ಬೀದರ್‌ | ಜ್ಞಾನೇಶಕುಮಾರ ವಜಾಗೊಳಿಸಿ, ಬಂಧಿಸಲು ಆಗ್ರಹಿಸಿ ಕಾಂಗ್ರೆಸ್‌ ಪ್ರತಿಭಟನೆ

Date:

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶಕುಮಾರ ವಜಾಗೊಳಿಸಿ ಬಂಧಿಸಬೇಕೆಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ನಗರದಲ್ಲಿ ಸೋಮವಾರ ಬೃಹತ್‌ ಪ್ರತಿಭಟನೆ ನಡೆಯಿತು.

- Advertisement -

ಬೀದರ್‌ ನಗರದ ಅಂಬೇಡ್ಕರ್‌ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ಛತ್ರಪತಿ ಶಿವಾಜಿ ವೃತ್ತದ ಮಾರ್ಗವಾಗಿ ಪುನಃ ಅಂಬೇಡ್ಕರ್‌ ವೃತ್ತದವರೆಗೆ ನಡೆಯಿತು. ಮೆರವಣಿಗೆ ಪಕ್ಷದ ಕಾರ್ಯಕರ್ತರು, ʼವೋಟ್‌ ಚೋರಿ ನಿಲ್ಲಿಸಿ, ದೇಶ ಉಳಿಸಿʼ, ʼಜ್ಞಾನೇಶ್ವರ ಅವರನ್ನು ಕೂಡಲೇ ಬಂಧಿಸಿʼ, ʼಮತ ಕದ್ದು ಗೆದ್ದವರು, ದೇಶ ಕದ್ದು ಆಳುತ್ತಿದ್ದಾರೆʼ, ʼಎಸ್‌ಐಆರ್ ಹೆಸರಿನಲ್ಲಿ ಮತ ಹಕ್ಕು ಕಸಿಯಬೇಡಿʼ ಎಂಬ ಭಿತ್ತಿಪತ್ರಗಳನ್ನು ಹಿಡಿದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾ‌ರ್ ವಿರುದ್ಧ ಘೋಷಣೆ ಕೂಗಿದರು. ಜ್ಞಾನೇಶ್ ಕುಮಾ‌ರ್ ಬಂಧನಕ್ಕೆ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ವಿಧಾನ ಪರಿಷತ್‌ ಸದಸ್ಯ ಭೀಮರಾವ್‌ ಪಾಟೀಲ್‌ ಮಾತನಾಡಿ, ʼಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ಅವರು ಎಸ್‌ಐಆರ್ ಹೆಸರಿನಲ್ಲಿ ಮತದಾರರಿಗೆ ಅನ್ಯಾಯ ಎಸಗುತ್ತಿದ್ದಾರೆ. ಕೂಡಲೇ ಅವರ ಮೇಲೆ ಸೊಮೊಟೊ ಕೇಸ್‌ ದಾಖಲಿಸಿ, 420 ಪ್ರಕರಣ ದಾಖಲಿಸಿ ದೇಶದ ನ್ಯಾಯ ಒದಗಿಸಬೇಕುʼ ಎಂದು ಆಗ್ರಹಿಸಿದರು.

ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಅಬ್ದುಲ್‌ ಮನ್ನಾನ್‌ ಸೇಠ್‌ ಮಾತನಾಡಿ, ʼಕೇಂದ್ರ ಚುನಾವಣಾ ಆಯೋಗವು ಕೇಂದ್ರದ ಬಿಜೆಪಿ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದೆ. ಇದು ಸಂವಿಧಾನ ವಿರೋಧಿ ನಡೆಯಾಗಿದೆ. ಇದರಿಂದ ದೇಶದ ಲಕ್ಷಾಂತರ ಜನರು ಮತ ಹಕ್ಕು ಕಳೆದುಕೊಂಡಿದ್ದಾರೆ. ನೀಟ್‌ ಪರೀಕ್ಷೆ ಅಕ್ರಮ ನಡೆದರೆ ಮರುಪರೀಕ್ಷೆ ನಡೆಸುವಂತೆ, ಎಸ್‌ಐಆರ್ ಅಕ್ರಮವಾಗಿ ನಡೆಸಿದ ಬಳಿಕ ಚುನಾವಣೆಗಳು ನಡೆದ ರಾಜ್ಯಗಳಲ್ಲಿ ಮರುಚುನಾವಣೆ ನಡೆಸಬೇಕು” ಎಂದರು.

“ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿ ಇರುವ ಕಡೆ ಒಂದು ಸಮುದಾಯದ ಮತದಾರರನ್ನು ಟಾರ್ಗೆಟ್‌ ಮಾಡಿ ಅವರನ್ನು ಮತದಾರರ ಪಟ್ಟಿಯಿಂದ ತೆಗೆಯಲು ಬಿಜೆಪಿ-ಆರ್‌ಎಸ್‌ಎಸ್‌ನವರು ಹುನ್ನಾರ ನಡೆಸುತ್ತಿದ್ದಾರೆ. ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಪ್ರಜಾತಂತ್ರ ವಿರೋಧಿಯಾಗಿ ಕೆಲಸ ನಡೆಸುತಿದ್ದು, ಅವರೇ ಇಂತಹ ಕೃತ್ಯಗಳಿಗೆ ಅವಕಾಶ ಮಾಡಿಕೊಡುತ್ತಿದ್ದಾರೆ. ಕೂಡಲೇ ಅವರನ್ನು ವಜಾಗೊಳಿಸಿ, ಜೈಲಿಗಟ್ಟಬೇಕು. ಜ್ಞಾನೇಶಕುಮಾರ ತೊಲಗುವರೆಗೂ ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತದೆ” ಎಂದರು.

ಮಾಜಿ ಎಂಎಲ್ಸಿ ಅರವಿಂದಕುಮಾರ ಅರಳಿ ಮಾತನಾಡಿ, “ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾಗಿ ನೇಮಕವಾದ ದಿನದಿಂದಲೂ ಜ್ಞಾನೇಶಕುಮಾರ ಬಿಜೆಪಿ ಪಕ್ಷದ ಅಣತಿಯಂತೆ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನರ ಹಕ್ಕು ಕಸಿಯುವ ತಂತ್ರಕ್ಕೆ ಕೇಂದ್ರ ಚುನಾವಣಾ ಆಯೋಗ ಮಾಡುತ್ತಿದ್ದು, ಇದು ಸಂವಿಧಾನ ವಿರೋಧಿಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಬೆಂಬಲಿತ ಮತದಾರರನ್ನು ಗುರಿಯಾಗಿಸಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಹುನ್ನಾರಕ್ಕೆ ಬಿಜೆಪಿಯವರು ಕೈಹಾಕಿದ್ದಾರೆ. ಈ ಅವೈಜ್ಞಾನಿಕ ಮಾದರಿಯ ಎಸ್‌ಐಆರ್ ಸಂಪೂರ್ಣ ರದ್ದಾಪಡಿಸಬೇಕು” ಎಂದು ಆಗ್ರಹಿಸಿದರು.

WhatsApp Image 2026 09 28 at 3.50.22 PM 2

ಮುಖಂಡ ಮಕ್ಸೂದ್‌ ಚಂದಾ ಮಾತನಾಡಿ, “ಎಸ್‌ಐಆರ್ ಮುಖಾಂತರ ಮತದಾನದ ಹಕ್ಕನ್ನು ಕಸಿಯುತ್ತಿರುವ ಚುನಾವಣಾ ಆಯೋಗವು ಪ್ರಜಾತಂತ್ರದ ಕೊಲೆ ಮಾಡುತ್ತಿದೆ. ಚುನಾವಣಾ ವ್ಯವಸ್ಥೆ ಮೇಲೆ ದೇಶದ ಜನರು ನಂಬಿಕೆ ಕಳೆದುಕೊಂಡಿದ್ದು, ಇದು ಸಂವಿಧಾನ ಧಕ್ಕೆ ತರುತ್ತಿರುವ ಸಿಇಸಿ ಜ್ಞಾನೇಶಕುಮಾರ ಅವರನ್ನು ಕೂಡಲೇ ವಜಾಗೊಳಿಸಬೇಕು” ಎಂದು ಒತ್ತಾಯಿಸಿದರು.

