ಬೀದರ್‌ | ರೈತರ ಸಂಪೂರ್ಣ ಸಾಲಮನ್ನಾ, ಕೃಷಿ ಕಲ್ಯಾಣ ಪ್ರಾಧಿಕಾರ ರಚನೆಗೆ ಆಗ್ರಹ

Date:

ರೈತರು ಮತ್ತು ಕೃಷಿ ಕಾರ್ಮಿಕರ ಸಂಪೂರ್ಣ ಸಾಲಮನ್ನಾ ಮಾಡಬೇಕು, ಕೇಂದ್ರ ಮಟ್ಟದಲ್ಲಿ ರೈತರ ಕ್ಷೇಮಾಭಿವೃದ್ಧಿ ಪ್ರಾಧಿಕಾರ ರಚಿಸಬೇಕು. ಎಸ್‌ಐಆರ್ ಪ್ರಕ್ರಿಯೆ ರದ್ದುಪಡಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಲಾಯಿತು.

- Advertisement -

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಎಸ್‌ಐಆರ್ ವಿರೋಧಿ ಒಕ್ಕೂಟ ಹಾಗೂ ಎದ್ದೇಳು ಕರ್ನಾಟಕದ ಜಂಟಿ ಸಮಿತಿ ವತಿಯಿಂದ ನವೆಂಬರ್ 26ರ ಸಂವಿಧಾನ ದಿನದ ಪ್ರಯುಕ್ತ ನಗರದ ಅಂಬೇಡ್ಕರ್‌ ವೃತ್ತದ ಸಮೀಪದಲ್ಲಿ ಆಯೋಜಿಸಿದ ಪ್ರತಿಭಟನಾ ಸಭೆಯಲ್ಲಿ ಸಹಾಯಕ ಆಯುಕ್ತರ ವತಿಯಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಬಿಸ್ಲೆರಿ’ ವಿರುದ್ಧದ ಕ್ರಮಕ್ಕೂ ನೀರು ಮಾರುಕಟ್ಟಗೆ ‘ಅಂಬಾನಿ’ ಪ್ರವೇಶಕ್ಕೂ...

ಭಾರತದ ಪ್ಯಾಕೇಜ್ಡ್ ಕುಡಿಯುವ ನೀರಿನ ಮಾರುಕಟ್ಟೆಯಲ್ಲಿ ಸುಮಾರು 35ರಿಂದ 36%ರಷ್ಟು ಮಾರುಕಟ್ಟೆ ಪಾಲನ್ನು ಬಿಸ್ಲೆರಿ ಹೊಂದಿದೆ. ಬಿಸ್ಲೆರಿ ನೀರಿನ ಸಂಸ್ಥೆ ‘ಬಿಸ್ಲೆರಿ ಇಂಟರ್‌ನ್ಯಾಷನಲ್ ಪ್ರೈವೇಟ್ ಲಿಮಿಟೆಡ್’ ವಿರುದ್ಧ ಭಾರತೀಯ ಆಹಾರ ಸುರಕ್ಷತೆ ಮತ್ತು...

ಸಂವಿಧಾನ ದಿನ | ಸಂವಿಧಾನಕ್ಕೆ ಮೋದಿ ಸರ್ಕಾರ ಮತ್ತು...

ಭಾರತವು ಸಂವಿಧಾನ ದಿನವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆ ಮತ್ತು ಸಂವಿಧಾನದ ಮೂಲ ಆಶಯಗಳು ಅಭೂತಪೂರ್ವ ಬಿಕ್ಕಟ್ಟಿಗೆ ಸಿಲುಕಿವೆ. 2014ರಲ್ಲಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ...

ಯುಪಿ ಚುನಾವಣೆ: ಆಡಳಿತ ಯಂತ್ರ, ಜಾತಿ ಸಮೀಕರಣ ಮತ್ತು...

2027ರ ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯಲ್ಲಿನ ಲಿಂಗ ಅಂತರ, ಜಾತಿ ಸಮೀಕರಣ ಹಾಗೂ ಮೈತ್ರಿ ಪಕ್ಷಗಳ ಸೀಟು ಹಂಚಿಕೆಯ ಚೌಕಾಸಿ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಸಾಮಾಜಿಕ ನ್ಯಾಯದ ಹೆಸರಿನಲ್ಲಿ ನಡೆಯುತ್ತಿರುವ...

ನಾಗರಿಕ ಮತಕಾವಲು ಸಮಿತಿಯ ಗೌರವಾಧ್ಯಕ್ಷ ಡಾ.ಮಕ್ಸೂದ್ ಚಂದಾ ಮಾತನಾಡಿ, “ದೇಶದಲ್ಲಿ ರೈತರು ಎದುರಿಸುತ್ತಿರುವ ಆರ್ಥಿಕ ಸಂಕಷ್ಟ ಹಾಗೂ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಉಂಟಾಗುತ್ತಿರುವ ಸವಾಲುಗಳ ಕುರಿತು ರಾಷ್ಟ್ರಪತಿಗಳ ಗಮನ ಸೆಳೆಯಲಾಗಿದೆ” ಎಂದರು.

