ಬೀದರ್‌ | ಬರಗಾಲ ಘೋಷಿಸಿ ಎಕರೆಗೆ ₹50 ಸಾವಿರ ಪರಿಹಾರ ನೀಡಿ : ಸಿಎಂಗೆ ರೈತ ಸಂಘ ಮನವಿ

Date:

ಬೀದರ ಜಿಲ್ಲೆಯ ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ತಕ್ಷಣ ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಸೋಮವಾರ ಬೀದರ್ ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

- Advertisement -

ಮುಂಗಾರು ಆರಂಭವಾಗಿ ಒಂದು ತಿಂಗಳು ಕಳೆದರೂ ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿತ್ತನೆಗಾಗಿ ಬೀಜ ಮತ್ತು ಗೊಬ್ಬರ ಖರೀದಿಸಿದ್ದರೂ ಮಳೆಯ ಕೊರತೆಯಿಂದ ಬೆಳೆ ಹಾನಿಯಾಗುವ ಆತಂಕ ಎದುರಾಗಿದೆ. ಹೀಗಾಗಿ ಬೀದರ್ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರ ಸಂಪೂರ್ಣ ಕೃಷಿ ಸಾಲ ಮನ್ನಾ ಮಾಡುವುದರ ಜೊತೆಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಮುಂಬರುವ ದಿನಗಳಲ್ಲಿ ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವು ಕೊರತೆಯಾಗುವ ಸಾಧ್ಯತೆ ಇರುವುದರಿಂದ ಮೋಡ ಬಿತ್ತನೆ ನಡೆಸಿ ಮಳೆ ಸುರಿಯುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಕೆ ಮಾಡಿದ ರೈತರಿಗೆ ಪ್ರತಿ ಟನ್‌ಗೆ 1 ಕೆ.ಜಿ. ಸಕ್ಕರೆ ಉಚಿತವಾಗಿ ನೀಡಬೇಕು. ಕಬ್ಬು ಸಾಗಣೆ ಮಾಡದ ಷೇರು ಸದಸ್ಯರಿಗೆ ತಲಾ 5 ಕೆ.ಜಿ. ಸಕ್ಕರೆ ವಿತರಿಸುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ಸಂಘದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಜಿಲ್ಲೆಯ ಗೌರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಕೆ ಮಾಡಿದ ರೈತರಿಗೆ ಆರು ತಿಂಗಳು ಕಳೆದರೂ ಸಂಪೂರ್ಣ ಬಾಕಿ ಹಣ ಪಾವತಿಸಿಲ್ಲ ಎಂದು ಆರೋಪಿಸಿರುವ ರೈತ ಸಂಘ, ಶೀಘ್ರವೇ ಬಾಕಿ ಹಣ ಬಿಡುಗಡೆ ಮಾಡಬೇಕು. ಎನ್‌ಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಯು ಪ್ರತಿ ಟನ್‌ಗೆ ₹100 ಹಾಗೂ ಭವಾನಿ ಸಕ್ಕರೆ ಕಾರ್ಖಾನೆಯು ಸರ್ಕಾರದ ವಂತಿಗೆಯಾಗಿ ಪ್ರತಿ ಟನ್‌ಗೆ ₹50 ಬಾಕಿ ಉಳಿಸಿಕೊಂಡಿದ್ದು, ಅದನ್ನು ತಕ್ಷಣ ಪಾವತಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಇದನ್ನೂ ಓದಿ : ಬೀದರ್‌ | ಶರಣ ಸಂಸ್ಕೃತಿಯ ಜೀವಂತ ಕೇಂದ್ರ ಅನುಭವ ಮಂಟಪ : ಸಿಎಂ ಡಿ.ಕೆ.ಶಿವಕುಮಾರ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಶ್ರೀಮಂತ ಬಿರಾದಾರ, ಜಿಲ್ಲಾ ಗೌರವಾಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ, ರಾಜ್ಯ ಕಾರ್ಯದರ್ಶಿ (ಮಹಿಳಾ ಘಟಕ) ಶೋಭಾವತಿ ಕಾರಭಾರಿ, ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಜಮಖಂಡೆ, ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ಅಧ್ಯಕ್ಷರು ಹಾಗೂ ರೈತ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...

ಈ ದಿನ ಸಂಪಾದಕೀಯ | ಪ್ರಬುದ್ಧತೆಯತ್ತ ರಾಹುಲ್, ಪಥಭ್ರಾಂತದತ್ತ ಮೋದಿ

ದೇಶದ ಇತ್ತೀಚಿನ ರಾಜಕೀಯ ಬೆಳವಣಿಗೆಗಳು, ಕಳೆಗಟ್ಟುತ್ತಿರುವ ಜೆನ್-ಝಿ ಹೋರಾಟ, ಕೇಂದ್ರ ಸರ್ಕಾರದ...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...