ಬೀದರ್‌ | ಟನ್‌ ಕಬ್ಬಿಗೆ ₹3,500 ದರ ಘೋಷಿಸಿದ ಡಿಸಿ, ಧರಣಿ ಹಿಂಪಡೆದ ರೈತರು

Date:

ಬೀದರ್‌ ನಗರದ ಉಸ್ತುವಾರಿ ಸಚಿವರ ಕಚೇರಿ ಎದುರುಗಡೆ ಕಳೆದ 12ದಿನಳಿಂದ ಕಬ್ಬಿನ ದರ ನಿಗದಿಗೆ ಆಗ್ರಹಿಸಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸ್ಥಳಕ್ಕೆ ಸೋಮವಾರ ಸಂಜೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿದರು.

- Advertisement -

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, ” ನಾವು ಈಗಾಗಲೇ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಭೆ ನಡೆಸಲಾಗಿದೆ. ಪ್ರತಿ ಟನ್ ಕಬ್ಬಿಗೆ ₹3,400 + ₹100 ಕೊಡಲು ಒಪ್ಪಿದ್ದಾರೆ. ಬೆಳಗಾವಿಯಲ್ಲಿ ₹3,800, ಕಲಬುರಗಿಯಲ್ಲಿ ₹3,600 ಕೊಡಲಾಗುತ್ತಿದೆ. ರಿಕವರಿ ರೇಟ್ ಆಧರಿಸಿ ಬೆಲೆ ನಿಗದಿಪಡಿಸಲಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

“ಟನ್ ಕಬ್ಬಿಗೆ ₹3,500 ಕೊಡಬೇಕು. ಅದರ ಮೇಲೆ ಹೆಚ್ಚುವರಿ ಬೆಲೆ ನಿಗದಿಪಡಿಸಬೇಕು. ಈ ಬೇಡಿಕೆ ಈಡೇರುವವರೆಗೆ ಧರಣಿ ಹಿಂಪಡೆಯುವುದಿಲ್ಲ” ಎಂದು ಕೆಲ ರೈತರು ಪಟ್ಟು ಹಿಡಿದರು. ʼಸದ್ಯ ₹3,500 ಒಪ್ಪಿಕೊಳ್ಳಬೇಕು. ಇದರ ಮೇಲೆ ಹೆಚ್ಚುವರಿ ಕೊಡಿಸಲು ಎಲ್ಲಾ ರೀತಿಯಿಂದಲೂ ಪ್ರಯತ್ನಿಸುತ್ತೇನೆ’ ಎಂದು ಜಿಲ್ಲಾಧಿಕಾರಿ ಹೇಳಿದರು.

WhatsApp Image 2026 11 23 at 7.41.16 PM
ಜಾಹೀರಾತು

ಅಂತಿಮವಾಗಿ ರೈತರು ಅವರ ಬೇಡಿಕೆ ಒಪ್ಪಿಕೊಂಡು ಧರಣಿ ಕೈಬಿಟ್ಟರು. ಬಹುತೇಕ ರೈತರು ಧರಣಿ ಸ್ಥಳದಿಂದ ನಿರ್ಗಮಿಸಿದರು. ಆದರೆ, ಕೆಲವು ರೈತರು ₹3,500ಕ್ಕಿಂತ ಹೆಚ್ಚಿನ ಬೆಲೆ ಘೋಷಿಸುವವರೆಗೆ ನಿರ್ಗಮಿಸುವುದಿಲ್ಲ ಎಂದು ಅಲ್ಲಿಯೇ ಕುಳಿತಿದ್ದರು.

ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ಮುಖಂಡರಾದ ಈಶ್ವರ ಸಿಂಗ್ ಠಾಕೂರ್, ಗುಂಡುರೆಡ್ಡಿ, ಶ್ರೀನಿವಾಸ್ ರೆಡ್ಡಿ, ಕೆ.ಡಿ. ಗಣೇಶ್ ಸೇರಿದಂತೆ ಅನೇಕರಿದ್ದರು.

ಇದನ್ನೂ ಓದಿ : ಬೀದರ ದಕ್ಷಿಣ ಮಡಿವಾಳ ಸಮಾಜ ಸಂಘದ ನೂತನ ಅಧ್ಯಕ್ಷರಾಗಿ ರಾಜಕುಮಾರ ಆಯ್ಕೆ

WhatsApp Image 2026 11 13 at 8.18.17 PM 12
eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಟ್ಸ್‌ಆ್ಯಪ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ!

ಕಂಪ್ಯೂಟರ್‌ಗಳಲ್ಲಿ ವಾಟ್ಸ್‌ಆ್ಯಪ್ ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯದ ರಾಷ್ಟ್ರೀಯ ಸೈಬರ್...

ದೆಹಲಿ ರಸ್ತೆಗಳಲ್ಲಿ ಕೇವಲ BS-VI ವಾಹನಗಳಷ್ಟೇ ಓಡಾಡಲಿ: ವಾಯುಮಾಲಿನ್ಯ ತಡೆಗೆ ಸುಪ್ರೀಂ ಮಹತ್ವದ ಇಂಗಿತ!

ರಾಷ್ಟ್ರ ರಾಜಧಾನಿ ದೆಹಲಿಯ ವಾಯುಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ...

ಶಿವಮೊಗ್ಗ | 67 ಕ್ವಿಂಟಾಲ್ ಪಡಿತರ ಅಕ್ಕಿ ಕೊರತೆ: ಪರಿಶೀಲನೆಗೆ ಆಗ್ರಹ

ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ಸಂಬಂಧಪಟ್ಟ ಆಹಾರ ಇಲಾಖೆಯ ಆಹಾರ ನಿರೀಕ್ಷಕರಾದ...

ಯುಪಿ ಚುನಾವಣೆ | ಎಸ್‌ಪಿ-ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಮಾತುಕತೆ ಆರಂಭ; 2-4 ದಿನಗಳಲ್ಲಿ ಅಂತಿಮ ನಿರ್ಧಾರ ಸಾಧ್ಯತೆ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಇಂಡಿಯಾ ಮೈತ್ರಿಕೂಟದ...