‌ಸಮಿತಿಯ ಮುಖಂಡ ಬಾಬುರಾವ ಹೊನ್ನಾ ಮಾತನಾಡಿ, “ಜಾಗತೀಕರಣ ಮತ್ತು ಖಾಸಗೀಕರಣದ ಪರಿಣಾಮ ಕೃಷಿ ಕ್ಷೇತ್ರ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ರೈತರು, ಕೃಷಿ ಕಾರ್ಮಿಕರು ಸೇರಿದಂತೆ ವಿವಿಧ ವರ್ಗದ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. 1991ರಿಂದ ಆರಂಭವಾದ ಖಾಸಗೀಕರಣದ ಪರಿಣಾಮ ಐದು ಲಕ್ಷಕ್ಕೂ ಅಧಿಕ ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೇಶದಲ್ಲಿ ಸಂಪತ್ತಿನ ಕೇಂದ್ರೀಕರಣ, ನಿರುದ್ಯೋಗ ಮತ್ತು ಬಡತನ ಹೆಚ್ಚಾಗಲು ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳೇ ಕಾರಣ” ಎಂದು ಆರೋಪಿಸಿದರು.

ಎದ್ದೇಳು ಕರ್ನಾಟಕದ ಜಿಲ್ಲಾ ಸಂಚಾಲಕ ಓಂಪ್ರಕಾಶ ರೊಟ್ಟೆ ಮಾತನಾಡಿ, “ಕೇಂದ್ರ ಸರ್ಕಾರ ವಿವಿಧ ದೇಶಗಳೊಂದಿಗೆ ಮಾಡಿಕೊಂಡಿರುವ ಮುಕ್ತ ವ್ಯಾಪಾರ ಒಪ್ಪಂದಗಳು ದೇಶದ ರೈತರು ಮತ್ತು ಉತ್ಪಾದಕರ ಹಿತಾಸಕ್ತಿಗೆ ಧಕ್ಕೆ ತರುವ ಆತಂಕವಿದೆ. ಅಮೆರಿಕವು ಭಾರತೀಯ ಉತ್ಪನ್ನಗಳ ಮೇಲೆ ಶೇ.18ರಷ್ಟು ಸುಂಕ ವಿಧಿಸುತ್ತಿದ್ದರೆ, ಅಮೆರಿಕದಿಂದ ಆಮದಾಗುವ ಉತ್ಪನ್ನಗಳಿಗೆ ಭಾರತ ಶೂನ್ಯ ಸುಂಕ ವಿಧಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಆಕ್ಷೇಪಿಸಿದರು.

ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ಸಂಬಂಧಿಸಿದ ಮಸೂದೆ, ಬೀಜ ಕಾಯ್ದೆಗಳು ಬಹುರಾಷ್ಟ್ರೀಯ ಕಂಪನಿಗಳಿಗೆ ಅನುಕೂಲವಾಗುವಂತಿವೆ. ಇದರಿಂದ ಮುಂದಿನ ದಿನಗಳಲ್ಲಿ ರೈತರು ಮತ್ತು ಜನಸಾಮಾನ್ಯರು ತೊಂದರೆ ಅನುಭವಿಸಬೇಕಾಗುತ್ತದೆ. ಬಹುರಾಷ್ಟ್ರೀಯ ಕಂಪನಿಗಳ ಮಾಲೀಕರ ಸಾಲಗಳನ್ನು ಎನ್‌ಪಿಎ ಹೆಸರಿನಲ್ಲಿ ಮನ್ನಾ ಮಾಡಲಾಗುತ್ತಿರುವಾಗ ರೈತರು ಮತ್ತು ಕೃಷಿ ಕಾರ್ಮಿಕರ ಸಾಲವನ್ನೂ ಸಂಪೂರ್ಣವಾಗಿ ಮನ್ನಾ ಮಾಡಬೇಕು. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಕೇಂದ್ರ ಮಟ್ಟದಲ್ಲಿ ರೈತರ ಕ್ಷೇಮಾಭಿವೃದ್ಧಿ ಪ್ರಾಧಿಕಾರ ರಚಿಸಬೇಕು ಎಂದು ಒತ್ತಾಯಿಸಿದರು.

