ಬೀದರ್‌ | ಬರಪೀಡಿತ ಜಿಲ್ಲೆ ಘೋಷಿಸಿ, ಸಾಲ ಮನ್ನಾ ಮಾಡಿ ರೈತರ ಬದುಕಿಗೆ ಗ್ಯಾರಂಟಿ ಕೊಡಿ

Date:

ರೈತರು ಹಾಗೂ ಕೃಷಿ ಕಾರ್ಮಿಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವುದು ಸೇರಿದಂತೆ ಬೀದರ್‌ ಜಿಲ್ಲೆ ಬರಪೀಡಿತ ಘೋಷಣೆಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಬೀದರ್ ಜಿಲ್ಲಾ ಘಟಕವು ಮುಖ್ಯಮಂತ್ರಿ ಅವರಿಗೆ ಸೋಮವಾರ ಮನವಿ ಸಲ್ಲಿಸಿತು.

- Advertisement -

ರೈತ ಮುಖಂಡರು ಮಾತನಾಡಿ, “ಹವಾಮಾನ ಬದಲಾವಣೆ ಮತ್ತು ಎಲ್-ನಿನೋ ಪರಿಣಾಮದಿಂದ ರಾಜ್ಯದಲ್ಲಿ ಮಳೆ ಕೊರತೆಯಾಗಿದ್ದು, ಬಿತ್ತನೆ ಮಾಡಿದ ಹಾಗೂ ಬಿತ್ತನೆ ಮಾಡಲು ಸಾಧ್ಯವಾಗದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರತಿಯೊಬ್ಬ ರೈತರಿಗೆ ₹50 ಸಾವಿರ ವಿಶೇಷ ಧನಸಹಾಯ ನೀಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ...

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು ನಿಯಮಗಳನ್ನು ಸಾಮಾಜಿಕ ನ್ಯಾಯದ ಬೆಳಕಿನಲ್ಲಿ ಅಂತಃಕರಣ ಪೂರ್ವಕವಾಗಿ ಅರ್ಥ ಮಾಡಿಕೊಳ್ಳಬೇಕಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾದಾಗ ಮಾತ್ರ ಸಾಮಾಜಿಕ ನ್ಯಾಯವೆಂಬ...

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

“ರಸಗೊಬ್ಬರ ಖರೀದಿ ವೇಳೆ ಅನಗತ್ಯ ಗೊಬ್ಬರ ಹಾಗೂ ಇತರ ವಸ್ತುಗಳನ್ನು ಕಡ್ಡಾಯವಾಗಿ ಖರೀದಿಸುವಂತೆ ಒತ್ತಾಯಿಸುವ ಪದ್ಧತಿಗೆ ಸರ್ಕಾರ ಕಡಿವಾಣ ಹಾಕಬೇಕು. 60 ವರ್ಷ ಮೇಲ್ಪಟ್ಟ ರೈತರು, ಕೃಷಿ ಕಾರ್ಮಿಕರಿಗೆ ಯಾವುದೇ ಸಾಮಾಜಿಕ ಭದ್ರತೆ ಇಲ್ಲದಿರುವುದರಿಂದ ಅವರಿಗೆ ಪ್ರತಿ ತಿಂಗಳು ₹10 ಸಾವಿರ ಗೌರವಧನ ನೀಡಬೇಕು. ಗ್ರಾಮೀಣ ಭಾಗದಲ್ಲಿ ಕೃಷಿ ಕಾರ್ಮಿಕರಿಗೆ ವಿಬಿ-ಜಿ ರಾಮ್‌ ಜಿ ಯೋಜನೆಯಡಿ ಕಾಮಗಾರಿಗಳನ್ನು ತಕ್ಷಣ ಆರಂಭಿಸಿ, ದುಡಿಯುವ ಕೈಗಳಿಗೆ ಕೆಲಸ ಕೊಟ್ಟು ಗುಳೆ ಹೋಗುವುದನ್ನು ತಪ್ಪಿಸಬೇಕು” ಎಂದು ಒತ್ತಾಯಿಸಿದರು.

ಹುಮನಾಬಾದ್‌ ತಾಲೂಕಿನ ಹಳ್ಳಿಖೇಡ್(ಬಿ) ಸಮೀಪ ಇರುವ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಇದೇ ಹಂಗಾಮಿನಲ್ಲಿ ಕಾರ್ಯಾರಂಭಕ್ಕೆ ಜಿಲ್ಲೆಯ ಎಲ್ಲ ಚುನಾಯಿತ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಇಚ್ಚಾಶಕ್ತಿ ತೋರಬೇಕು. ಬೆಂಗಳೂರು ದಕ್ಷಿಣದ ಬಿಡದಿ ಟೌನ್‌ಶಿಪ್ ವಿರೋಧಿ ಹೋರಾಟದಲ್ಲಿ ಭಾಗವಹಿಸಿದ ರೈತರು ಹಾಗೂ ರೈತ ಮಹಿಳೆಯರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕು. ಭಾಲ್ಕೇಶ್ವರ್ ಸಹಕಾರ ಸಕ್ಕರೆ ಕಾರ್ಖಾನೆ (ಗೌರಿ ಶುಗರ್ ಫ್ಯಾಕ್ಟರಿ) ರೈತರಿಗೆ ಬಾಕಿ ಇರುವ ಕಬ್ಬಿನ ಹಣವನ್ನು ತಕ್ಷಣ ಪಾವತಿಸಬೇಕು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರನ್ನು ವಜಾಗೊಳಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

