ಬೀದರ್‌ | ಸಾಮಾಜಿಕ ಭದ್ರತಾ ಪಿಂಚಣಿ ಶೀಘ್ರ ಬಿಡುಗಡೆಗೆ ಆಗ್ರಹ

Date:

ಕಳೆದ ನಾಲ್ಕೈದು ತಿಂಗಳುಗಳಿಂದ ತಡೆಹಿಡಿದಿರುವ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳಾದ ವಿಧವಾ, ವೃದ್ಧಾಪ್ಯ ಹಾಗೂ ಅಂಗವಿಕಲ ಪಿಂಚಣಿಯನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಇಂಡಿಯನ್ ನ್ಯಾಷನಲ್ ಭೀಮ ಆರ್ಮಿ ಆಗ್ರಹಿಸಿದೆ.

- Advertisement -

ಈ ಸಂಬಂಧ ಸಂಘಟನೆಯ ಪದಾಧಿಕಾರಿಗಳು ಸೋಮವಾರ ಬೀದರ ತಾಲೂಕು ದಂಡಾಧಿಕಾರಿಗಳ ಮುಖಾಂತರ ಸಿಎಂ ಡಿ.ಕೆ.ಶಿವಕುಮಾರ ಹಾಗೂ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಸಾಮಾಜಿಕ ಭದ್ರತಾ ಯೋಜನೆಗಳ ಫಲಾನುಭವಿಗಳು ಆದಾಯದ ಗೊಂದಲಗಳಿಂದ ಫಲಾನುಭವಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರವು ವಿವಿಧ ಹಂತಗಳಲ್ಲಿ ಆದಾಯ ಮಿತಿಯನ್ನು ಪರಿಷ್ಕರಿಸಿದ್ದರೂ, ಪ್ರಸ್ತುತ ಆನ್‌ಲೈನ್ ವ್ಯವಸ್ಥೆಯಲ್ಲಿ ಕುಟುಂಬದ ಆದಾಯ ₹32 ಸಾವಿರಕ್ಕಿಂತ ಕಡಿಮೆ ಇದ್ದರೆ ಮಾತ್ರ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ. ಆದರೆ ತಹಸೀಲ್ದಾರರಿಂದ ನೀಡಲಾಗುತ್ತಿರುವ ಆದಾಯ ಪ್ರಮಾಣ ಪತ್ರಗಳಲ್ಲಿ ಆದಾ ₹1.25 ಲಕ್ಷದವರೆಗೆ ನಮೂದಿಸಲಾಗುತ್ತಿರುವುದರಿಂದ ಅನೇಕ ಫಲಾನುಭವಿಗಳ ಪಿಂಚಣಿ ರದ್ದಾಗುತ್ತಿದೆ” ಎಂದು ಸಂಘಟನೆ ಆರೋಪಿಸಿದೆ.

“ಇಂಡಿಯನ್ ನ್ಯಾಷನಲ್ ಭೀಮ ಆರ್ಮಿ ಸಂಸ್ಥಾಪಕ ರಾಜ್ಯಾಧ್ಯಕ್ಷ ದಿಲೀಪಕುಮಾರ ವರ್ಮಾ ಮಾತನಾಡಿ, “ಜಿಲ್ಲೆಯಲ್ಲಿ ಕಳೆದ ನಾಲ್ಕೈದು ತಿಂಗಳುಗಳಿಂದ ಯಾವುದೇ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಬಿಡುಗಡೆಯಾಗದೇ ಇರುವುದರಿಂದ ವೃದ್ಧರು, ವಿಧವೆಯರು ಹಾಗೂ ಅಂಗವಿಕಲರು ಜೀವನ ನಿರ್ವಹಣೆಯಲ್ಲಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಪಿಂಚಣಿ ಹಣ ಜಮೆ ಆಗದಿರುವುದರಿಂದ ಕೆಲಸ, ಕಾರ್ಯಗಳನ್ನು ಬಿಟ್ಟು ವಿವಿಧ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದರು.

ಸರ್ಕಾರ ತಕ್ಷಣ ಬಾಕಿ ಇರುವ ಪಿಂಚಣಿ ಹಣವನ್ನು ಬಿಡುಗಡೆ ಮಾಡಿ, ಫಲಾನುಭವಿಗಳ ಖಾತೆಗಳಿಗೆ ನಿಯಮಿತವಾಗಿ ಜಮೆಯಾಗುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕು. ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿಗಳ ಆಧಾರದ ಮೇಲೆ ಆದಾಯ ಮಿತಿ ನಿಗದಿಪಡಿಸಿ, ಆದಾಯದ ಗೊಂದಲಗಳಿಂದ ರದ್ದಾಗುತ್ತಿರುವ ಪಿಂಚಣಿಗಳನ್ನು ಮರುಸ್ಥಾಪಿಸಬೇಕು” ಎಂದು ಆಗ್ರಹಿಸಿದ್ದಾರೆ.

ಒಂದು ವೇಳೆ ಪಿಂಚಣಿ ಬಿಡುಗಡೆ ಹಾಗೂ ರದ್ದಾದ ಪಿಂಚಣಿಗಳ ಮರುಪರಿಶೀಲನೆ ವಿಚಾರದಲ್ಲಿ ನಿರ್ಲಕ್ಷ್ಯ ಮುಂದುವರಿದರೆ, ಇಂಡಿಯನ್ ನ್ಯಾಷನಲ್ ಭೀಮ ಆರ್ಮಿಯ ಬೀದರ್ ಜಿಲ್ಲಾ ಘಟಕದಿಂದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ : ಬೀದರ್‌ | ಮಳೆ ಕೊರತೆ : ಬರಪೀಡಿತ ಘೋಷಣೆ ಪ್ರದೇಶ ಘೋಷಣೆಗೆ ಆಗ್ರಹ

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಅಶೋಕ ಭಾವಿದೊಡ್ಡಿ, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜಶೇಖರ ಶೇರಿಕಾರ, ತಾಲೂಕು ಅಧ್ಯಕ್ಷ ಮಹೇಂದ್ರ ಕಾಂಬಳೆ, ಬೀದರ್ ದಕ್ಷಿಣ ತಾಲೂಕು ಉಪಾಧ್ಯಕ್ಷ ಶ್ರೀಕಾಂತ ಸಾಗರ, ಪ್ರಧಾನ ಕಾರ್ಯದರ್ಶಿ ಪೀಟರ್ ಲಾಯನ್, ಬೀದರ್ ದಕ್ಷಿಣ ತಾಲೂಕಾಧ್ಯಕ್ಷ ಅನೀಲಕುಮಾರ ಬಾಜಿ ಹಾಗೂ ಭಾಲ್ಕಿ ತಾಲೂಕು ಉಪಾಧ್ಯಕ್ಷ ಪ್ರಭು ಎಸ್. ಭಾವಿಕಟ್ಟೆ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...