ಬೀದರ್‌ | ಕಾಂಗ್ರೆಸ್‌ನಿಂದ ಜನರನ್ನು ಒಗ್ಗೂಡಿಸುವ ಕಾರ್ಯ : ಸಿಎಂ ಡಿ.ಕೆ.ಶಿವಕುಮಾರ

Date:

ಕಾಂಗ್ರೆಸ್‌ ನೇತ್ರತ್ವದ ರಾಜ್ಯ ಸರ್ಕಾರದ ಮಾದರಿ ಗ್ಯಾರಂಟಿಗಳನ್ನು ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳು ಬೇರೆ ರಾಜ್ಯಗಳಲ್ಲಿ ಜಾರಿಗೊಳಿಸುವೆ. ಈ ಪಂಚ ಗ್ಯಾರಂಟಿಗಳನ್ನು ವಿಶ್ವಸಂಸ್ಥೆ ಸೇರಿದಂತೆ ಅನೇಕ ಸಂಸ್ಥೆಗಳ ಮೆಚ್ಚುಗೆಗೆ ಪಾತ್ರವಾಗಿವೆ. ಇಡೀ ದೇಶಕ್ಕೆ ಮಾದರಿಯಾದ ಪಂಚ ಗ್ಯಾರಂಟಿಗಳು ನುಡಿದಂತೆ ನಡೆದ ನಮ್ಮ ಸರ್ಕಾರದ ಸಾಧನೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದರು.

- Advertisement -

ಬೀದರ್ ನಗರದ ಗಣೇಶ ಮೈದಾನದಲ್ಲಿ ಸೋಮವಾರ ಸಂಜೆ ಆಯೋಜಿಸಿದ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿ, “ಕರ್ನಾಟಕದ ಕಾಂಗ್ರೆಸ್‌ ನೇತ್ರತ್ವದ ಸರ್ಕಾರದ ಗ್ಯಾರಂಟಿಗಳ ಜಾರಿಯಾಗಲು ಕಾಂಗ್ರೆಸ್ ಕಾರ್ಯಕರ್ತರ ಫಲವಾಗಿದೆ. ಪಂಚ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ. ಸಿದ್ರಾಮಯ್ಯ ನೇತ್ರತ್ವದ ಸರ್ಕಾರ ಜಾರಿಗೊಳಿಸಿದ ಎಲ್ಲ ಯೋಜನೆಗಳು ಮುಂದುವರೆಯುತ್ತವೆ” ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಬಿಜೆಪಿ ನೇತ್ರತ್ವದ ಮೋದಿ ಸರ್ಕಾರ ಜನರಿಗೆ ಅಚ್ಚೆ ದಿನ್‌ ತರುತ್ತೇವೆ ಎಂದು ಹೇಳಿತು. ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಣ ಜಮೆ ಮಾಡುತ್ತೇವೆ ಎಂದು ಮಾತುಕೊಟ್ಟು ʼಜನಧನʼ ಹೆಸರಿನಲ್ಲಿ ಖಾತೆ ತೆರೆಯುವಂತೆ ಹೇಳಿದರು. ಆದರೆ, ಯಾರೊಬ್ಬರ ಖಾತೆಗೂ ಹಣ ಬರಲಿಲ್ಲ. ಮೂರು ಅವಧಿಗೆ ಅಧಿಕಾರಕ್ಕೆ ಬಂದರೂ ನಮ್ಮ ಖಾತೆಗೆ ಹಣ ಬರಲಿಲ್ಲ ಎಂದು ಎಲ್ಲರೂ ಮೋದಿಸರ್ಕಾರಕ್ಕೆ ಕೇಳಬೇಕು ಎಂದು ಕಾರ್ಯಕರ್ತರಿಗೆ ಹೇಳಿದರು.

