ಬೀದರ್‌ | ಜುಲೈ 3ರಂದು ಬೆಂಗಳೂರಿನಲ್ಲಿ ದಲಿತ ಜನಾಗ್ರಹ ಸಮಾವೇಶ : ರಮೇಶ ಡಾಕುಳಗಿ

Date:

ಭೂಮಿ, ವಸತಿ, ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ, ಉದ್ಯೋಗ ನೇಮಕಾತಿ ಹಾಗೂ ವಿಶೇಷ ಘಟಕ ಯೋಜನೆಗೆ ಏಕಗವಾಕ್ಷಿ ನೀತಿ ಸೇರಿ ವಿವಿಧ ಬೇಡಿಕೆಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರವಾದ) ವತಿಯಿಂದ ಜುಲೈ 3 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ದಲಿತ ಜನಾಗ್ರಹ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಘಟನಾ ಸಂಚಾಲಕ ರಮೇಶ ಡಾಕುಳಗಿ ತಿಳಿಸಿದರು.

- Advertisement -

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಶೋಷಿತ ಸಮುದಾಯಗಳ ಹಕ್ಕುಗಳ ರಕ್ಷಣೆ ಹಾಗೂ ಸಮಗ್ರ ಸಬಲೀಕರಣಕ್ಕಾಗಿ ಈ ಸಮಾವೇಶ ಆಯೋಜಿಸಲಾಗಿದೆ. ದಲಿತ ಸಮುದಾಯಗಳ ಅಭಿವೃದ್ಧಿಗಾಗಿ ಜಾರಿಯಲ್ಲಿರುವ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಗಳ ಅನುದಾನವನ್ನು ಉದ್ದೇಶಿತ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

“ಭೂರಹಿತ ಕುಟುಂಬಗಳಿಗೆ ಭೂಮಿ ಒದಗಿಸಬೇಕು, ವಸತಿ ಹೀನರಿಗೆ ಮನೆ ಕಲ್ಪಿಸಬೇಕು ಹಾಗೂ ಸರ್ಕಾರಿ ಇಲಾಖೆಗಳಲ್ಲಿನ ಬ್ಯಾಕ್‌ಲಾಗ್ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು. ವಿಶೇಷ ಘಟಕ ಯೋಜನೆಯ ಅನುದಾನವನ್ನು ನಿಯಮ ಬಾಹಿರವಾಗಿ ಬೇರೆ ಉದ್ದೇಶಗಳಿಗೆ ಬಳಸುವುದನ್ನು ನಿಲ್ಲಿಸಿ, ಏಕಗವಾಕ್ಷಿ ನೀತಿ ಜಾರಿಗೊಳಿಸುವ ಮೂಲಕ ದಲಿತರ ಆರ್ಥಿಕ, ಸಾಮಾಜಿಕ ಸಬಲೀಕರಣಕ್ಕೆ ಆದ್ಯತೆ ನೀಡಬೇಕು” ಎಂದು ಆಗ್ರಹಿಸಿದರು.

ಈ ಜನಾಗ್ರಹ ಸಮಾವೇಶದಲ್ಲಿ ರಾಜ್ಯದ ಪ್ರತಿ ಜಿಲ್ಲೆಗಳಿಂದ ಒಂದು ಸಾವಿರ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದು, ಬೀದರ್‌ ಜಿಲ್ಲೆಯ ಎಲ್ಲ ದಲಿತಪರ ಸಂಘಟನೆಗಳ ಮುಖಂಡರು ಹಾಗೂ ಸಮಾನ ಮನಸ್ಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದರು.

ದಲಿತ ಮುಖಂಡ ಅನಿಲಕುಮಾರ ಬೆಲ್ದಾರ ಮಾತನಾಡಿ, “ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹೆಚ್ಚಿನ ಶೈಕ್ಷಣಿಕ ಸೌಲಭ್ಯಗಳು, ಹಾಸ್ಟೆಲ್ ಕ್ಯಾಂಪಸ್‌ಗಳ ನಿರ್ಮಾಣ, ಭೂ ಒಡೆತನ ಯೋಜನೆ ಜಾರಿ, ಪಿಟಿಸಿಎಲ್ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ ಸೇರಿದಂತೆ 20 ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು” ಎಂದು ಹೇಳಿದರು.

ದಲಿತ ಮುಖಂಡ ಬಾಬುರಾವ ಪಾಸ್ವಾನ್ ಮಾತನಾಡಿ, “ಬಿಜೆಪಿಯು ಕೋಮುವಾದಿ ಪಕ್ಷ ಎಂದು ಅದನ್ನು ಧಿಕ್ಕರಿಸಿ ಕಾಂಗ್ರೆಸ್ ದಲಿತರ ಹಿತ ಕಾಪಾಡುತ್ತದೆ ಎಂದು ಇಲ್ಲಿಯವರೆಗೆ ಬೆಂಬಲಿಸುತ್ತ ಬಂದಿದೆ. ಚುನಾವಣೆಗಳಲ್ಲಿ ದಲಿತ ಸಮುದಾಯ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿ ಬಲಿಷ್ಠವನ್ನಾಗಿ ಮಾಡಿದೆ. ಆದರೆ, ಕಾಂಗ್ರೆಸ್‌ ಅಧಿಕಾರ ಹಿಡಿದ ಮೇಲೆ ದಲಿತ ಸಮುದಾಯದ ಏಳಿಗೆಯಲ್ಲಿ ಅನ್ಯಾಯ ಮಾಡುತ್ತಿದೆ” ಎಂದರು.

“ಜುಲೈ 3ರಂದು ದಸಂಸ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ ಹಾಗೂ ಇತರೆ ಮುಖಂಡರ ನೇತೃತ್ವದಲ್ಲಿ ಆಯೋಜಿಸಿರುವ ಬೃಹತ್ ಪ್ರತಿಭಟನೆಯ ಮುಖಾಂತರ ರಾಜ್ಯ ಸರ್ಕಾರಕ್ಕೆ ಬೇಡಿಕೆ ಮಂಡಿಸಲಿದ್ದೇವೆ. ನಮ್ಮ ಬೇಡಿಕೆಗಳು ಈಡೇರಿಸದಿದ್ದರೆ ಈ ಹಿಂದೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅವಧಿಯಲ್ಲಿ ಪಾಠ ಕಲಿಸಿದಂತೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪುನರಾವರ್ತಿಸಲಾಗುವುದು” ಎಂದು ಎಚ್ಚರಿಸಿದರು.

ದಲಿತ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಲಿ

ಕೋಮುವಾದಿ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರ ಇಡಬೇಕೆಂಬ ಒಂದೇ ಒಂದು ಕಾರಣಕ್ಕೆ ಇಡೀ ರಾಜ್ಯದಲ್ಲಿ ದಲಿತ ಸಮುದಾಯ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರ ಹಿಡಿಯುವಲ್ಲಿ ದಲಿತ ಸಮುದಾಯದ ಪಾತ್ರ ಪ್ರಮುಖವಾಗಿದೆ. ಆದರೆ, ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್‌ ದಲಿತ ಸಮುದಾಯಕ್ಕೆ ಯಾವುದೇ ಪ್ರಾತಿನಿಧ್ಯ ನೀಡುತ್ತಿಲ್ಲ ಎಂದು ಮುಖಂಡರು ಬೇಸರ ವ್ಯಕ್ತಪಡಿಸಿದರು.

ಬೀದರ್‌ ಜಿಲ್ಲೆಯಲ್ಲೂ ದಲಿತ ಸಮುದಾಯ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲಿಸಿದೆ. ನಮ್ಮ ಸಂಘಟನೆಗಳ 100 ಜನ ಕಾರ್ಯಕರ್ತರು ಪ್ರತಿ ವಿಧಾನಸಭೆಯಲ್ಲೂ ಕೆಲಸ ಮಾಡಿದ್ದಾರೆ. ಆದರೆ, ಯಾವುದೇ ಪ್ರಾತಿನಿಧ್ಯ ಸಿಕ್ಕಿಲ್ಲ. ದಲಿತರ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ಸುಧಾರಣೆಗಾಗಿ ದಲಿತ ಸಮುದಾಯದ ಮಂತ್ರಿಗಳು ಶ್ರಮಿಸಬೇಕಾಗಿದೆ” ಎಂದರು.

ಬಸವಾದಿ ಶಿವಶರಣರ ಸಮಾವೇಶಕ್ಕೆ ವಿರೋಧ

ಜೂನ್‌ 28ರಂದು ಬಸವಕಲ್ಯಾಣದಲ್ಲಿ ಆಯೋಜಿಸಿರುವ ಬಸವಾದಿ ಶಿವಶರಣರ ಹಿಂದೂ ಸಮಾವೇಶಕ್ಕೆ ಜಿಲ್ಲಾಡಳಿತ ಅನುಮತಿ ನೀಡದಿದ್ದಕ್ಕೆ ಕೋರ್ಟ್‌ ಮುಖಾಂತರ ಅನುಮತಿ ಪಡೆದು ಸಮಾವೇಶ ನಡೆಸುತ್ತಿರುವುದಕ್ಕೆ ನಮ್ಮ ವಿರೋಧವಿದೆ ಎಂದು ಖಂಡಿಸಿದ ಮುಖಂಡರು, ಜೂ.28ರಂದು ಈ ಸಮಾವೇಶ ವಿರೋಧಿಸಿ ನಡೆಯುವ ಪ್ರತಿಭಟನೆಯಲ್ಲಿ ದಲಿತ ಸಮುದಾಯದ ಮುಖಂಡರು ಬೆಂಬಲಿಸಿ ಪಾಲ್ಗೊಳ್ಳುತ್ತೇವೆ ಎಂದರು.

ಇದನ್ನೂ ಓದಿ : ಕಲಬುರಗಿ | ಮಗುವನ್ನು ತಬ್ಬಿಕೊಂಡೇ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಶೋಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಬಸವರಾಜ ಮಾಳಗೆ, ದಲಿತ ಸಂಘರ್ಷ ಸಮಿತಿಯ ವಿವಿಧ ಪದಾಧಿಕಾರಿಗಳಾದ ರಮೇಶ ಮಂದಕನಳ್ಳಿ, ಆರ್.ಪಿ ರಾಜಾ, ಸುನಿಲ ಸಂಗಮ, ರಾಜಕುಮಾರ ಬನ್ನೇರ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಹರಾಜು ರದ್ದು, ಲೀಸ್‌ಗೆ ನೀಡಲು ಸಿಎಂ ಭರವಸೆ : ಶ್ರೀಮಂತ ಬಿರಾದರ್

ಬೀದರ್ ಜಿಲ್ಲೆಯ ರೈತರು‌, ಕಾರ್ಮಿಕರ ಜೀವನಾಡಿಯಾಗಿರುವ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ...

‘ದೇವರೇ ಈ ದೇಶವನ್ನು ಕಾಪಾಡಬೇಕು’: ರೈಲು ಪ್ರಯಾಣದ ಗದ್ದಲಕ್ಕೆ ಬೇಸತ್ತ ತೇಜಸ್ವಿ ಸೂರ್ಯ ಪತ್ನಿ

ರೈಲು ಪ್ರಯಾಣದ ವೇಳೆ ಸಹಪ್ರಯಾಣಿಕರ ಗದ್ದಲದಿಂದ ತೀವ್ರ ಕಿರಿಕಿರಿ ಅನುಭವಿಸಿರುವುದಾಗಿ ಬಿಜೆಪಿ...

ಬೀದರ್ | ಬರ ಪರಿಸ್ಥಿತಿ : ವಿಶೇಷ ಪ್ಯಾಕೇಜ್ ಘೋಷಿಸಲು ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದ್ದು, ಬೆಳೆ...