WhatsApp Image 2026 11 23 at 7.41.16 PM 3

ಕೇಂದ್ರ ಚುನಾವಣಾ ಆಯೋಗವು ಸ್ವತಂತ್ರವಾಗಿ ಕಾರ್ಯನಿರ್ವಹಿಸದೆ ಕೇಂದ್ರ ಸರ್ಕಾರದ ಪರವಾಗಿ ವರ್ತಿಸುತ್ತಿದೆ ಎಂದು ಜಂಟಿ ಸಮಿತಿ ಆರೋಪಿಸಿದೆ. ಬಿಹಾರ, ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುತ್ತಿರುವುದು ಸಂವಿಧಾನ ವಿರೋಧಿ ಕ್ರಮವಾಗಿದೆ. ದೇಶಾದ್ಯಂತ ಹತ್ತು ಕೋಟಿಗೂ ಅಧಿಕ ಮತದಾರರ ಹೆಸರುಗಳನ್ನು ತೆಗೆದುಹಾಕಿರುವ ಆತಂಕವಿದ್ದು, ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣ ರದ್ದುಪಡಿಸಬೇಕು. ಕರ್ನಾಟಕದಲ್ಲಿ ಪ್ರಕಟಿಸಿರುವ ಅಂತಿಮ ಎಸ್‌ಐಆರ್ ಮತದಾರರ ಪಟ್ಟಿಯನ್ನು ರದ್ದುಗೊಳಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಮತದಾರರ ಪಟ್ಟಿಯಲ್ಲಿನ ಅಕ್ರಮಗಳಿಗೆ ಹೊಣೆಗಾರರೆಂದು ಆರೋಪಿಸಿರುವ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮತ್ತು ಸಂಬಂಧಪಟ್ಟವರನ್ನು ಹುದ್ದೆಯಿಂದ ವಜಾಗೊಳಿಸಬೇಕು. ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ ಹಾಗೂ ಹುದ್ದೆಗೆ ಸಂಬಂಧಿಸಿದಂತೆ 2023ರಲ್ಲಿ ಮಾಡಲಾದ ತಿದ್ದುಪಡಿಯನ್ನು ಹಿಂಪಡೆಯಬೇಕು. 2020ರಲ್ಲಿ ಜಾರಿಗೆ ತರಲು ಉದ್ದೇಶಿಸಿದ್ದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸಿದ ಹೋರಾಟದ ಮುಂದುವರಿದ ಭಾಗವಾಗಿ ಸಂವಿಧಾನ ದಿನದಂದು ಈ ಹಕ್ಕೊತ್ತಾಯ ಮತ್ತು ಪ್ರತಿರೋಧ ಅರ್ಜಿ ಸಲ್ಲಿಸಲಾಗಿದೆ ಎಂದು ಜಂಟಿ ಸಮಿತಿ ತಿಳಿಸಿದೆ.

ಇದನ್ನೂ ಓದಿ : ಬೀದರ್ | ವಿಶ್ವದ ಶ್ರೇಷ್ಠ ಸಂವಿಧಾನ ನಮ್ಮ ದೇಶಕ್ಕೆ ಭದ್ರ ಬುನಾದಿ: ಈಶ್ವರ ಖಂಡ್ರೆ

ಪ್ರಮುಖರಾದ ಮುಹಮ್ಮದ್ ನಿಜಾಮೋದ್ದಿನ್, ಸಂತೋಷ ಜೋಳದಾಪಕೆ, ನಜೀರ್ ಅಹ್ಮದ್ ಚೊಂಡಿ, ಪ್ರಭು ಹೊಚಕನಳ್ಳಿ, ಪ್ರಭು ತಗಣಿಕರ್, ಎಂ.ಡಿ. ಖಮರ್ ಪಟೇಲ್, ಎಂ.ಡಿ. ಶಫಾಯತ್ ಅಲಿ, ಶಫಿಯೋದ್ದಿನ್ ಗೋಲ್ಡ್, ಮಾಣಿಕ ಖಾನಾಪುರ ಸೇರಿದಂತೆ ಜಂಟಿ ಸಮಿತಿಯ ಮುಖಂಡರು ಉಪಸ್ಥಿತರಿದ್ದರು.

WhatsApp Image 2026 11 13 at 8.18.17 PM 16
eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬಿಸ್ಲೆರಿ’ ವಿರುದ್ಧದ ಕ್ರಮಕ್ಕೂ ನೀರು ಮಾರುಕಟ್ಟಗೆ ‘ಅಂಬಾನಿ’ ಪ್ರವೇಶಕ್ಕೂ ಇದೆಯೇ ನಂಟು?

ಭಾರತದ ಪ್ಯಾಕೇಜ್ಡ್ ಕುಡಿಯುವ ನೀರಿನ ಮಾರುಕಟ್ಟೆಯಲ್ಲಿ ಸುಮಾರು 35ರಿಂದ 36%ರಷ್ಟು ಮಾರುಕಟ್ಟೆ...

ಶಿವಮೊಗ್ಗ | ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹ : ರೈತರಿಂದ ಸಚಿವರ ಕಚೇರಿಗೆ ಮುತ್ತಿಗೆ

ಶಿವಮೊಗ್ಗ, ಭದ್ರಾ ಎಡ ಮತ್ತು ಬಲದಂಡೆ ನಾಲೆಗಳಿಗೆ ತಕ್ಷಣವೇ ನೀರು ಹರಿಸುವಂತೆ...

ನಮ್ಮ ಮತ-ನಮ್ಮ ಬದುಕು: ಮತದಾನದ ಹಕ್ಕು ಕಸಿಯುವ ಪ್ರಯತ್ನದ ವಿರುದ್ಧ ಸಿಎಂ ಎಚ್ಚರಿಕೆ

ಸದ್ಯ ಮತದಾರರ ಪಟ್ಟಿಯಿಂದ ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ದಲಿತರ ಮತಗಳನ್ನು ತೆಗೆದುಹಾಕುವ...