WhatsApp Image 2026 07 20 at 5.21.11 PM
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಆರ್ಥಿಕ ಸಂಕಷ್ಟದಲ್ಲಿರುವ ಎಲ್ಲ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಬ್ಯಾಂಕುಗಳು ಸಾಲ ವಸೂಲಾತಿಗೆ ನೀಡುತ್ತಿರುವ ನೋಟಿಸ್‌ಗಳನ್ನು ಸ್ಥಗಿತಗೊಳಿಸಬೇಕು. ತೋಟದ ಮನೆಗಳಿಗೆ ಸಿಂಗಲ್ ಫೇಸ್ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಬಚಾವತ್ ಆಯೋಗದ ಶಿಫಾರಸಿನಂತೆ ಬೀದರ್ ಜಿಲ್ಲೆಗೆ ಗೋದಾವರಿ ಜಲಾನಯನ ಪ್ರದೇಶದಿಂದ ಬರಬೇಕಿರುವ ಉಳಿದ 12 ಟಿಎಂಸಿ ನೀರನ್ನು ಬಿಡುಗಡೆ ಮಾಡಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಇದನ್ನೂ ಓದಿ : ಬೀದರ್‌ | ಸೋನಂ ವಾಂಗ್ಚೂಕ್‌ ಸತ್ಯಾಗ್ರಹಕ್ಕೆ ಬೆಂಬಲ: ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ಸಂಯುಕ್ತ ಕಿಸಾನ್ ಮೋರ್ಚಾದ ಗೌರವಾಧ್ಯಕ್ಷ ಶಿವರಾಯ ಮುದಾಳೆ, ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ರಾಜ್ಯ ಮಂಡಳಿಯ ಆಹ್ವಾನಿತ ಸದಸ್ಯ ವೀರಾರೆಡ್ಡಿ ಪಾಟೀಲ್, ರಾಜ್ಯ ಉಪಾಧ್ಯಕ್ಷ ಬಾಬುರಾವ ಹೊನ್ನಾ, ಖಾಸಿಮ್ ಅಲಿ, ರೈತ ಮುಖಂಡರಾದ ಶಿವರಾಜ ಪಾಟೀಲ ಅತಿವಾಳ, ತಾಲೂಕು ಅಧ್ಯಕ್ಷ ಖಮರ್ ಪಟೇಲ್, ತಾಲೂಕು ಉಪಾಧ್ಯಕ್ಷ ಬಸವರಾಜ ಅಷ್ಟೂರ, ನಜೀರ್ ಅಹ್ಮದ್, ಎಂ.ಡಿ. ಶಫಾಯತ್ ಅಲಿ, ಜೈಶೀಲಕುಮಾರ, ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಅರುಣ ಪಟೇಲ್, ನನ್ನೇಸಾಬ್ ಟಿ. ಮಿರ್ಜಾಪೂರ, ಭಾವುರಾವ ನೆಳವಾಡೆ, ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷೆ ಶಾಂತಮ್ಮಾ ಮೂಲಗೆ, ಮುಖಿಯೋದ್ದೀನ್, ಸರ್ವೋದಯ ಪಕ್ಷದ ಜಿಲ್ಲಾಧ್ಯಕ್ಷ ಕೋಂಡಿಬಾರಾವ ಪಾಂಡ್ರೆ, ರಾಜೇಂದ್ರಕುಮಾರ ಪಾಟೀಲ್, ಮಹಿಳಾ ಒಕ್ಕೂಟದ ಜಿಲ್ಲಾಧ್ಯಕ್ಷೆ ಶೀಲಾ ಸಾಗರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ – ಯೂನುಸ್ – ಶೇರ್ ಖಾನ್!

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್...

ಯೂಸುಫ್ ಪಠಾಣ್‌ಗೆ ಭರ್ಜರಿ ಕೊಡುಗೆ: ‘ಬಿಜೆಪಿ ವಾಷಿಂಗ್ ಮಷೀನ್’ ಕುತಂತ್ರಕ್ಕೆ ಇನ್ನೊಂದು ಕನ್ನಡಿ!

ಬಿಜೆಪಿಯನ್ನು ‘ವಾಷಿಂಗ್ ಮಷೀನ್’ ಎಂದು ಟೀಕಿಸುವುದಕ್ಕೆ ಯೂಸುಫ್ ಪಠಾಣ್ ಅವರ ಭೂಮಿ...

ಬಸವಕಲ್ಯಾಣ | ಶರಣರ ಇತಿಹಾಸ ಉಳಿಸುವಲ್ಲಿ ಮಹಾರಾಷ್ಟ್ರದ ಕೊಡುಗೆ ಅಪಾರ: ಬಸವದೇವರು

ಶರಣ ಧರ್ಮ ಕರ್ನಾಟಕದಲ್ಲಿ ಹುಟ್ಟಿದರೂ, ಶರಣರ ಪರಂಪರೆ ಹಾಗೂ ವಚನ ಸಾಹಿತ್ಯವನ್ನು...

ಭಾಲ್ಕಿ | ಖಟಕ್ ಚಿಂಚೋಳಿಯಲ್ಲಿ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಭಾಲ್ಕಿ ತಾಲ್ಲೂಕಿನ ಖಟಕ್ ಚಿಂಚೋಳಿ ಗ್ರಾಮದಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನ...