ಬೀದರ್‌ | 75 ವರ್ಷ ಮೇಲ್ಪಟ್ಟವರ ಮನೆಬಾಗಿಲಿಗೆ ಪಡಿತರ ವಿತರಿಸಿ : ಅಮೃತರಾವ್ ಚಿಮಕೋಡೆ

Date:

75 ವರ್ಷ ವಯಸ್ಸಿನ ಮೇಲ್ಪಟ್ಟ ಪಡಿತರ ಫಲಾನುಭವಿಗಳಿಗೆ ಮನೆ ಮನೆಗೆ ಪಡಿತರ ಧಾನ್ಯ ವಿತರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೊಡೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ʼಬೇಸಿಗೆ ಹಿನ್ನೆಲೆ ಪಡಿತರ ಅಂಗಡಿಗಳ ಮುಂದೆ ಫಲಾನುಭವಿಗಳಿಗೆ ತೊಂದರೆ ಆಗದಂತೆ ಕುಡಿಯುವ ನೀರು ಹಾಗೂ ನೆರಳಿನ ವ್ಯವಸ್ಥೆ ಕಲ್ಪಿಸಬೇಕು. ಪಂಚ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ʼಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ 13,13,305 ಫಲಾನುಭವಿಗಳು ಇದ್ದು, 3,57,286 ಪಡಿತರ ಚೀಟಿಗಳು ಜಾರಿಯಲ್ಲಿವೆ. ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್‌ದಾರರಿಗೆ 1,18,080 ಕ್ವಿಂಟಲ್ ಅಕ್ಕಿ ವಿತರಿಸಲಾಗುತ್ತಿದೆ. ಅಕ್ಟೋಬರ್ 2025ರಿಂದ ಪ್ರತಿ ತಿಂಗಳು 10 ಕೆಜಿ ಅಕ್ಕಿ ವಿತರಣೆ ನಡೆಯುತ್ತಿದೆ. ಮೃತ ಫಲಾನುಭವಿಗಳ ಪರಿಶೀಲನೆ ನಡೆಯುತ್ತಿದ್ದು, ಇದುವರೆಗೆ 5004 ಕಾರ್ಡ್‌ಗಳನ್ನು ರದ್ದುಪಡಿಸಲಾಗಿದ್ದು, 500 ಕ್ವಿಂಟಲ್ ಅಕ್ಕಿ ಉಳಿತಾಯವಾಗಿದೆʼ ಎಂದರು.

ʼಗೃಹಲಕ್ಷ್ಮಿ ಯೋಜನೆಯಡಿ 3,29,734 ಫಲಾನುಭವಿಗಳಿಗೆ ಒಟ್ಟು 1751.40 ಕೋಟಿ ರೂ. ಡಿಬಿಟಿ ಮೂಲಕ ಜಮಾ ಮಾಡಲಾಗಿದೆ. ಮೃತರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಇನ್ನೂ 3349 ಫಲಾನುಭವಿಗಳ ಮಾಹಿತಿ ಅಪ್‌ಡೇಟ್ ಆಗಬೇಕಿದೆ. ಜನವರಿ ತಿಂಗಳ 2000 ರೂ. ಗೃಹಲಕ್ಷ್ಮಿ ಮೊತ್ತ 3–4 ದಿನಗಳಲ್ಲಿ ಖಾತೆಗೆ ಜಮೆಯಾಗಲಿದೆ. ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ 11.70 ಕೋಟಿ ಮಹಿಳೆಯರು ಮತ್ತು ಬಾಲಕಿಯರು ಪ್ರಯಾಣ ಸೌಲಭ್ಯ ಪಡೆದಿದ್ದಾರೆ. ಪ್ರತಿ ದಿನ ಸರಾಸರಿ 1.16 ಲಕ್ಷ ಮಹಿಳೆಯರು ಪ್ರಯಾಣಿಸುತ್ತಿದ್ದು, 3,45.88 ಕೋಟಿ ಇಲಾಖೆಗೆ ಸಂದಾಯವಾಗಿದೆʼ ಎಂದು ವಿವರಿಸಿದರು.