“ನಾನು ಪಕ್ಷದ ಕಾರ್ಯಕರ್ತ, ವಿದ್ಯಾರ್ಥಿ ನಾಯಕನಾಗಿ ಇಲ್ಲಿಯವರೆಗೆ ಬೆಳೆದು ಬಂದಿದ್ದೇನೆ. ನನ್ನ ಹಾಗೇ ನೂರಾರು ಕಾರ್ಯಕರ್ತರು ಪ್ರತಿಯೊಂದು ಕ್ಷೇತ್ರದಲ್ಲಿ ಇರಬೇಕೆಂಬ ದೃಷ್ಟಿಯಿಂದ ಪ್ರತಿಯೊಂದು ಪಂಚಾಯತ್‌ನಲ್ಲಿ 6 ಜನರನ್ನು ಗ್ಯಾರಂಟಿ ಅನುಷ್ಠಾನ ಸಮಿತಿಗೆ ನೇಮಿಸಲು ತೀರ್ಮಾನಿಸಲಾಗಿದೆ. ಜಿಲ್ಲಾ ಸಚಿವರು, ಶಾಸಕರು, ಗ್ಯಾರಂಟಿ ಸಮಿತಿಯ ಮುಖ್ಯಸ್ಥರು ಅವರನ್ನು ಒಂದು ತಿಂಗಳೊಳಗೆ ನೇಮಕ ಮಾಡುತ್ತಾರೆ. ಗ್ಯಾರಂಟಿ ಯೋಜನೆಗಳನ್ನು ಮರುಪರಿಶೀಲನೆ ನಡೆಸಿ ಅರ್ಹ ಫಲಾನುಭವಿಗಳಿಗೆ ನೇರವಾಗಿ ತಲುಪುವಂತೆ ಮಾಡಲಾಗುವುದು ಎಂದರು.

WhatsApp Image 2026 07 07 at 5.25.35 AM

“ಪ್ರತಿಯೊಬ್ಬರು ಮತ ಹಕ್ಕು ಕಾಪಾಡಿಕೊಳ್ಳುವುದು ಎಲ್ಲರ ಕರ್ತವ್ಯವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಎಲ್ಲರು ಭಾಗವಹಿಸಬೇಕು. ಬಿಎಲ್‌ಒ ನೀಡಿದ ಎನುಮರೇಷನ್‌ ಫಾರಂ ಭರ್ತಿ ಮಾಡಿ ಪುನಃ ಬೂತ್‌ ಮಟ್ಟದ ಅಧಿಕಾರಿಗಳಿಗೆ ನೀಡಬೇಕು. ನಮ್ಮ ಪಕ್ಷದಿಂದ ನೇಮಿಸಿದ ಬೂತ್‌ ಮಟ್ಟದ ಎಜೆಂಟ್‌ಗಳು ಮತದಾರರಿಗೆ ಸಹಕರಿಸಿ ಎಸ್‌ಐಆರ್ ಕುರಿತು ಮಾಹಿತಿ ನೀಡಬೇಕು ಎಂದು ಸಲಹೆ ನೀಡಿದರು.

“ಕೊರೋನಾ ಸಂಕಷ್ಟದ ಸಮಯದಲ್ಲಿ ಅಧಿಕಾರ ವಹಿಸಿಕೊಂಡು, ಕಳೆದ ಆರು ವರ್ಷಗಳ ಕಾಲ‌ ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ. ಅಲ್ಲಿಂದ ನಾವು ಹಲವಾರು ಚುನಾವಣೆಗಳನ್ನು ಎದುರಿಸಿದ್ದೇವೆ. ಆ ಸಮಯದಲ್ಲಿ ನಮಗೆ ಶಕ್ತಿ ತುಂಬಿದ್ದು ನಮ್ಮ ಕಾರ್ಯಕರ್ತರು. ನಾವೆಲ್ಲಾ ಒಟ್ಟಾಗಿ ಸೇರಿ 136 ಸೀಟುಗಳನ್ನು ಗೆದ್ದೆವು. ನಾನೊಬ್ಬ ಕಾರ್ಯಕರ್ತನಾಗಿ ಬೆಳೆದು ಬಂದವನು. ನಮ್ಮ ಪಕ್ಷದ ಕಾರ್ಯಕರ್ತರೇ ಆಧಾರ ಸ್ಥಂಭ. ಬೂತ್‌ ಮಟ್ಟದಲ್ಲಿ ಪಕ್ಷ ಅಧಿಕಾರಕ್ಕೆ ತರುವುದು ನಿಮ್ಮೆಲ್ಲರ ಜವಾಬ್ದಾರಿಯಾಗಿದೆ. 2028ರ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಯಾರೂ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ” ಎಂದು ಕಾರ್ಯಕರ್ತರಿಗೆ ತಿಳಿಸಿದರು.

“ಅಮ್ಮನ ನೆನಪು ಪ್ರೀತಿಯ ಮೂಲ, ಗುರುವಿನ ನೆನಪು ಜ್ಞಾನವೇ ಮೂಲ, ದೇವರ ನೆನಪು ಭಕ್ತಿಯ ಮೂಲ, ಈ ಮೂರರ ನೆನಪು ಮನುಷ್ಯತ್ವದ ಮೂಲ, ಮನುಷ್ಯತ್ವ ಮೋಕ್ಷಕ್ಕೆ ಮೂಲ” ಎನ್ನುವಂತೆ ಐದು ಗ್ಯಾರಂಟಿ ಯೋಜನೆಗಳನ್ನು ಪಡೆಯುವವರು ಮನುಷ್ಯತ್ವದಿಂದ ನೆನಪಿನಲ್ಲಿಟ್ಟುಕೊಳ್ಳಬೇಕು” ಎಂದು ಕವಿತೆಯ ಸಾಲು ಮುಖಾಂತರ ತಿಳಿಸಿದರು.

ಈ ಹಿಂದೆ ವಿಧಾನಸಭೆ ಚುನಾವಣಾ ಪ್ರಚಾರ ಕಾರ್ಯದಲ್ಲಿ ನಾನು ಹೇಳಿದ “ಕಮಲ ಕೆರೆಯಲ್ಲಿದ್ದರೆ ಚಂದ, ತೆನೆ ಹೊಲದಲ್ಲಿದ್ದರೆ ಚಂದ, ಈ ದಾನ ಧಾರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚಂದ” ಎಂಬ ಸಾಲಿನಂತೆ ರಾಜ್ಯದಲ್ಲಿ ನಾವು ಅಧಿಕಾರ ಪಡೆದು ಕಾರ್ಯಕರ್ತರಿಗೆ ಶಕ್ತಿ ತುಂಬಿದ್ದೇವೆ ಎಂದರು.

ದೇಶದಲ್ಲಿ ದಿನಬಳಕೆಯ ವಸ್ತುಗಳ ಬೆಲೆ ಗಗಕ್ಕೇರಿದೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಜನತೆಗೆ ತೈಲ, ಚಿನ್ನ ಖರೀದಿಸಬೇಡಿ ಅಂದ್ರು, ಮಾಂಗಲ್ಯ ತೆಗೆದುಕೊಳ್ಳಬೇಡಿ ಅಂದ್ರು. ಆದರೆ ರಾಮನ ಹೆಸರಿನಲ್ಲಿ ಜನರು ಚಿನ್ನ, ಬೆಳ್ಳಿ ಕೊಟ್ಟರು. ಅದು ಬಳಸಿಕೊಂಡರು. ಇದೀಗ ದೇಶದಲ್ಲಿ ಧರ್ಮ, ರಾಮನ ಹೆಸರಿನಲ್ಲಿ ಹಣ ಪಡೆದು ಲೂಟಿ ನಡೆಯುತ್ತಿದೆ. ಈ ಲೂಟಿ ಹೆಸರಿನಲ್ಲಿ ಮತ ಕೇಳುವ ಸಾಮರ್ಥ್ಯ ಬಿಜೆಪಿಯವರು ಕಳೆದುಕೊಂಡಿದ್ದಾರೆ ಎಂದು ಟೀಕಿಸಿದರು.

