ಬೀದರ್‌ | ಸಂವಿಧಾನ ದಿನಾಚರಣೆ, ಆಮ್ ಆದ್ಮಿ ಪಕ್ಷದ ಸಂಸ್ಥಾಪನಾ ದಿನ ಆಚರಣೆ

Date:

ಬೀದರ್ ನಗರದ ಆಮ್ ಆದ್ಮಿ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ಹಾಗೂ ಪಕ್ಷದ ಸಂಸ್ಥಾಪನಾ ದಿನವನ್ನು ಕೇಕ್ ಕತ್ತರಿಸುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು.

- Advertisement -

ಪಕ್ಷದ ಜಿಲ್ಲಾಧ್ಯಕ್ಷ ಸಿದ್ದು ಫುಲಾರಿ ಮಾತನಾಡಿ, “2011–12ರಲ್ಲಿ ಸ್ಥಾಪನೆಯಾದ ಆಮ್ ಆದ್ಮಿ ಪಕ್ಷವು ದೆಹಲಿಯಲ್ಲಿ ಎರಡು ಬಾರಿ ಸರ್ಕಾರ ರಚಿಸಿ, ಶಿಕ್ಷಣ, ಆರೋಗ್ಯ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕೆ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಸರ್ಕಾರಿ ಶಾಲೆಗಳ ಅಭಿವೃದ್ಧಿ, ಮೊಹಲ್ಲಾ ಕ್ಲಿನಿಕ್‌ಗಳ ಮೂಲಕ ಆರೋಗ್ಯ ಸೇವೆ, ಮಹಿಳೆಯರು ಮತ್ತು ಬಡವರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸುವ ಮೂಲಕ ಜನಪರ ಆಡಳಿತಕ್ಕೆ ಮಾದರಿಯಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪುಸ್ತಕ ವಿವಾದಗಳ ಸುತ್ತ : ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು...

ಒಂದು ಪುಸ್ತಕದ ಪ್ರತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಅಥವಾ ಗ್ರಂಥಾಲಯದ ಪಟ್ಟಿಯಿಂದ ಕೈಬಿಡುವುದು ಸಂಪೂರ್ಣ ನಿಷೇಧವಲ್ಲ; ಕಾನೂನಿನ ಚೌಕಟ್ಟಿನಲ್ಲಿ ಆರೋಪ ಮತ್ತು ಸತ್ಯಾಸತ್ಯತೆಗಳ ವಿಚಾರಣೆ ನಡೆದ ನಂತರವೇ ಅಂತಿಮ ತೀರ್ಮಾನವಾಗುತ್ತದೆ. ಯಾವುದೇ ಕೃತಿಯನ್ನು ನಿಷೇಧಿಸುವ...

₹18 ಲಕ್ಷ ಕೋಟಿ ಸಾಲ ರೈಟ್‌ಆಫ್: ದೇಶದ ಸಂಪತ್ತು...

ಒಂದು ಕಡೆ ರೈತರು ಸಾಲದ ಹೊರೆ ತಾಳಲಾರದೆ ಸಂಕಷ್ಟಕ್ಕೆ ಸಿಲುಕುತ್ತಾರೆ. ವಿದ್ಯಾರ್ಥಿಗಳು ಶಿಕ್ಷಣ ಸಾಲದ ಭಾರದಿಂದ ಉದ್ಯೋಗಕ್ಕಾಗಿ ಪರದಾಡುತ್ತಾರೆ. ಬಡ ಕುಟುಂಬಗಳು ಮನೆ ನಿರ್ಮಾಣದ ಕನಸಿಗಾಗಿ ಸಾಲ ಪಡೆದು ಕಂತು ಕಟ್ಟಲು ಹೆಣಗಾಡುತ್ತವೆ....

ಸಂವಿಧಾನಕ್ಕೆ 77 ವರ್ಷ | ಸಂವಿಧಾನ ಸೋತಿದೆಯೇ?, ಅನುಷ್ಠಾನದಲ್ಲಿ...

26 ನವೆಂಬರ್ 1949. ಭಾರತದ ಇತಿಹಾಸದಲ್ಲಿ ಇದೊಂದು ಮಹತ್ವದ ಐತಿಹಾಸಿಕ ದಿನ. ಶತಮಾನಗಳ ಸಾಮಾಜಿಕ ಅಸಮಾನತೆ, ಶೋಷಣೆ, ದಮನ ಮತ್ತು ಅನ್ಯಾಯದ ವಿರುದ್ಧ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಹಾಗೂ ಸಹೋದರತ್ವದ ಆಧಾರದಲ್ಲಿ ಹೊಸ...

