ಬೀದರ್‌ | ದಲಿತ ಸಂಘರ್ಷ ಸಮಿತಿಯಿಂದ ʼಮನುಸ್ಮೃತಿ ದಹನ ದಿನʼ ಆಚರಣೆ

Date:

ಡಾ.ಬಿ.ಆರ್‌.ಅಂಬೇಡ್ಕರ್ ಅವರು 1927ರ ಡಿ.25ರಂದು ಮನುಸ್ಮೃತಿ ದಹಿಸಿದ ಘಟನೆಯ ಸ್ಮರಣಾರ್ಥ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ನೇತ್ರತ್ವದಲ್ಲಿ ಬೀದರ್ ನಗರದ ಡಾ. ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆ ಎದುರು ಗುರುವಾರ ಮನುಸ್ಮೃತಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

- Advertisement -

ಬಳಿಕ ಮುಖಂಡರು ಮಾತನಾಡಿ, ʼಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶ್ರೇಣಿಕೃತ ಜಾತಿ ವ್ಯವಸ್ಥೆ, ಅಸ್ಪೃಶ್ಯತೆ, ಲಿಂಗಭೇದ, ಮಹಿಳೆಯರ ಮೇಲಿನ ದಬ್ಬಾಳಿಕೆ ಸೇರಿದಂತೆ ಅನಿಷ್ಟ ಸಾಮಾಜಿಕ ಪದ್ಧತಿಗಳ ಮೂಲವಾಗಿದ್ದ ಮನುಸ್ಮೃತಿಯನ್ನು ಸಾರ್ವಜನಿಕವಾಗಿ ದಹಿಸಿದ ಐತಿಹಾಸಿಕ ದಿನಕ್ಕೆ ಇಂದು 98 ವರ್ಷಗಳು ಪೂರ್ಣಗೊಂಡಿವೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ʼಸತಿಸಹಗಮನ, ಬಾಲ್ಯವಿವಾಹ, ದೇವದಾಸಿ ಪದ್ಧತಿ, ಬೆತ್ತಲೆ ಸೇವೆ ಮುಂತಾದ ಅನೇಕ ಅನ್ಯಾಯಗಳಿಗೆ ಕಾರಣವಾಗಿದ್ದ ಮನುವಾದಿ ಸಂಹಿತೆಗೆ ಅಂಬೇಡ್ಕರ್ ಅವರು ಬೆಂಕಿ ಹಚ್ಚುವ ಮೂಲಕ ಸಮಾನತೆ, ಸ್ವಾತಂತ್ರ‍್ಯ ಹಾಗೂ ಭಾತೃತ್ವದ ಹೋರಾಟಕ್ಕೆ ದಿಕ್ಕು ತೋರಿಸಿದ್ದರು. ಸ್ವಾತಂತ್ರ‍್ಯ ಭಾರತಕ್ಕೆ ಸಮಾನತೆಯ ಆಶಯದ ಸಂವಿಧಾನವನ್ನು ರೂಪಿಸಿದ ಡಾ.ಅಂಬೇಡ್ಕರ್ ಅವರ ಕೊಡುಗೆ ಅಮೂಲ್ಯವಾಗಿದೆʼ ಎಂದು ತಿಳಿಸಿದರು.

ʼಸಂವಿಧಾನ ಅಂಗೀಕಾರದ ಸಂದರ್ಭದಲ್ಲಿಯೇ ಕೆಲವು ಸಂಘಟನೆಗಳು ಸಂವಿಧಾನದ ವಿರುದ್ಧ ಅಸಹನೆಯನ್ನು ವ್ಯಕ್ತಪಡಿಸಿದವು. ಇಂದಿಗೂ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸವಾಲುಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ, ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆʼ ಮುಖಂಡರು ಅಭಿಪ್ರಾಯಪಟ್ಟರು.

ಇದನ್ನೂ ಓದಿ : ಧರ್ಮಸ್ಥಳ ಪ್ರಕರಣ | ಮಹಿಳಾ ಆಯೋಗಕ್ಕೆ ಸಾವಿರ ಪುಟಗಳ ವರದಿ ಸಲ್ಲಿಸಲು ಎಸ್‌ಐಟಿ ತಯಾರಿ?

ಪ್ರಮುಖರಾದ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ತುಕಾರಾಮ ಲಾಡಕರ್‌, ದಲಿತ ವಿದ್ಯಾರ್ಥಿ ಪರಿಷತ್‌ ಜಿಲ್ಲಾ ಸಂಚಾಳಕ ಸಂದೀಪ ಕಾಟೆ ಸೇರಿದಂತೆ ಪ್ರಮುಖರಾದ ಪ್ರದೀಪ ನಾಟೇಕರ್, ಶಿವಕುಮಾರ ನೀಲಕಟ್ಟಿ, ರವೀಂದ್ರ ಗೌಂಡೆ, ಸುನೀಲ ಸಂಗಮ, ಶಿವರಾಜ ಲಾಡಕರ, ರಾಜಕುಮಾರ ಚಂದನ, ವಿಠಲ ಲಾಡೆ, ಮಲ್ಲಿಕಾರ್ಜುನ ಭಂಡಾರಿ, ಶ್ರೀಪತರಾವ ದೀನೆ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಕಲ್ಯಾಣ | ಮಡಿವಾಳ ಮಾಚಿದೇವರ ಕುಂಡ ಅಭಿವೃದ್ಧಿಗೆ ಮನವಿ

ಬಸವಕಲ್ಯಾಣ ನಗರದ ಶರಣ ಮಡಿವಾಳ ಮಾಚಿದೇವರ ಕುಂಡವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ, ಅಗತ್ಯ...

ಎಸ್‌ಐಆರ್ | ಭಾಲ್ಕಿ ಕ್ಷೇತ್ರದಲ್ಲಿ ಮುಸ್ಲಿಮರ ಮತ ಅಳಿಸುವ ಯತ್ನ, ನೂರಾರು ಅರ್ಜಿ ಪತ್ತೆ?

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಇನ್ನೂ...

ಬೀದರ್‌ | ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

2026-27ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ...

ಬೀದರ್‌ | ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿ ಮುತ್ತಿಗೆ

ಬೀದರ್‌ ತಾಲೂಕಿನ ಅಮಲ್ಲಾಪುರ ಗ್ರಾಮದ ಸರ್ವೇ ನಂ.71ರ ಜಾಗವನ್ನು ದಲಿತ ಸಮುದಾಯದ...