ಬೀದರ್‌ | ಬ್ರಿಮ್ಸ್‌ನಲ್ಲಿ ʼಮಮತೆಯ ತೊಟ್ಟಿಲುʼ ಉದ್ಘಾಟಿಸಿದ ಡಿಸಿ ಶಿಲ್ಪಾ ಶರ್ಮಾ

Date:

ಬೇಡವಾದ ಮಕ್ಕಳನ್ನು ಕಸದ ತೊಟ್ಟಿ, ಸಾರ್ವಜನಿಕ ಸ್ಥಳಗಳಿಗೆ ಬಿಸಾಡುವ ಅಮಾನವೀಯ ಘಟನೆಗಳನ್ನು ತಡೆಯುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಸರ್ಕಾರಿ ಆಸ್ಪತ್ರೆ, ಬಸ್ ನಿಲ್ದಾಣಗಳು ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಮಮತೆಯ ತೊಟ್ಟಿಲುಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.

- Advertisement -

ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಶುಕ್ರವಾರ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬ್ರಿಮ್ಸ್ ಆಸ್ಪತ್ರೆ, ಭಾಲ್ಕಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ವಿಶೇಷ ದತ್ತು ಕೇಂದ್ರ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ʼಮಮತೆಯ ತೊಟ್ಟಿಲುʼ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ಮಕ್ಕಳು ದೇಶದ ಅಮೂಲ್ಯ ಸಂಪತ್ತು. ಪ್ರತಿಯೊಂದು ಮಗುವಿಗೂ ಬದುಕುವ ಹಕ್ಕು ಹಾಗೂ ಕುಟುಂಬದ ವಾತಾವರಣದಲ್ಲಿ ಬೆಳೆಯುವ ಅವಕಾಶ ಸಿಗಬೇಕು. ಇತ್ತೀಚೆಗೆ ಜಿಲ್ಲೆಯ ವಿವಿಧೆಡೆ ನವಜಾತ ಶಿಶುಗಳನ್ನು ಬಿಸಾಡಿದ ಅಮಾನವೀಯ ಘಟನೆಗಳು ನಡೆದಿದ್ದು, ಇಂತಹ ದುರ್ಘಟನೆಗಳು ಮರುಕಳಿಸದಂತೆ ತಡೆಯಲು ಮಮತೆಯ ತೊಟ್ಟಿಲು ಯೋಜನೆ ಜಾರಿಗೊಳಿಸಲಾಗುತ್ತಿದೆ. ಯಾರೂ ಕೂಡ ಮಗುವನ್ನು ನಿರ್ಲಕ್ಷ್ಯವಾಗಿ ಬಿಸಾಡದೆ, ಸುರಕ್ಷಿತವಾಗಿ ಮಮತೆಯ ತೊಟ್ಟಿಲಿನಲ್ಲಿ ಇರಿಸಬೇಕು” ಎಂದು ತಿಳಿಸಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಭಾಲ್ಕಿಯ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್‌ನ ಗುರುಬಸವ ಪಟ್ಟದ್ದೇವರು ಮಾತನಾಡಿ, “ಹಿರೇಮಠ ಸಂಸ್ಥಾನ ಅಡಿಯಲ್ಲಿ 2010ರಿಂದ ವಿಶೇಷ ದತ್ತು ಕೇಂದ್ರ ಯಶಸ್ವಿಯಾಗಿ ನಡೆಸಲಾಗುತ್ತಿದೆ. ಪ್ರತಿಯೊಂದು ಮಗುವಿಗೂ ಬದುಕುವ ಹಾಗೂ ಪ್ರೀತಿಯ ಕುಟುಂಬದಲ್ಲಿ ಬೆಳೆಯುವ ಹಕ್ಕು ಇದೆ. ಯಾವುದೇ ಕಾರಣಕ್ಕೂ ಮಗುವನ್ನು ಬಿಸಾಡದೆ ಮಮತೆಯ ತೊಟ್ಟಿಲಿನಲ್ಲಿ ಇರಿಸುವ ಮೂಲಕ ಅದರ ಭವಿಷ್ಯವನ್ನು ರಕ್ಷಿಸಬೇಕು” ಎಂದು ಮನವಿ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶಾರದಾ ಎನ್. ಕಲ್ಮಲಕರ್ ಮಾತನಾಡಿ, “ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಒಂದು ವಾರದೊಳಗೆ ಜಿಲ್ಲೆಯ ಎಲ್ಲಾ ತಾಲ್ಲೂಕು ಆಸ್ಪತ್ರೆಗಳು, ಬಸ್ ನಿಲ್ದಾಣಗಳು ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಮಮತೆಯ ತೊಟ್ಟಿಲುಗಳನ್ನು ಸ್ಥಾಪಿಸಲಾಗುತ್ತಿದೆ. ದತ್ತು ನಿಯಮಾವಳಿಗಳ ಪ್ರಕಾರ 107 ಮಕ್ಕಳಿಗೆ ದತ್ತು ಪ್ರಕ್ರಿಯೆಗೆ ಒಳಪಡಿಸಿ ಕುಟುಂಬ ವಾತಾವರಣ ಕಲ್ಪಿಸಲಾಗಿರುತ್ತದೆ. ಪ್ರಸ್ತುತ ವಿಶೇಷ ದತ್ತು ಕೇಂದ್ರದಲ್ಲಿ 7 ಮಕ್ಕಳಿರುತ್ತಾರೆ. ಈ ಮಕ್ಕಳನ್ನು ದತ್ತು ಪ್ರಕ್ರಿಯೆಗೆ ಒಳಪಡಿಸಿ ದತ್ತು ನೀಡಲಾಗುವುದು” ಎಂದು ಹೇಳಿದರು.

ಇದನ್ನೂ ಓದಿ : ಬೀದರ್‌ | ಬಿಸಿಯೂಟ ನಿರ್ವಹಣೆ ಹೊರೆ ಬಗೆಹರಿಸಲು ಒತ್ತಾಯ

ಕಾರ್ಯಕ್ರಮದಲ್ಲಿ ಬ್ರಿಮ್ಸ್ ನಿರ್ದೇಶಕಿ ಡಾ.ಶಾಂತಲಾ ಕೌಜಲಗಿ, ಡಾ.ಶಿವಯೋಗಿ ಬಾಳಿ, ಡಾ.ಅಹಮದ್ ಓದ್ದಿನ್, ಡಾ.ಉಮಾ ದೇಶಮುಖ, ಡಾ.ಸಂಜುಕುಮಾರ ಬಿರಾದಾರ, ಮಕ್ಕಳ ವಿಭಾಗದ ವೈದ್ಯರು, ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ ಮಹಾನಂದಾ ದೇವಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಯದ ಗುರುತುಗಳಿಲ್ಲವೆಂದು ಪೋಕ್ಸೋ ಸಂತ್ರಸ್ತೆಗೆ ಪರಿಹಾರ ನಿರಾಕರಿಸುವಂತಿಲ್ಲ: ಅಲಹಾಬಾದ್‌ ಹೈಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣದ ವೈದ್ಯಕೀಯ ವರದಿಯಲ್ಲಿ ದೈಹಿಕ ಗಾಯಗಳ ಗುರುತುಗಳು ದಾಖಲಾಗಿಲ್ಲ...

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...