WhatsApp Image 2026 07 07 at 5.25.36 AM 1

ಪ್ರತಿ ಪಂಚಾಯತ್‌ಗೆ ಭಾರತ್‌ ಜೋಡೊ ಯುವಕ ಸಂಘ

“ಯುವಕರಲ್ಲಿ ಕ್ರೀಡೆ, ಸಂಸ್ಕೃತಿ, ಭ್ರಾತೃತ್ವ, ಸಾಂವಿಧಾನಿಕ ಮೌಲ್ಯಗಳು ಹಾಗೂ ಸಂಘಟನೆಯನ್ನು ಬಲವರ್ಧನೆಗೊಳಿಸಲು ನಾವು ಭಾರತ್ ಜೋಡೋ ಯುವಕ ಸಂಘವನ್ನು ಸ್ಥಾಪಿಸಲಿದ್ದೇವೆ. ಸದ್ಯದಲ್ಲಿಯೇ ಪ್ರತಿ ಪಂಚಾಯತ್‌ಗಳಿಗೆ ಆದೇಶ ಬರುತ್ತದೆ. ಮುಂದಿನ 3-4 ತಿಂಗಳಲ್ಲಿ 72 ಸಾವಿರ ಸರ್ಕಾರಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಿದ್ದೇವೆ ಹಾಗೂ ಇ-ಖಾತಾದಂತಹ ಸುಧಾರಿತ ವ್ಯವಸ್ಥೆಗಳನ್ನು ತಂದಿದ್ದೇವೆ. ಯಾರೂ ಒಂದು ರೂಪಾಯಿ ಲಂಚ ನೀಡದೆ ಸರ್ಕಾರ ಸೌಲಭ್ಯ ಪಡೆಯಬೇಕು. ಮುಂದಿನ 5 ತಿಂಗಳಲ್ಲಿ ಜಿಲ್ಲಾ, ತಾಲೂಕು ಪಂಚಾಯತ್‌, ಗ್ರಾಮ ಪಂಚಾಯತ್‌ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನೂ ನಡೆಸಲಿದ್ದೇವೆ. ಬೀದರ್‌ ಜಿಲ್ಲೆಯ ನೀರಾವರಿ ಸಮಸ್ಯೆ ಬಗ್ಗೆ ಚರ್ಚಿಸಿ ರೈತರ ಏಳಿಗೆಗೆ ಶ್ರಮಿಸಲಾಗುವುದು” ಎಂದು ಭರವಸೆ ನೀಡಿದರು.

ಬೀದರ್ ಬರಪೀಡಿತ ಜಿಲ್ಲೆ ಘೋಷಿಸಿ

ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಅವರು ಮಾತನಾಡಿ, “ಬೀದರ್ ಜಿಲ್ಲೆಯಲ್ಲಿ ಮಳೆ ಕೊರತೆಯಾದ ಹಿನ್ನಲೆ ಮುಂಗಾರು ಬಿತ್ತನೆ ಪ್ರಕ್ರಿಯೆಗೆ ಹಿನ್ನಡೆಯಾಗಿದೆ. ಇದರಿಂದಾಗಿ ಮಳೆ ಅವಲಂಬಿತ ರೈತರು ಸಾಕಷ್ಟು ಸಂಕಷ್ಟಗಳನ್ನು ಎದುರಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸರಕಾರದ ಹಂತದಲ್ಲಿ ಚರ್ಚಿಸಿ, ಬೀದರ್‌ ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸಬೇಕು ಅಗತ್ಯ ಕ್ರಮ ಕೈಗೊಂಡು ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಒಣಬೇಸಾಯ ಪ್ರದೇಶವಿರುವ ಜಿಲ್ಲೆಯಲ್ಲಿ ನೀರಾವರಿ ಯೋಜನೆ ಜಾರಿಗೊಳಿಸಬೇಕು. ಬೀದರ್‌ ಪ್ರವಾಸಿ ತಾಣ, ಬಿಎಸ್‌ಎಸ್‌ಕೆ ಪುನಶ್ಚೇನಗೊಳಿಸಬೇಕು. ಕಾರಂಜಾ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಿ ಪರಿಹಾರ ನೀಡುವ ಜೊತೆಗೆ ಬೀದರ್‌ ಹಿಂದುಳಿದ ಹಣೆಪಟ್ಟಿ ಕಿತ್ತಾಕಿ ಅಭಿವೃದ್ಧಿಶೀಲ ಜಿಲ್ಲೆಯನ್ನಾಗಿ ಮಾಡುವ ಪ್ರಯತ್ನಕ್ಕೆ ಸಹಕರಿಸಬೇಕು ಎಂದು ಕೋರಿದರು.