“ಪಂಜಾಬ್‌ನಲ್ಲಿಯೂ ಆಮ್ ಆದ್ಮಿ ಪಕ್ಷದ ಸರ್ಕಾರ ಸರ್ಕಾರಿ ಶಾಲೆಗಳ ಅಭಿವೃದ್ಧಿ, ಟೋಲ್‌ಮುಕ್ತ ಸೌಲಭ್ಯ ಹಾಗೂ ರೈತರಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹4,250 ಬೆಲೆ ನೀಡುವ ಮೂಲಕ ರೈತರ ಹಿತಾಸಕ್ತಿಗೆ ಆದ್ಯತೆ ನೀಡಿದೆ” ಎಂದು ಹೇಳಿದರು.

ಪಕ್ಷವು 14–15 ವರ್ಷಗಳ ರಾಜಕೀಯ ಪಯಣವನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯ ಸಮಸ್ತ ಜನತೆಗೆ ಶುಭಾಶಯಗಳನ್ನು ತಿಳಿಸಿದ ಮುಖಂಡರು, ಸಂವಿಧಾನದ ಆಶಯಗಳನ್ನು ಎತ್ತಿಹಿಡಿದು, ಜನಪರ ಆಡಳಿತ ಹಾಗೂ ಭ್ರಷ್ಟಾಚಾರ ಮುಕ್ತ ವ್ಯವಸ್ಥೆ ನಿರ್ಮಾಣಕ್ಕಾಗಿ ಪಕ್ಷ ನಿರಂತರವಾಗಿ ಶ್ರಮಿಸಲಿದೆ ಎಂದು ಅಭಿಪ್ರಾಯಪಟ್ಟರು.

WhatsApp Image 2026 11 23 at 7.41.16 PM 4
ಜಾಹೀರಾತು

ಕಾರ್ಯಕ್ರಮದಲ್ಲಿ ಆಮ್‌ ಆದ್ಮಿ ಪಕ್ಷದ ಪ್ರಧಾನ ಕಾರ್ಯದರ್ಶಿ ಎಂ.ಡಿ.ಜಾವಿದ್, ಯುವ ಘಟಕದ ಅಧ್ಯಕ್ಷ ವೆಂಕಟೇಶ ನಂದಿ, ಬಸವ ಅನುರಾಜ್ ಮೂಲೆ, ಮೋಹನ್ ಕುಮಾರ್, ಚಂದ್ರಶೇಖರ್ ಶೇರಿಕಾರ್, ರಾಜಣ್ಣ ಬಿರಾದಾರ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌ | ಸಂವಿಧಾನ ಪಾಲನೆ ಸರ್ವರ ಜವಾಬ್ದಾರಿ: ಎಸ್.ಎಂ.ಜನವಾಡಕರ್

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ |ಬಸವಣ್ಣನವರ ಬಗ್ಗೆ ಅಪಪ್ರಚಾರ ಸಹಿಸುವುದಿಲ್ಲ; ರವಿ ಹಂಜ್ ವಿರುದ್ಧ ಕ್ರಮಕ್ಕೆ ಒತ್ತಾಯ

ವಿಶ್ವಗುರು ಬಸವಣ್ಣನವರು ಹಾಗೂ ಸಂವಿಧಾನದ ಕುರಿತು ಅವಹೇಳನಕಾರಿ ಮತ್ತು ಆಧಾರರಹಿತ ಹೇಳಿಕೆ...

ಬಾಗಲಕೋಟೆ |ಸಾಲದ ಅರ್ಜಿದಾರರನ್ನು ಬ್ಯಾಂಕ್‌ಗಳಿಗೆ ಅಲೆದಾಡಿಸಬೇಡಿ: ಗಜಾನನ ಬಾಲೆ

ಸರ್ಕಾರಿ ಯೋಜನೆಗಳಡಿ ಸಾಲ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳನ್ನು ಬ್ಯಾಂಕ್‌ಗಳಿಗೆ...

ಬೀದರ್‌ | ಸಂವಿಧಾನ ಪಾಲನೆ ಸರ್ವರ ಜವಾಬ್ದಾರಿ: ಎಸ್.ಎಂ.ಜನವಾಡಕರ್

ಭಾರತದ ಸಂವಿಧಾನಕ್ಕೆ ಜಗತ್ತಿನಲ್ಲಿಯೇ ವಿಶಿಷ್ಟ ಸ್ಥಾನ ಮತ್ತು ಮಹತ್ವವಿದೆ. ಬೃಹತ್ ಪ್ರಜಾಪ್ರಭುತ್ವ...

ಬಸವಕಲ್ಯಾಣ | ಜನರಲ್ಲಿ ಸಂವೇದನಾಶೀಲತೆ ಬೆಳೆಸುವ ಶಕ್ತಿ ಸಂವಿಧಾನಕ್ಕಿದೆ : ಭೀಮಾಶಂಕರ ಬಿರಾದರ್

ದೇಶದ ಪ್ರತಿಯೊಬ್ಬ ಪ್ರಜೆಯಲ್ಲೂ ನ್ಯಾಯಪರತೆ, ಸೂಕ್ಷ್ಮತೆ ಹಾಗೂ ಸಂವೇದನಾಶೀಲತೆಯನ್ನು ಬೆಳೆಸುವ ಶಕ್ತಿ...