ಬೀದರ್‌ | ಖಾಸಗಿ ಬಸ್‌ಗಳ ದುಬಾರಿ ಟಿಕೆಟ್ ದರಕ್ಕೆ ಕಡಿವಾಣ ಹಾಕಿ

Date:

ದಸರಾ ಹಾಗೂ ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರಿಂದ ದುಬಾರಿ ಟಿಕೆಟ್ ದರ ವಸೂಲಿ ಮಾಡುತ್ತಿರುವ ಖಾಸಗಿ ಬಸ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಮ್ಮ ಕರ್ನಾಟಕ ಸೇನೆಯ ಬೀದರ್ ಜಿಲ್ಲಾ ಘಟಕ ಆಗ್ರಹಿಸಿದೆ.

- Advertisement -

ಈ ಕುರಿತು ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಶನಿವಾರ ನಗರದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಯನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಬೀದರ್‌ನಿಂದ ಬೆಂಗಳೂರಿಗೆ ಸಾಮಾನ್ಯ ದಿನಗಳಲ್ಲಿ ₹800ರಿಂದ ₹1,200ರವರೆಗೆ ಇರುವ ಬಸ್ ಪ್ರಯಾಣ ದರವನ್ನು ಹಬ್ಬಗಳ ನೆಪದಲ್ಲಿ ₹4,000ರಿಂದ ₹5,000ಕ್ಕೆ ಹೆಚ್ಚಿಸಲಾಗಿದೆ ಎಂದು ನಿಯೋಗದ ನೇತೃತ್ವ ವಹಿಸಿದ್ದ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಜ್ಯಾಂತಿ ದೂರಿದರು.

“ರಾಜ್ಯದಲ್ಲಿ ಬರಗಾಲದ ಪರಿಣಾಮ ಜನರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಶಿಕ್ಷಣ, ಉದ್ಯೋಗ ಹಾಗೂ ಇತರ ಕೆಲಸಗಳಿಗಾಗಿ ಬೆಂಗಳೂರು ಸೇರಿದಂತೆ ವಿವಿಧ ನಗರಗಳಿಗೆ ತೆರಳಿರುವ ಜಿಲ್ಲೆಯ ಜನರು ಹಬ್ಬದ ಸಂದರ್ಭದಲ್ಲಿ ತಮ್ಮ ಊರುಗಳಿಗೆ ಮರಳುವುದು ಸಾಮಾನ್ಯ. ಆದರೆ, ಪ್ರಯಾಣಿಕರ ಅನಿವಾರ್ಯತೆಯನ್ನು ದುರುಪಯೋಗಪಡಿಸಿಕೊಂಡು ಖಾಸಗಿ ಬಸ್‌ಗಳು ಟಿಕೆಟ್ ದರವನ್ನು ಮನಬಂದಂತೆ ಹೆಚ್ಚಿಸುತ್ತಿರುವುದು ಖಂಡನೀಯ” ಎಂದು ಹೇಳಿದರು.

“ದರ ಏರಿಕೆಯಿಂದ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು ಹಾಗೂ ಬಡ ಮತ್ತು ಮಧ್ಯಮ ವರ್ಗದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಆದ್ದರಿಂದ ರಾಜ್ಯದಾದ್ಯಂತ ಸಂಚರಿಸುವ ಖಾಸಗಿ ಬಸ್‌ಗಳ ಟಿಕೆಟ್ ದರಗಳನ್ನು ಪರಿಶೀಲಿಸಿ, ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆಯೇ ಎಂಬುದನ್ನು ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು” ಎಂದು ಒತ್ತಾಯಿಸಿದರು.

WhatsApp Image 2026 10 10 at 6.59.09 PM 5
ಜಾಹೀರಾತು

ಪ್ರಯಾಣಿಕರು ದೂರು ಸಲ್ಲಿಸಲು ಸಹಾಯವಾಣಿ ಆರಂಭಿಸಬೇಕು. ನಿಯಮ ಉಲ್ಲಂಘಿಸಿ ಹೆಚ್ಚಿನ ದರ ವಸೂಲಿ ಮಾಡುವ ಖಾಸಗಿ ಬಸ್ ಮಾಲೀಕರು ಹಾಗೂ ನಿರ್ವಾಹಕರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.

ಮನವಿ ಸ್ವೀಕರಿಸಿದ ಪ್ರಾದೇಶಿಕ ಸಾರಿಗೆ ಅಧಿಕಾರಿ, ಖಾಸಗಿ ಬಸ್‌ಗಳ ಟಿಕೆಟ್ ದರ ಹೆಚ್ಚಳದ ಕುರಿತು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ : ಬೀದರ್‌ | ಮರಣಾನಂತರ ದೇಹದಾನಕ್ಕೆ ಮುಂದಾದ ಮೂವರು ಶಿಕ್ಷಕರು, ಸಾಹಿತಿ

ಈ ಸಂದರ್ಭದಲ್ಲಿ ಸೇನೆಯ ತಾಲೂಕು ಅಧ್ಯಕ್ಷ ಅನಿಲ್ ರಾಜಗೀರಾ ಹಾಗೂ ಸೇನೆಯ ಪ್ರಮುಖರಾದ ಸಂತೋಷ್ ಪಾಟೀಲ, ರವಿ ಪಾಟೀಲ, ಸಂತೋಷ್ ಮಡಿವಾಳ, ಅನಿಲ್ ರೆಡ್ಡಿ, ರಾಜು ಕುಂಬಾರ, ಗೌರೀಶ್, ಸಂಜುಕುಮಾರ ಗಾಯಕವಾಡ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಬಾಂಬೆ ಬಾಯ್ಸ್‌ʼ ಪುಸ್ತಕ ಹೊರಬಂದರೆ ಮೂರೂ ಪಕ್ಷಗಳ ನಾಯಕರು ಬೆತ್ತಲು: ಎಚ್‌ ವಿಶ್ವನಾಥ್‌ ಹೊಸ ಬಾಂಬ್!‌

‘ಬಾಂಬೆ ಬಾಯ್ಸ್‌’ ಪುಸ್ತಕ ಪ್ರಕಟವಾದರೆ ರಾಜ್ಯದ ಮೂರೂ ಪ್ರಮುಖ ರಾಜಕೀಯ ಪಕ್ಷಗಳ...

ವಿಜಯಪುರ | ರೈತರಿಗೆ ಎಕರೆಗೆ ರೂ.25 ಸಾವಿರ ಪರಿಹಾರ ನೀಡಿ: ಭೀಮ್ ರಾಜ್ಯ ದಲಿತ ಸೇವಾ ಸಮಿತಿ ಆಗ್ರಹ

ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಎಕರೆಗೆ ಕನಿಷ್ಠ...

14 ಎಸೆತಗಳಲ್ಲಿ ಅರ್ಧಶತಕ: ಮೆಕ್‌ಗರ್ಕ್‌ ಸಿಡಿಲಾಟ, ವೈಭವ್‌ ವಿಶ್ವದಾಖಲೆ ಅಬಾಧಿತ

ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್‌ ಜೇಕ್‌ ಫ್ರೇಸರ್‌ ಮೆಕ್‌ಗರ್ಕ್‌ ಕೇವಲ 14...

ರಷ್ಯಾ-ಉಕ್ರೇನ್ ಸಂಘರ್ಷ: ನಿರ್ಬಂಧ ವಿನಾಯಿತಿ ಪುಟಿನ್‌ಗೆ ಟ್ರಂಪ್ ನೀಡಿದ ಬಹುಮಾನ ಎಂದ‌ ಝೆಲೆನ್ಸ್ಕಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಷ್ಯಾದ ಮೇಲಿನ ಪ್ರಮುಖ ನಿರ್ಬಂಧಗಳನ್ನು...