ಎಸ್‌ಐಆರ್ ಪ್ರಕ್ರಿಯೆ ಬಿಜೆಪಿಯ ಹುನ್ನಾರ ಇದೆ. ಬಡವರು, ಅಲ್ಪಸಂಖ್ಯಾತರ ಹೆಸರು ತೆಗೆಯಬೇಕೆಂಬುದು ಬಿಜೆಪಿಯ ತಂತ್ರಗಾರಿಕೆ ಇದೆ. ಹೀಗಾಗಿ ಪ್ರತಿಯೊಬ್ಬರು ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು. ಬಿಜೆಪಿಯವರು ಸುಳ್ಳು, ಮೋಸಗಾರರು, ನಮ್ಮ ರಾಜ್ಯದ ಮಾದರಿ ಗ್ಯಾರಂಟಿಗಳನ್ನು ಕದ್ದು ಮಹಾರಾಷ್ಟ್ರ, ಹರಿಯಾಣ ಸೇರಿ ವಿವಿಧೆಡೆ ಜಾರಿಗೊಳಿಸಿ ಜನಪ್ರಿಯತೆಗಳಿಸುತ್ತಿದ್ದಾರೆ ಎಂದು ಹೇಳಿದರು.

ರಾಜ್ಯದ ಮುಖ್ಯಮಂತ್ರಿ ಡಿ‌.ಕೆ‌.ಶಿವಕುಮಾರ ರವರು ಹಾಗೂ ಉಪಮಖ್ಯಮಂತ್ರಿ ಡಾ.ಜಿ. ಪರಮೇಶ್ವರ ರವರುವಿಶ್ವದ ಮೊದಲ ಪಾರ್ಲಿಮೆಂಟ್ ಬಸವಕಲ್ಯಾಣದ ಅನುಭವ ಮಂಟಪಕ್ಕೆ ಭೇಟಿ ನೀಡಿ, ರಾಜ್ಯದ ಸಮಗ್ರ ಅಭಿವೃದ್ಧಿಯ ಯೋಜನೆ ಹಾಕಿಕೊಂಡಿರುವುದು ಬಹಳ ಸಂತಸ ತಂದಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಬೀದರ್‌ ಜಿಲ್ಲೆಯ ಕೆಲ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಅಲ್ಪ ಮತಗಳಿಂದ ಸೋತಿದ್ದಾರೆ. ಆದರೆ ಮುಂಬರುವ 2028ರ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಆರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲ್ಲುತ್ತದೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೇರುತ್ತದೆ ಎಂದರು.

ಇದನ್ನೂ ಓದಿ : ಬೀದರ್‌ | ಕಾರು ಡಿಕ್ಕಿ : ಸ್ಥಳದಲ್ಲೇ 15 ಕುರಿಗಳು ಸಾವು

ಉಪಮುಖ್ಯಮಂತ್ರಿ ಡಾ.‌ಜಿ. ಪರಮೇಶ್ವರ್ ಅವರು, ಶಾಸಕ ರಹೀಂ ಖಾನ್, ಸಂಸದ ಸಾಗರ್‌ ಖಂಡ್ರೆ ಮಾಜಿ ಸಚಿವ ರಾಜಶೇಖರ ಪಾಟೀಲ್‌, ವಿಧಾನ ಪರಿಷತ್‌ ಸದಸ್ಯರಾದ ಚಂದ್ರಶೇಖರ ಪಾಟೀಲ್‌, ಭೀಮರಾವ ಪಾಟೀಲ್‌, ಮಾಜಿ ಎಂಎಲ್ಸಿ ಅರವಿಂದಕುಮಾರ ಅರಳಿ, ಕೆ.ಪುಂಡಲಿಕರಾವ್‌, ವಿಜಯ ಸಿಂಗ್‌, ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಮಖಂಡರಾದ ಅಮೃತರಾವ್‌ ಚಿಮಕೋಡೆ, ಭೀಮಸೇನರಾವ್‌ ಸಿಂಧೆ, ಸಂಜಯ ಜಾಗಿರದಾರ್‌ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...