ಬೀದರ್‌ | ಸದೃಢ ಆರೋಗ್ಯಕ್ಕೆ ನಿತ್ಯ ವ್ಯಾಯಾಮ ಅಗತ್ಯ : ಸಚಿವ ರಹೀಂ ಖಾನ್

Date:

ಸದೃಢ ಆರೋಗ್ಯಕ್ಕೆ ಎಲ್ಲರೂ ನಿತ್ಯ ವ್ಯಾಯಾಮ ಅಗತ್ಯವಾಗಿದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಹೇಳಿದರು.

- Advertisement -

ಬೀದರ್ ನಗರದ ಕೆ.ಇ.ಬಿ. ಕಚೇರಿ ಸಮೀಪ ಈಚೆಗೆ ನಡೆದ ಜಾರ್ಜ್ ಫೆಟ್ನೆಸ್ ಜಿಮ್ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿ, ʼವ್ಯಾಯಾಮ ಮಾಡುವುದರಿಂದ ರಕ್ತದೊತ್ತಡ, ಮಧುಮೇಹ ಮತ್ತಿತರ ರೋಗಗಳು ದೂರವಾಗುತ್ತವೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ʼಮನುಷ್ಯನಲ್ಲಿ ಸಂಪತ್ತು ಎಷ್ಟಿದ್ದರೂ ಆರೋಗ್ಯ ಇಲ್ಲದಿದ್ದರೆ ಅದು ವ್ಯರ್ಥ. ಹೀಗಾಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಜಿಮ್‍ಗಳಲ್ಲಿ ನಿತ್ಯ ಕನಿಷ್ಠ ತಾಸಾದರೂ ವ್ಯಾಯಾಮ ಮಾಡುವುದನ್ನು ರೂಢಿಸಿಕೊಳ್ಳಬೇಕು. ಯುವ ಜನರಿಗೆ ಆರೋಗ್ಯದ ಗುಟ್ಟು ಹೇಳಿಕೊಡುತ್ತಿರುವ ವಿಕ್ಟೋರಿಯಾ ಜಾರ್ಜ್ ಅವರು 10 ವರ್ಷಗಳಿಂದ ಜಿಮ್ ನಡೆಸುತ್ತಿದ್ದಾರೆ. ಇದೀಗ ಹೈಟೆಕ್ ಜಿಮ್ ಆರಂಭಿಸಿದ್ದಾರೆ. ಯುವಜನರು ಇದರ ಲಾಭ ಪಡೆಯಬೇಕುʼ ಎಂದು ಸಲಹೆ ಮಾಡಿದರು.

ಸಂಸದ ಸಾಗರ್ ಖಂಡ್ರೆ ಉದ್ಘಾಟಿಸಿ ಮಾತನಾಡಿ, ʼಪ್ರಸ್ತುತ ಎಲ್ಲರಿಗೂ ಒತ್ತಡ ಹೆಚ್ಚಾಗಿದೆ. ಜಿಮ್‍ಗಳಲ್ಲಿ ವ್ಯಾಯಾಮ ಮಾಡುವ ಮೂಲಕ ಅದನ್ನು ನಿವಾರಿಸಿಕೊಳ್ಳಬಹುದು. ಜಾರ್ಜ್ ಅವರು ಜನರಿಗೆ ಆರೋಗ್ಯದ ಮಹತ್ವ ಮನವರಿಕೆ ಮಾಡಿಕೊಡುತ್ತಿದ್ದಾರೆ. ಫಿಟ್ನೆಸ್ ಜಿಮ್ ಮೂಲಕ ಉತ್ತಮ ಆರೋಗ್ಯ ಕಾಯ್ದುಕೊಳ್ಳಲು ನೆರವಾಗುತ್ತಿದ್ದಾರೆ. ಅವರ ಜನಪರ ಕಾಳಜಿ ಶ್ಲಾಘನೀಯʼ ಎಂದು ಹೇಳಿದರು.

WhatsApp Image 2026 01 02 at 8.58.18 PM
ಸಂಸದ ಸಾಗರ್‌ ಖಂಡ್ರೆ ಜಾರ್ಜ್ ಫೆಟ್ನೆಸ್ ಜಿಮ್ ಉದ್ಘಾಟಿಸಿದರು.

ಜಾರ್ಜ್ ಫಿಟ್ನೆಸ್ ಜಿಮ್ ಮಾಲೀಕರಾದ ವಿಕ್ಟೋರಿಯಾ ಜಾರ್ಜ್ ಮಾತನಾಡಿ, ʼಸ್ವಸ್ಥ ಸಮಾಜ ನಿರ್ಮಾಣ ಕೊಡುಗೆ ನೀಡಲು ಜಿಮ್ ಫಿಟ್ನೆಸ್ ಸೆಂಟರ್ ಪ್ರಾರಂಭಿಸಿದ್ದೇನೆ. ಜಿಮ್‍ನಲ್ಲಿ ಪ್ರತಿ ದಿನ ಯೋಗ ಮಾಡುವುದರಿಂದ ಸ್ನಾಯುಗಳು ಬಲಗೊಳ್ಳುತ್ತದೆ. ಕೊಬ್ಬು ಕರಗಿ ತೂಕ ನಿಯಂತ್ರಣದಲ್ಲಿ ಇರುತ್ತದೆ. ರಕ್ತ ಸಂಚಾರದಲ್ಲಿ ಸುಧಾರಣೆಯಾಗಿ, ಹೃದಯ ರೋಗದ ಅಪಾಯ ಕಡಿಮೆಯಾಗುತ್ತದೆʼ ಎಂದು ತಿಳಿಸಿದರು.

ʼಜಿಮ್‌ದಿಂದ ತಾಳ್ಮೆ ವೃದ್ಧಿಸುತ್ತದೆ. ದಿನವಿಡೀ ಮನಸ್ಸು ಉಲ್ಲಸಿತವಾಗಿರುತ್ತದೆ. ಆತ್ಮವಿಶ್ವಾಸ ಇಮ್ಮಡಿಗೊಳ್ಳುತ್ತದೆ. ರಾತ್ರಿ ನೆಮ್ಮದಿಯ ನಿದ್ರೆ ಬರುತ್ತದೆ. ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ ಎಂದು ಹೇಳಿದರು. ಸದ್ಯ ಶೇ 10 ರಷ್ಟು ಮಹಿಳೆಯರು ಮಾತ್ರ ಜಿಮ್ ಹಾಗೂ ಫಿಟ್ನೆಸ್ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆʼ ಎಂದು ಫಿಟ್ನೆಸ್ ಕೋಚ್ ಅನುಶಾ ಹೇಳಿದರು.

ಇದನ್ನೂ ಓದಿ : ಬೀದರ್‌ | ತೀವ್ರ ಚಳಿಗಾಲ : ಪ್ರಾಥಮಿಕ, ಪ್ರೌಢ ಶಾಲಾ ಸಮಯ ಬದಲಾವಣೆ

ಸೆಲೆಬ್ರಿಟಿ ಟ್ರೈನರ್ ರಾಖಿ, ಪಾಸ್ಟರ್ ಎಜಿಕಿಯೇಲ್, ಬೀದರ್ ಮಹಾನಗರ ಪಾಲಿಕೆಯ ಅಧ್ಯಕ್ಷ ಮುಹಮ್ಮದ್ ಗೌಸ್, ರಾಜ್ಯ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರದಾರ್, ಮುಖಂಡ ಫನಾರ್ಂಡೀಸ್ ಹಿಪ್ಪಳಗಾಂವ್, ಜಿಸಸ್ ಗ್ಲೋಬಲ್ ಚರ್ಚ್‍ನ ಫಾದರ್ ರೆವರೆಂಡ್ ರಜನಿಕಾಂತ್ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೋಯಾಬೀನ್ ಖರೀದಿಗೆ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...

ಬೀದರ್‌ | ಬೈಕ್ ಅಪಘಾತ: ಇಬ್ಬರು ಯುವಕರು ಸಾವು

ನೆರೆಯ ತೆಲಂಗಾಣದ ಸಂಗಾರೆಡ್ಡಿ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಬೀದರ್‌ | ನ.28, 29ರಂದು ಅನುಭವ ಮಂಟಪ ಉತ್ಸವ : ತುಮಕೂರು ಸಿದ್ಧಗಂಗೆ ಶ್ರೀಗಳಿಗೆ ಆಹ್ವಾನ

ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪ ಪರಿಸರದಲ್ಲಿ ನವೆಂಬರ್ 28...