ಬೀದರ್‌ | ಎಸ್‌ಐಆರ್‌ ರದ್ದತಿಗೆ ಆಗ್ರಹ: ನ.5ರ ಪ್ರತಿಭಟನೆಗೆ ಬೆಂಬಲ

Date:

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ವಿರುದ್ಧವಾಗಿದ್ದು, ಇದರ ಮೂಲಕ ಅರ್ಹ ಮತದಾರರನ್ನು ಮತದಾನದ ಹಕ್ಕಿನಿಂದ ವಂಚಿಸಲಾಗುತ್ತಿದೆ. ಎಸ್‌ಐಆರ್‌ ಪ್ರಕ್ರಿಯೆ ತಕ್ಷಣ ರದ್ದುಗೊಳಿಸಬೇಕು ಎಂದು ಎದ್ದೇಳು ಕರ್ನಾಟಕ ಸಂಘಟನೆಯ ಸಲಹಾ ಮಂಡಳಿ ಸದಸ್ಯ ಎಂ.ಡಿ.ನಿಝಾಮುದ್ದಿನ್ ಆಗ್ರಹಿಸಿದರು.

- Advertisement -

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಎಸ್‌ಐಆರ್‌ ಪ್ರಕ್ರಿಯೆ ವಿರೋಧಿಸಿ ನವೆಂಬರ್‌ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂಡಿಯಾ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿರುವ ಪ್ರತಿಭಟನೆಗೆ ಸಂಘಟನೆ ಬೆಂಬಲ ವ್ಯಕ್ತಪಡಿಸುತ್ತದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಮಣಿಪುರವನ್ನು ಜನಾಂಗೀಯ ಘರ್ಷಣೆಯ ದಳ್ಳುರಿಗೆ ತಳ್ಳಿ ಕೈಚೆಲ್ಲಿದೆ ಮೋ-ಶಾ...

ಮ್ಯಾನ್ಮಾರ್‌ನೊಂದಿಗೆ ಸುಮಾರು 400 ಕಿಲೋಮೀಟರ್ ಗಡಿ ಹಂಚಿಕೊಳ್ಳುವ ಈಶಾನ್ಯ ಭಾರತದ ಗಡಿ ರಾಜ್ಯ ಮಣಿಪುರದಲ್ಲಿ ಶತಮಾನಗಳಿಂದ ಬೆಳೆದು ಬಂದಿದ್ದ ಸೌಹಾರ್ದತೆಯ ಬೇರುಗಳನ್ನು ಸಂಪೂರ್ಣವಾಗಿ ಕೊಳೆತು ಹೋಗಲು ಕೇಂದ್ರ ಸರ್ಕಾರ ಬಿಟ್ಟಂತಿದೆ. 2023ರಿಂದ ನಡೆಯುತ್ತಿರುವ...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ತಮ್ಮ ಮತದಾನದ ಹಕ್ಕಿನ ಮೂಲಕ ಸರ್ಕಾರವನ್ನು ಆಯ್ಕೆ ಮಾಡುತ್ತಾರೆ. ಆದರೆ, ಪ್ರಸ್ತುತ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯು ಸರ್ಕಾರವೇ ತನಗೆ ಬೇಕಾದ ಮತದಾರರನ್ನು ಆಯ್ಕೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಿಸುತ್ತಿದೆ. ಇದು ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದರು.

ದೇಶದ ವಿವಿಧ ರಾಜ್ಯಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ. ವಿಶೇಷವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ವೃದ್ಧರು ಹಾಗೂ ಅನಕ್ಷರಸ್ಥರು ಇದರಿಂದ ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ. ಅರ್ಹ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

75 ಸಾವಿರ ಮತದಾರರ ಹೆಸರು ಕೈಬಿಟ್ಟಿರುವ ಆರೋಪ

ಸಂಘಟನೆಯ ಸಲಹಾ ಮಂಡಳಿ ಗೌರವಾಧ್ಯಕ್ಷ ಡಾ.ಮಕ್ಸುದ್ ಚಂದಾ ಮಾತನಾಡಿ, “ಬೀದರ್ ಜಿಲ್ಲೆಯಲ್ಲಿ ಸುಮಾರು 75 ಸಾವಿರ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಆರೋಪಿಸಿದರು. ಯಾವ ಮತದಾರರ ಹೆಸರುಗಳನ್ನು, ಯಾವ ಕಾರಣಕ್ಕಾಗಿ ತೆಗೆದುಹಾಕಲಾಗಿದೆ ಎಂಬುದನ್ನು ಜಿಲ್ಲಾಡಳಿತ ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು” ಎಂದು ಒತ್ತಾಯಿಸಿದರು.

ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ ಎಂಬುದನ್ನು ತಿಳಿದುಕೊಳ್ಳಲು ಸಾರ್ವಜನಿಕರಿಗೆ ಸಮರ್ಪಕ ಮಾಹಿತಿ ಲಭ್ಯವಾಗುತ್ತಿಲ್ಲ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರ ಪಟ್ಟಿ ಹಾಗೂ ಕೈಬಿಟ್ಟ ಮತದಾರರ ಹೆಸರುಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಾಮಾಜಿಕ ಪರಿಶೋಧನೆ ನಡೆಸಿ, ಅನ್ಯಾಯಕ್ಕೊಳಗಾದ ಮತದಾರರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಸಂಘಟನೆಯ ಸಂಚಾಲಕ ಓಂಪ್ರಕಾಶ ರೊಟ್ಟೆ ಮಾತನಾಡಿ, “ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಎಸ್‌ಐಆರ್‌ ಆಧಾರಿತ ಮತದಾರರ ಪಟ್ಟಿಯನ್ನು ಬಳಸಬಾರದು. ರಾಜ್ಯ ಚುನಾವಣಾ ಆಯೋಗವು ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಕಾನೂನುಬದ್ಧವಾಗಿ ಪ್ರತ್ಯೇಕ ಮತದಾರರ ಪಟ್ಟಿ ಸಿದ್ಧಪಡಿಸಿ ಚುನಾವಣೆ ನಡೆಸಬೇಕು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಯಾರೊಬ್ಬರೂ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಕ್ರಮ ವಹಿಸಬೇಕು” ಎಂದು ಆಗ್ರಹಿಸಿದರು.

WhatsApp Image 2026 10 10 at 7.46.08 PM 31

ಸಲಹಾ ಮಂಡಳಿ ಸದಸ್ಯ ವಿಠಲದಾಸ ಪ್ಯಾಗೆ ಮಾತನಾಡಿ, “ಮತದಾರರ ಹೆಸರು ಸೇರ್ಪಡೆಗೆ ಬಳಸುವ ನಮೂನೆ-6, ಹೆಸರು ತೆಗೆದುಹಾಕಲು ಬಳಸುವ ನಮೂನೆ-7 ಹಾಗೂ ಮತದಾರರ ವಿವರಗಳ ತಿದ್ದುಪಡಿಗೆ ಸಂಬಂಧಿಸಿದ ನಮೂನೆ-8ರ ದುರ್ಬಳಕೆಯಾಗುತ್ತಿದೆ. ಬೀದರ್, ಭಾಲ್ಕಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಒಬ್ಬ ವ್ಯಕ್ತಿಯ ಹೆಸರಿನಲ್ಲಿ ನೂರಾರು ನಮೂನೆ-7 ಅರ್ಜಿಗಳನ್ನು ಸಲ್ಲಿಸಿ ಮತದಾರರ ಹೆಸರುಗಳನ್ನು ತೆಗೆದುಹಾಕಲು ಯತ್ನಿಸಿರುವ ಆರೋಪಗಳಿವೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಚಿಂತಕ ದೇವಿದಾಸ ತುಮಕುಂಟೆ ಮಾತನಾಡಿ, “ಎಸ್‌ಐಆರ್‌ ಪ್ರಕ್ರಿಯೆ ಹಾಗೂ ಮತದಾರರ ನೋಂದಣಿ ನಮೂನೆಗಳಲ್ಲಿ ಮಾಡಿರುವ ಬದಲಾವಣೆಗಳ ಕುರಿತು ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಲಾದ ಪ್ರಶ್ನೆಗಳಿಗೆ ಚುನಾವಣಾ ಆಯೋಗ ಸಮರ್ಪಕ ಉತ್ತರ ನೀಡಿಲ್ಲ. ಚುನಾವಣಾ ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದರೂ ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಲ್ಲಿಯೇ ಕಾರ್ಯನಿರ್ವಹಿಸಬೇಕು. ಮತದಾರರ ನೋಂದಣಿ ನಮೂನೆಗಳಲ್ಲಿ ಬದಲಾವಣೆ ಮಾಡಲು ಅನುಸರಿಸಿರುವ ಕಾನೂನುಬದ್ಧ ಪ್ರಕ್ರಿಯೆಯನ್ನು ಆಯೋಗ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಸದಸ್ಯರಾದ ಸಂತೋಷ ಜೋಳದಾಬಕೆ, ಮಚ್ಚೇಂದ್ರ ವಾಘಮಾರೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

WhatsApp Image 2026 10 10 at 6.59.42 PM 15

ಇದನ್ನೂ ಓದಿ : ಔರಾದ್‌ | ಕುಡಿಯುವ ನೀರು ಪೂರೈಕೆಯಲ್ಲಿ ಲೋಪವಾದರೆ ಕ್ರಮ: ಶಾಸಕ ಪ್ರಭು ಚವ್ಹಾಣ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಜನರ ಭವಿಷ್ಯ ರೂಪಿಸುವ ‘ಬೆಂಗಳೂರು ಕೌಶಲ್ಯ ಶೃಂಗಸಭೆ 2026’ ನಾಳೆಯಿಂದ ಆರಂಭ

ಕರ್ನಾಟಕದ 'ಕಾರ್ಯಪಡೆ 2030' (Workforce 2030) ಕಾರ್ಯಸೂಚಿಗೆ ಹೊಸ ವೇಗ ನೀಡಲು...

ಶಿಕ್ಷಣ ಹಕ್ಕು ಕಾಯ್ದೆ ಸಮರ್ಪಕ ಜಾರಿಗೆ ಆಗ್ರಹಿಸಿ ನ. 26ರಿಂದ ಅನಿರ್ದಿಷ್ಟಾವಧಿ ಧರಣಿ

ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಉಳಿವಿಗೆ ಆಗ್ರಹಿಸಿ ಹಾಗೂ ಶಿಕ್ಷಣ ಹಕ್ಕು ಕಾಯ್ದೆ...

ಪಂಜಾಬ್‌ನಲ್ಲಿ ಮತ್ತೆ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲಿದೆಯೇ ಅಕಾಲಿದಳ?

ಪಂಜಾಬ್ ರಾಜಕಾರಣದಲ್ಲಿ ದಶಕಗಳ ಕಾಲ ಒಂದಾಗಿದ್ದು, ನಂತರ ಸಿದ್ಧಾಂತ ಮತ್ತು ರೈತರ...

ಕನ್ನಡದಲ್ಲೇ KATಗೆ ಅರ್ಜಿ ಸಲ್ಲಿಸಬಹುದು; ಇಂಗ್ಲಿಷ್ ಕಡ್ಡಾಯವಲ್ಲ ಎಂದ ಹೈಕೋರ್ಟ್

ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಗೆ (KAT) ಕನ್ನಡದಲ್ಲಿಯೂ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ...