ಬೀದರ್‌ | ಪ್ಲಾಸ್ಟಿಕ್‌ ಮುಕ್ತ ಗ್ರಾಮ ನಿರ್ಮಾಣಕ್ಕೆ ಸಹಕರಿಸಿ

Date:

ಬೀದರ್‌ ತಾಲೂಕಿನ ಮಾಳೆಗಾಂವ ಗ್ರಾಮದಲ್ಲಿ ಪ್ಲಾಸ್ಟಿಕ್‌ ಮುಕ್ತ ಗ್ರಾಮ ಪಂಚಾಯತ್ ಹಾಗೂ ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಜಾಗೃತಿ ಅಭಿಯಾನ ನಡೆಯಿತು.

- Advertisement -

ಬೀದರ್‌ ಜಿಲ್ಲಾ ಪಂಚಾಯತ್‌ ಹಾಗೂ ತಾಲೂಕು ಪಂಚಾಯತ್ ಸಹಯೋಗದಲ್ಲಿ ಮಳೆಗಾಂವ್‌ ಗ್ರಾಮ ಪಂಚಾಯತ್‌ ಕೇಂದ್ರದ ಡಿಜಿಟಲ್ ಗ್ರಂಥಾಲಯ ಅವರಣದಲ್ಲಿ ಆಯೋಜಿಸಿ ಅಭಿಯಾನ ಕಾರ್ಯಕ್ರಮವನ್ನು ತಾಲೂಕು ಪಂಚಾಯತ್ ಇಒ ಮಾಣಿಕರಾವ್ ಪಾಟೀಲ್ ಹಾಗೂ ಮನರೇಗಾ ಸಹಾಯಕ ನಿರ್ದೇಶಕರಾದ ಲಕ್ಷ್ಮಿ ಬಿರಾದರ್ ಅವರು ಜಂಟಿಯಾಗಿ ಉದ್ಘಾಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಬೀದರ್‌ ತಾಲೂಕು ಪಂಚಾಯತ್‌ ಇಒ ಮಾಣಿಕರಾವ್ ಪಾಟೀಲ್ ಮಾತನಾಡಿ, “ಎಸ್‌ಐಆರ್ ಅಭಿಯಾನದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ಪಾಲ್ಗೊಂಡು ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸಿ ಹೆಸರು ನೋಂದಾಯಿಸಿಕೊಳ್ಳಬೇಕು. ಶಾಲಾ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಕುಟುಂಬ ಸೇರಿ ನೆರೆ-ಹೊರೆಯವರನ್ನು ಎಸ್ಐಆರ್ ನೋಂದಣಿ ಜಾಗೃತಿ ಮೂಡಿಸಿ ಸಹಕರಿಸಬೇಕು” ಎಂದು ಸಲಹೆ ನೀಡಿದರು.

ಸಹಾಯಕ ನಿರ್ದೇಶಕರಾದ ಲಕ್ಷ್ಮಿ ಬಿರಾದರ್ ಅವರು ನೂತನವಾಗಿ ಜಾರಿಗೆ ಬಂದಿರುವ ʼವಿ ಬಿ ಜಿ ರಾಮ್ ಜಿʼ ಕಾಯ್ದೆಯ ಬಗ್ಗೆ ಮಾಹಿತಿ ನೀಡಿದರು.

ಪ್ಲಾಸ್ಟಿಕ್ ಮುಕ್ತ ಗ್ರಾಮಗಳ ಕುರಿತು ಗುರುನಾನಕ್ ಶಾಲೆಯಲ್ಲಿ ಒಂದು ದಿನದ ಶೈಕ್ಷಣಿಕ ಕ್ಷೇತ್ರ ಭೇಟಿಯ ಕಾರ್ಯಕ್ರಮ ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ವಿಬಿ ರಾಮ್ ಜಿ, ಜೆಜೆಎಂ, ವಸತಿ ಯೋಜನೆ, ಪಂಚಾಯತ್ ರಾಜ್ ವ್ಯವಸ್ಥೆ ಮತ್ತು ಗ್ರಾಮ ಆಡಳಿತ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಲಾಯಿತು.

ಇದನ್ನೂ ಓದಿ : ಭಾಲ್ಕಿ | ಎಸ್‌ಐಆರ್‌ ಅಭಿಯಾನ ಯಶಸ್ವಿಗೊಳಿಸಿ

ಕಾರ್ಯಕ್ರಮದಲ್ಲಿ ಮಾಳೆಗಾಂವ ಆಡಳಿತಾಧಿಕಾರಿ ಸೋಮಶೇಖರ್ ಮಡಿಕಿ, ಮಾಳೆಗಾಂವ್ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಅನಿಲಕುಮಾರ್ ಚಳಕಾಪುರ ಐಇಸಿ ಸತ್ಯಜೀತ್ ನೀಡೋದಕರ್, ಗುರುನಾನಕ್ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...