ಬೀದರ್‌ | ಕ್ರೈಸ್ ವಸತಿ ಶಾಲೆಗಳ ಖಾಲಿ ಸೀಟು ಕೌನ್ಸೆಲಿಂಗ್ ಮೂಲಕವೇ ಹಂಚಿಕೆಗೆ ಆಗ್ರಹ

Date:

ಬೀದರ್ ಜಿಲ್ಲೆಯ ಕ್ರೈಸ್ ವಸತಿ ಶಾಲೆಗಳ ಆರನೇ ತರಗತಿಯ ಖಾಲಿ ಉಳಿದ ಸ್ಥಾನಗಳನ್ನು ಕೌನ್ಸೆಲಿಂಗ್ ಮೂಲಕವೇ ಅರ್ಹ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಬೇಕು ಎಂದು ಜೈ ಕರುನಾಡ ವೇದಿಕೆ ಆಗ್ರಹಿಸಿದೆ.

- Advertisement -

ವೇದಿಕೆಯ ಪದಾಧಿಕಾರಿಗಳು ನಗರದಲ್ಲಿ ನಿಯೋಗದೊಂದಿಗೆ ಜಿಲ್ಲಾಧಿಕಾರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಖಾ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಈಗಾಗಲೇ ಮೊದಲ, ಎರಡನೇ ಮೂರನೇ ಆಯ್ಕೆ ಪಟ್ಟಿ ಹಾಗೂ ವಿಶೇಷ ಪಟ್ಟಿ ಪ್ರಕಟಿಸಿ, ಆಯ್ಕೆಯಾದವರಿಗೆ ಪ್ರವೇಶ ಕಲ್ಪಿಸಲಾಗಿದೆ. ಇನ್ನೂ ಖಾಲಿ ಉಳಿದ ಸ್ಥಾನಗಳಿಗೆ ಹಣ, ವೈಯಕ್ತಿಕ, ರಾಜಕೀಯ ಪ್ರಭಾವಕ್ಕೆ ಮಣಿದು ಕೌನ್ಸೆಲಿಂಗ್ ನಡೆಸದೆ ಪ್ರವೇಶ ಒದಗಿಸಲಾಗುತ್ತಿದೆ ಎಂಬ ದೂರುಗಳು ಸಾರ್ವಜನಿಕವಾಗಿ ಕೇಳಿ ಬರುತ್ತಿವೆ” ಎಂದು ದೂರಿದ್ದಾರೆ.

ಈಗಾಗಲೇ ಪ್ರಕಟಿಸಲಾದ ಪಟ್ಟಿಗಳಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಖಾಲಿ ಉಳಿದ ಸ್ಥಾನಗಳ ನಿಖರ ಸಂಖ್ಯೆಯನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು. ಕೌನ್ಸಲಿಂಗ್‍ಗೆ ಅರ್ಹರಾದ ವಿದ್ಯಾರ್ಥಿಗಳ ಪಟ್ಟಿಯನ್ನು ಮುಂಚಿತವಾಗಿ ಪ್ರಕಟಿಸಿ, ವಿದ್ಯಾರ್ಥಿ ಹಾಗೂ ಪಾಲಕರಿಗೆ ಮಾಹಿತಿ ನೀಡಬೇಕು. ಖಾಲಿ ಇರುವ ಎಲ್ಲ ಸ್ಥಾನಗಳನ್ನು ಜಿಲ್ಲಾಡಳಿತದ ಮೇಲುಸ್ತುವಾರಿಯಲ್ಲಿ ಮೆರಿಟ್ ಆಧಾರದಲ್ಲಿಯೇ ಪಾರದರ್ಶಕವಾಗಿ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು.

Advertisements

ಯಾವುದಾದರೂ ವಿದ್ಯಾರ್ಥಿಗೆ ಕೌನ್ಸೆಲಿಂಗ್ ಇಲ್ಲದೇ ಪ್ರವೇಶ ಕಲ್ಪಿಸಲಾಗಿದೆಯೇ ಎನ್ನುವುದನ್ನು ಪರಿಶೀಲಿಸಬೇಕು. ಕೌನ್ಸೆಲಿಂಗ್ ಇಲ್ಲದೆ ಪ್ರವೇಶ ಒದಗಿಸಿದ್ದಲ್ಲಿ ತಪ್ಪಿಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಬೀದರ್‌ | ಸಮಾನತೆ ತಳಹದಿ ಮೇಲೆ ಸದೃಢ ಸಮಾಜ ಕಟ್ಟಿದ ಶರಣರು: ಸವಿತಾ ಪಾಟೀಲ

ವೇದಿಕೆಯ ಜಿಲ್ಲಾ ಅಧ್ಯಕ್ಷ ಗೋಪಾಲ್ ಆರ್.ಕೆ. ನಿಯೋಗದ ನೇತೃತ್ವ ವಹಿಸಿದ್ದರು. ಉಪಾಧ್ಯಕ್ಷ ನಾಗೇಶ ಸ್ವಾಮಿ ಮಸ್ಕಲ್, ಸುರೇಶ ಮಮದಾಪುರಕರ್, ಪ್ರಧಾನ ಕಾರ್ಯದರ್ಶಿ ಡಾ. ಶಿವಕುಮಾರ ಬಿ. ಮತ್ತಿತರರು ಇದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ, ಚೀನಾಗೆ ಹೆದರಿದಿರೇ?

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ...