ಬೀದರ್‌ | ಟನ್ ಕಬ್ಬಿಗೆ ₹4,000 ಬೆಲೆ ಘೋಷಣೆಗೆ ಪಟ್ಟು: ರೈತರ ಧರಣಿ 11ನೇ ದಿನಕ್ಕೆ

Date:

ಬೀದರ್ ಜಿಲ್ಲೆಯ ರೈತರ ನಾಲ್ಕು ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ 11ನೇ ದಿನ ಪೂರ್ಣಗೊಳಿಸಿದೆ.

- Advertisement -

ನ.23ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಖುದ್ದಾಗಿ ಆಗಮಿಸಿ ರೈತರ ಬೇಡಿಕೆಗಳಿಗೆ ಸ್ಪಷ್ಟ ಉತ್ತರ ನೀಡಬೇಕು. ಅಲ್ಲದೆ, ಪ್ರತಿ ಟನ್ ಕಬ್ಬಿಗೆ ₹4,000 ದರ ಘೋಷಿಸಬೇಕು ಎಂದು ರೈತ ಮುಖಂಡರು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ...

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ ವಿಮರ್ಶಿಸುತ್ತಿದ್ದ ಭಗತ್ ಸಿಂಗ್ ಅವರನ್ನು ಇಂದು ಅದೇ ಸಿದ್ಧಾಂತಗಳ ವಿರುದ್ಧ ನಿಂತಿರುವ ಬಿಜೆಪಿ, ಆರ್‌ಎಸ್‌ಎಸ್, ಎಬಿವಿಪಿ ನಾಯಕರು ತಮ್ಮ 'ಸ್ವಂತ...

ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ...

ಒಂದು ಆನೆಗೆ ದಿನಕ್ಕೆ ನೂರಾರು ಲೀಟರ್ ನೀರು ಮತ್ತು ನೂರಾರು ಕೆ.ಜಿ. ಆಹಾರ ಬೇಕಾಗುತ್ತದೆ. ಇನ್ನು ಕಾಡಿನಲ್ಲಿರುವ ಸಾವಿರಾರು ಆನೆಗಳು, ಹುಲಿಗಳು, ಚಿರತೆಗಳು, ಜಿಂಕೆಗಳು, ಕಾಡೆಮ್ಮೆಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಅಗತ್ಯವನ್ನು ಲೆಕ್ಕಹಾಕಿದರೆ...

ಬಾಗಲಕೋಟೆ | ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತರಗತಿ ಆರಂಭ;...

ಬಾಗಲಕೋಟೆ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಕಾಲ ಕೂಡಿಬಂದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎಂಬ ದಶಕಗಳ ಬೇಡಿಕೆಗೆ ಸಾಕಾರ ರೂಪ ಸಿಕ್ಕಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನಗರದ ಬಹುನಿರೀಕ್ಷಿತ...

ಜಿಲ್ಲೆಯ ರೈತರು ಬರಗಾಲದ ಸಂಕಷ್ಟದಿಂದ ತತ್ತರಿಸಿದ್ದು, ಕೃಷಿ ಬದುಕು ದುಸ್ಥಿತಿಗೆ ತಲುಪಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿ ಟನ್ ಕಬ್ಬಿಗೆ ₹4,500 ಹಾಗೂ ಕೆಲವು ಕಡೆ ₹4,000 ದರ ನಿಗದಿಪಡಿಸಲಾಗಿದೆ. ಕರ್ನಾಟಕದ ಭಾಗವಾಗಿರುವ ಬೀದರ್ ಜಿಲ್ಲೆಯ ರೈತರಿಗೆ ಮಾತ್ರ ಏಕೆ ತಾರತಮ್ಯ ಮಾಡಲಾಗುತ್ತಿದೆ ಎಂದು ಧರಣಿನಿರತರು ಪ್ರಶ್ನಿಸಿದ್ದಾರೆ.

ಬೆಳಗಾವಿಯಲ್ಲಿ ರೈತರ ಹೋರಾಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಂದಿಸಿ ಸಮಸ್ಯೆ ಪರಿಹಾರಕ್ಕೆ ಮುಂದಾಗಿದ್ದಾರೆ. ಅದೇ ರೀತಿ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಕೂಡ ಜಿಲ್ಲೆಯ ರೈತರ ಸಮಸ್ಯೆಗೆ ತಕ್ಷಣ ಸ್ಪಂದಿಸಬೇಕು ಎಂದು ಆಗ್ರಹಿಸಿದ್ದಾರೆ.

ನ.12ರಂದು ಜಿಲ್ಲಾಧಿಕಾರಿಗಳ ಮೂಲಕ ನಾಲ್ಕು ಬೇಡಿಕೆಗಳ ಮನವಿ ಸಲ್ಲಿಸಲಾಗಿತ್ತು. ಆದರೂ ರೈತರು ಸತತ ಒಂಬತ್ತು ದಿನ ಹೋರಾಟ ಮುಂದುವರಿಸಿ, ಹತ್ತನೇ ದಿನ ಬೀದರ್ ಬಂದ್‌ಗೆ ಕರೆ ನೀಡಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ್ದ ಅಪರ ಜಿಲ್ಲಾಧಿಕಾರಿಗಳು ಸಮಸ್ಯೆ ಪರಿಹಾರಕ್ಕೆ ಇನ್ನೂ ಮೂರು ದಿನಗಳ ಕಾಲಾವಕಾಶ ಕೋರಿರುವುದು ರೈತರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

ನ.23ರಂದು ಬೆಳಿಗ್ಗೆ 11 ಗಂಟೆಗೆ ನಿಗದಿಯಾಗಿರುವ ಸಭೆಯಂತೆ ಜಿಲ್ಲಾಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಖುದ್ದಾಗಿ ಆಗಮಿಸಿ ರೈತರ ನಾಲ್ಕು ಬೇಡಿಕೆಗಳಿಗೆ ಸ್ಪಷ್ಟ ಭರವಸೆ ನೀಡಬೇಕು. ಮುಖ್ಯವಾಗಿ ಪ್ರತಿ ಟನ್ ಕಬ್ಬಿಗೆ ₹4,000 ದರ ಘೋಷಿಸಬೇಕು. ಇಲ್ಲದಿದ್ದರೆ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

WhatsApp Image 2026 11 13 at 8.18.17 PM 11

ರೈತ ಮುಖಂಡರಾದ ಕಿರಣ ಖಂಡ್ರೆ, ಬಾಬುರಾವ ಹೊನ್ನಾ, ಮಲ್ಲಿಕಾರ್ಜುನ ಸ್ವಾಮಿ, ಓಂಪ್ರಕಾಶ ರೊಟ್ಟೆ, ಗುಂಡು ರೆಡ್ಡಿ, ಕೆ.ಡಿ. ಗಣೇಶ, ವಿಠಲರಾವ ಮೇತ್ರೆ, ಜೈರಾಜ ಕೊಳ್ಳಾ, ನಾಗಶೆಟ್ಟೆಪ್ಪ ಲಂಜವಾಡೆ ಹಾಗೂ ಶಿವರಾಜ ಪಾಟೀಲ ಅತಿವಾಳ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಚಂದ್ರಶೇಖರ ಕಂಬಾರ ಅವರ ಕತೆ | ನಾರ್ಸಿಸಸ್

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಳಿಗಾಲದ ಅಧಿವೇಶನ ಪೂರ್ವಸಿದ್ಧತೆ; 12 ಸಮಿತಿಗಳ ರಚನೆ

ಡಿಸೆಂಬರ್ ತಿಂಗಳಲ್ಲಿ ಜರುಗಲಿರುವ ವಿಧಾನಮಂಡಲ ಚಳಿಗಾಲ ಅಧಿವೇಶನದ ಸಂದರ್ಭದಲ್ಲಿ ಯಾವುದೇ ಲೋಪದೋಷಗಳಿಗೆ...

ಕತ್ತಲಲ್ಲಿ ಅಡ್ಜಸ್ಟ್‌ಮೆಂಟ್ ಮಾಡಿಕೊಳ್ಳುವ ರಾಜಕಾರಣಿ ನಾನಲ್ಲ: ವಿಜಯೇಂದ್ರಗೆ ಜನಾರ್ದನ ರೆಡ್ಡಿ ತಿರುಗೇಟು

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೂತನ ಸರ್ಕಾರಿ ನಿವಾಸದ ಗೃಹಪ್ರವೇಶ ಔತಣಕೂಟದಲ್ಲಿ...

ಗದಗ | ಕೃಷಿ ಮೌಲ್ಯವರ್ಧನೆ, ಮಾರುಕಟ್ಟೆ ಜಾಲ ವಿಸ್ತರಣೆ ಇಂದಿನ ಅಗತ್ಯ: ಈಶ್ವರ ಖಂಡ್ರೆ

ಕೃಷಿ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಲಕ್ಷಾಂತರ ಕುಟುಂಬಗಳ ಜೀವನೋಪಾಯಕ್ಕೆ ಆಧಾರವಾಗಿದೆ. ದೇಶದ...

ವೋಟ್ ಇಲ್ಲದಿದ್ದರೆ ಲೈಟೂ ಇಲ್ಲ; ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋತ ಬೆನ್ನಲ್ಲೇ ಗ್ರಾಮದ ಬೀದಿ ದೀಪಗಳು ಆಫ್!

ಪಂಚಾಯತ್ ಸಮಿತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರಾಭವಗೊಂಡ ಬೆನ್ನಲ್ಲೇ, ಚುನಾವಣೆಗೂ ಮುನ್ನ...