ರಾಜ್ಯ ಮಹಿಳಾ ಕಾಂಗ್ರೆಸ್‌ ಸಮಿತಿ ಉಪಾಧ್ಯಕ್ಷ ರಾಜಶ್ರೀ ಶ್ರೀಕಾಂತ ಸ್ವಾಮಿ, ಜಿಲ್ಲಾ ಕಾಂಗ್ರೆಸ್‌ ಮುಖಂಡರಾದ ಅಮೃತರಾವ ಚಿಮಕೋಡೆ, ಬಸವರಾಜ ಬುಳ್ಳಾ, ಸಂಜಯ ಜಾಗೀರದಾರ, ಬಸಿರೋದ್ದಿನ್‌ ಹಾಲೆಹಿಪ್ಪರ್ಗಾ ಸೇರಿದಂತೆ ಮತ್ತಿರರು ಮಾತನಾಡಿ, “ಕೇಂದ್ರ ಚುನಾವಣಾ ಆಯೋಗದ ಆಯುಕ್ತ ಜ್ಞಾನೇಶಕುಮಾರ ಅವರನ್ನು ವಜಾಗೊಳಿಸಿ, ಬಂಧಿಸಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ : ಭಗತ್‌ ಸಿಂಗ್‌ ಯುವ ಜನಾಂಗದ ಕ್ರಾಂತಿಯ ಚಿಲುಮೆ

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಪ್ರಮುಖರಾದ ಪಂಡಿತ ಚಿದ್ರಿ, ದತ್ತಾತ್ರಿ ಮೂಲಗೆ, ಭೀಮಶೇನರಾವ್‌ ಸಿಂಧೆ, ಶಂಕರರಾವ್‌ ದೊಡ್ಡಿ, ವಿನೋದ ಅಪ್ಪೆ, ಗೋವರ್ಧನ ರಾಠೋಡ್‌, ಮುಹಮ್ಮದ್‌ ಗೌಸ್‌, ಜಾನ್‌ ವೇಸ್ಲಿ, ಸಚಿನ್‌ ಮಲ್ಕಾಪುರ ಸೇರಿದಂತೆ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...

UPI ವಹಿವಾಟಿನ ಮೇಲಿನ ಶುಲ್ಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ 2,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ...

‘ದೇಶದ ನೌಕರಶಾಹಿ ಆತ್ಮಸಾಕ್ಷಿಯ ಕರೆಯನ್ನು ಆಲಿಸಬೇಕು.’ ಮಾಜಿ ಚುನಾವಣಾ ಆಯುಕ್ತ ಅಶೋಕ್‌ ಲವಾಸ ಹೇಳಿದ ಆತ್ಮಸಾಕ್ಷಿಯ ಕತೆ

ಸಾರ್ವಜನಿಕ ಸೇವೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯದ ಹಾದಿಯಲ್ಲಿ ನೈತಿಕ ಸಂದಿಗ್ಧತೆಯನ್ನು ಎದುರಿಸಿದಾಗ,...

ವರ್ಷಗಳಿಂದ ನೀರಿಲ್ಲದೆ ಸೊರಗಿದ ಗ್ರಾಮ; ಹತಾಶೆಯಿಂದ ಊರನ್ನೇ ಬಿಕರಿಗಿಟ್ಟ ನಿವಾಸಿಗಳು

ಒಂದೆಡೆ ನೀರಾವರಿ ಯೋಜನೆ, ಇನ್ನೊಂದೆಡೆ ನೀರಿಗಾಗಿ ಪರದಾಡುವ ರೈತರು. ಯೋಜನೆ ಆರಂಭವಾಗಿ...