ಗೃಹಜ್ಯೋತಿ ಯೋಜನೆಯಡಿ 3,29,750 ಫಲಾನುಭವಿಗಳಿಗೆ ಫೆಬ್ರವರಿ ಅಂತ್ಯದವರೆಗೆ 495.80 ಕೋಟಿ ರೂ. ವೆಚ್ಚವಾಗಿದೆ. ಯುವನಿಧಿ ಯೋಜನೆಯಡಿ 16,596 ವಿದ್ಯಾರ್ಥಿಗಳಿಗೆ 40.99 ಕೋಟಿ ರೂ. ಡಿಬಿಟಿ ಮೂಲಕ ಪಾವತಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ ಬದೋಲೆ ಮಾತನಾಡಿ, ʼಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಹಿನ್ನೆಲೆ ಬಸ್‌ಗಳ ಸಮಯಪಾಲನೆ ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳಲ್ಲಿ ಪ್ರತಿ ತಿಂಗಳು ಮೃತ ಫಲಾನುಭವಿಗಳ ಕುರಿತು ಪರಿಷ್ಕೃರಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬಸ್ ನಿಲ್ದಾಣಗಳಲ್ಲಿ ಕುಡಿಯುವ ನೀರಿನ ಸೌಲಭ್ಯ, ಶೌಚಾಲಯ ಹಾಗೂ ಕೆಲವು ಕಡೆ ಬಸ್ಸ್ ನಿಲುಗಡೆ ಕುರಿತು ಗ್ಯಾರಂಟಿ ಯೋಜನೆಗಳ ಸದಸ್ಯರು ಸಭೆಗೆ ಮಾಹಿತಿ ನೀಡಿದರು.

ಇದನ್ನೂ ಓದಿ : ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ ₹5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ಕಿಶೋರ ದುಬೆ, ಆಹಾರ ಇಲಾಖೆ ಉಪನಿರ್ದೇಶಕ ಪ್ರವೀಣ ಬರಗಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀಧರ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷರು, ತಾಲ್ಲೂಕಾಧ್ಯಕ್ಷರು, ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿ ಮುತ್ತಿಗೆ

ಬೀದರ್‌ ತಾಲೂಕಿನ ಅಮಲ್ಲಾಪುರ ಗ್ರಾಮದ ಸರ್ವೇ ನಂ.71ರ ಜಾಗವನ್ನು ದಲಿತ ಸಮುದಾಯದ...

ಬೀದರ್‌ | ಸೆ.27ರಂದು ಹೂಗಾರ ಮಾದಯ್ಯನವರ ಜಯಂತಿ ಅದ್ದೂರಿ ಆಚರಣೆ

ಅಖಂಡ ಕರ್ನಾಟಕ ಹೂಗಾರ ಮಹಾಸಭಾ ಬೀದರ್ ಜಿಲ್ಲಾ ಘಟಕದ ವತಿಯಿಂದ ಸೆ.27ರಂದು...

ಭಾಲ್ಕಿ | ಮಡಿವಾಳ ಮಾಚಿದೇವರ ಕಾಯಕ ನಿಷ್ಠೆ ಸಮಾಜಕ್ಕೆ ಆದರ್ಶ: ಮಹಾಲಿಂಗ ಸ್ವಾಮೀಜಿ

ಕಾಯಕ ಹಾಗೂ ವಿಶಿಷ್ಟ ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ಮಾಡಿದ...

ಬೀದರ್‌ನಲ್ಲಿ ಸೆ.28ರಂದು ಉದ್ಯೋಗ ಮೇಳ

ಬೀದರ್ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 28ರಂದು ಬೆಳಿಗ್ಗೆ...