ಬೀದರ್‌ | ‘ಬಸವ ಮಂಟಪ’ ಕೃತಿ ಮುಟ್ಟುಗೋಲು ನಿರ್ಧಾರ ಸ್ವಾಗತ

Date:

ಲೇಖಕ ರವಿ ಹಂಜ್ ರಚಿಸಿರುವ ‘ಬಸವ ಮಂಟಪ’ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿರುವುದನ್ನು ಸದ್ಭಾವನಾ ಮಂಚ್‌ನ ಬೀದರ್ ಜಿಲ್ಲಾ ಘಟಕ ಸ್ವಾಗತಿಸಿದೆ.

- Advertisement -

ಬಸವಣ್ಣನವರು ಸೇರಿದಂತೆ ಯಾವುದೇ ಮಹಾನ್ ವ್ಯಕ್ತಿಗಳ ಬಗ್ಗೆ ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಹಾಗೂ ಅವರ ಚಾರಿತ್ರ್ಯವನ್ನು ತಿರುಚಿ ಬಿಂಬಿಸುವುದು ಖಂಡನೀಯ. ಬಸವಣ್ಣನವರ ವೈಯಕ್ತಿಕ ಬದುಕಿನ ಕುರಿತು ಆಕ್ಷೇಪಾರ್ಹ ಅಂಶಗಳನ್ನು ಒಳಗೊಂಡ ಕೃತಿ ರಚಿಸಿ ಸಮಾಜದಲ್ಲಿ ಅಶಾಂತಿ ಮೂಡಿಸಿರುವ ಆರೋಪ ಎದುರಿಸುತ್ತಿರುವ ರವಿ ಹಂಜ್ ವಿರುದ್ಧ ಸರ್ಕಾರ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಂಚ್‌ನ ಜಿಲ್ಲಾ ಸಂಚಾಲಕ ಗುರುನಾಥ ಗಡ್ಡೆ ಹಾಗೂ ಸಹ ಸಂಚಾಲಕ ಮುಹಮ್ಮದ್ ನಿಜಾಮೊದ್ದೀನ್ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ಬಸವಣ್ಣನವರು ಮಹಾನ್ ಮಾನವತಾವಾದಿಯಾಗಿದ್ದು, ಸಕಲ ಜೀವಾತ್ಮರ ಒಳಿತನ್ನು ಬಯಸಿದ ಶರಣರಾಗಿದ್ದಾರೆ. ಅಂತಹ ಮಹಾನ್ ವ್ಯಕ್ತಿತ್ವಕ್ಕೆ ‘ಬಸವ ಮಂಟಪ’ ಕೃತಿಯ ಮೂಲಕ ಅಪಚಾರ ಎಸಗಿರುವುದು ಖಂಡನೀಯ. ಆಧಾರರಹಿತ ಬರಹಗಳ ಮೂಲಕ ಲಿಂಗಾಯತ ಧರ್ಮ ಹಾಗೂ ಶರಣ ಪರಂಪರೆಗೆ ಅವಮಾನ ಮಾಡಿರುವುದನ್ನು ಸಹಿಸಲು ಸಾಧ್ಯವಿಲ್ಲ. ಕೃತಿಯ ಹಿಂದೆ ಇರುವವರನ್ನೂ ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕರ್ನಾಟಕವು ಸರ್ವಜನಾಂಗದ ಶಾಂತಿಯ ತೋಟವಾಗಿದ್ದು, 12ನೇ ಶತಮಾನದಲ್ಲಿಯೇ ಬಸವಣ್ಣ ಸೇರಿದಂತೆ ಅನೇಕ ಶರಣರು ಸಮಾನತೆ ಮತ್ತು ಮಾನವೀಯ ಮೌಲ್ಯಗಳ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದ್ದಾರೆ. ಇಂತಹ ನಾಡಿನಲ್ಲಿ ವಿದೇಶದಲ್ಲಿದ್ದುಕೊಂಡು ಬಸವಣ್ಣನವರ ಚಾರಿತ್ರ್ಯಕ್ಕೆ ಮಸಿ ಬಳಿಯುವ ಪ್ರಯತ್ನ ಮಾಡಿರುವುದು ಖಂಡನೀಯ. ರವಿ ಹಂಜ್ ಅವರನ್ನು ಕೂಡಲೇ ಬಂಧಿಸಿ, ಕಾನೂನು ಪ್ರಕಾರ ಶಿಕ್ಷೆಗೆ ಒಳಪಡಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್ | ಪ್ರಸ್ಥಭೂಮಿ ಗುಡ್ಡಗಳ ಅಕ್ರಮ ಕಡಿತಕ್ಕೆ ಕಡಿವಾಣ ಹಾಕಿ : ವಿನಯಕುಮಾರ ಮಾಳಗೆ

WhatsApp Image 2026 11 13 at 8.18.17 PM 8
eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಕಲ್ಲಿನಿಂದ ದಂಪತಿಗಳ ಮೇಲೆ ಹಲ್ಲೆ; ಆರೋಪಿಗೆ 2 ವರ್ಷ ಜೈಲು, ₹25 ಸಾವಿರ ದಂಡ

ಪತಿ-ಪತ್ನಿಯ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ...

ವಿಜಯಪುರ |ಆಲಮಟ್ಟಿ ಜಲಾಶಯದ ನೀರಿನ ಹಂಚಿಕೆ ಲೆಕ್ಕಪತ್ರ ನೀಡಿ;ರೈತ ಸಂಘ ಆಗ್ರಹ

ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದಿಂದ ವಿಜಯಪುರ ಹಾಗೂ ಬಾಗಲಕೋಟ ಅವಳಿ...

ಬೀದರ್ | ಪ್ರಸ್ಥಭೂಮಿ ಗುಡ್ಡಗಳ ಅಕ್ರಮ ಕಡಿತಕ್ಕೆ ಕಡಿವಾಣ ಹಾಕಿ : ವಿನಯಕುಮಾರ ಮಾಳಗೆ

ಬೀದರ್ ಪ್ರಸ್ಥಭೂಮಿಯ ಸುತ್ತಮುತ್ತಲಿನ ಗುಡ್ಡಗಳನ್ನು ಅಕ್ರಮವಾಗಿ ಕಡಿದು, ನೈಸರ್ಗಿಕ ಪರಿಸರ ನಾಶಪಡಿಸುತ್ತಿರುವ...

ಬೀದರ್‌ | ʼಬಸವ ಮಂಟಪ’ ಕೃತಿಗೆ ಮುಟ್ಟುಗೋಲು : ಸ್ವಾಗತಾರ್ಹ ನಿರ್ಧಾರ

ಲೇಖಕ ರವಿ ಹಂಜ್ ರಚಿಸಿರುವ ‘ಬಸವ ಮಂಟಪ’ ಕೃತಿಗೆ ಮುಟ್ಟುಗೋಲು ಹಾಕಿಕೊಳ್ಳಲು...