಮಾನತೆ, ಸೌಹಾರ್ದತೆ ಮತ್ತು ಸರ್ವಜನ ಕಲ್ಯಾಣದ ಚಳವಳಿ. ಈ ಮಹಾನ್ ಪರಂಪರೆ ಮತ್ತು ಮೌಲ್ಯಗಳನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆʼ ಎಂದು ತಿಳಿಸಿದರು.

WhatsApp Image 2025 12 28 at 5.39.18 PM

ʼಸ್ವಾತಂತ್ರ್ಯ ಹೋರಾಟದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಐತಿಹಾಸಿಕ ಪಾತ್ರ ವಹಿಸಿದೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಮಹಾತ್ಮಾ ಗಾಂಧಿ, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್, ಡಾ.ಬಿ.ಆರ್.ಅಂಬೇಡ್ಕರ್ ಸೇರಿದಂತೆ ಅನೇಕ ಮಹಾತ್ಮರು ಅಮೂಲ್ಯ ಕೊಡುಗೆ ನೀಡಿದ್ದಾರೆʼ ಎಂದರು.

ಇದನ್ನೂ ಓದಿ : ಬೀದರ್‌ | ಮೌಢ್ಯ, ಅಂಧಶ್ರದ್ಧೆ ನಿರ್ಮೂಲನೆಗೆ ಕ್ರಮ ವಹಿಸಿ : ದಲಿತ ಯುನಿಟಿ ಮೂವ್ಮೆಂಟ್

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಪೂಜಾ ಜಾರ್ಜ್‌, ಮಾಜಿ ಸಂಸದ ನರಸಿಂಗರಾವ್‌ ಸೂರ್ಯವಂಶಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್‌ ಚಿಮಕೊಡೆ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೋಯಾಬೀನ್ ಖರೀದಿಗೆ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...

ಬೀದರ್‌ | ಬೈಕ್ ಅಪಘಾತ: ಇಬ್ಬರು ಯುವಕರು ಸಾವು

ನೆರೆಯ ತೆಲಂಗಾಣದ ಸಂಗಾರೆಡ್ಡಿ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಬೀದರ್‌ | ನ.28, 29ರಂದು ಅನುಭವ ಮಂಟಪ ಉತ್ಸವ : ತುಮಕೂರು ಸಿದ್ಧಗಂಗೆ ಶ್ರೀಗಳಿಗೆ ಆಹ್ವಾನ

ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪ ಪರಿಸರದಲ್ಲಿ ನವೆಂಬರ್ 28...