ಬೀದರ್‌ | ಅಂಗನವಾಡಿ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯ

Date:

ರಾಜ್ಯದಲ್ಲಿನ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶನಿವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಔರಾದ್‌ ಶಾಸಕ ಪ್ರಭು ಚವ್ಹಾಣ ಅವರ ನಿವಾಸಕ್ಕೆ ತೆರಳಿ ಮನವಿ ಪತ್ರ ಸಲ್ಲಿಸಲಾಯಿತು.

- Advertisement -

ಸಂಘಟನೆಯ ಪ್ರಮುಖರು ಮಾತನಾಡಿ, ʼಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್) ಆರಂಭವಾಗಿ 50 ವರ್ಷಗಳು ಪೂರ್ಣಗೊಂಡಿದ್ದು, ಮಕ್ಕಳ ಪಾಲನೆ-ಪೋಷಣೆ ಹಾಗೂ ಪೂರ್ವ ಶಿಕ್ಷಣದಂತಹ ಸಂವಿಧಾನಬದ್ಧ ಕರ್ತವ್ಯಗಳನ್ನು ಅಂಗನವಾಡಿ ಕೇಂದ್ರಗಳ ಮೂಲಕ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ನಿರ್ವಹಿಸುತ್ತಿದ್ದಾರೆ. ಸುಪ್ರೀಂ ಕೋರ್ಟ್ ಹಾಗೂ ಗುಜರಾತ್ ಹೈಕೋರ್ಟ್ ಆದೇಶದಂತೆ ಅಂಗನವಾಡಿ ನೌಕರರನ್ನು 3 ಮತ್ತು 4ನೇ ಗ್ರೇಡ್ ಸರ್ಕಾರಿ ನೌಕರರಂತೆ ಪರಿಗಣಿಸಿ ನಿಯಮ ರೂಪಿಸಬೇಕುʼ ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ʼರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಬಲಪಡಿಸುವ ಬದಲು 4 ವರ್ಷ ಮೇಲ್ಪಟ್ಟ ಮಕ್ಕಳನ್ನು ಶಾಲೆಗಳ‌ ಎಲ್‌ಕೆಜಿ-ಯುಕೆಜಿ ತರಗತಿಗಳಿಗೆ ಸ್ಥಳಾಂತರಿಸುವ ಪ್ರಯತ್ನಗಳಿಂದ ಯೋಜನೆ ದುರ್ಬಲವಾಗುತ್ತಿದೆ. ಅಂಗನವಾಡಿ ಕೇಂದ್ರಗಳನ್ನು ಪೂರ್ವ ಪ್ರಾಥಮಿಕ ಶಿಕ್ಷಣ ಕೇಂದ್ರಗಳಾಗಿ ಅಭಿವೃದ್ಧಿಪಡಿಸುವ ನಿರ್ಧಾರ ಕೈಗೊಂಡಿದ್ದರೂ ಅಗತ್ಯ ಹಣಕಾಸು ಬಿಡುಗಡೆ ಆಗಿಲ್ಲʼ ಎಂದು ತಿಳಿಸಿದರು.

‘ಅಂಗನವಾಡಿ ನೌಕರರು ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದರೂ ಚುನಾವಣಾ ಸಂದರ್ಭದಲ್ಲಿ ನೀಡಿದ ವೇತನ ಹೆಚ್ಚಳ ಭರವಸೆ ಈಡೇರಿಸಲಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

WhatsApp Image 2026 03 14 at 3.13.07 PM

ಬೇಡಿಕೆಗಳೇನು?

ಆರು ವರ್ಷದೊಳಗಿನ ಮಕ್ಕಳು ಐಸಿಡಿಎಸ್‌ ಅಡಿಯಲ್ಲಿರುವುದನ್ನು ಖಾತ್ರಿ ಪಡಿಸುವುದು. ಎಲ್ಲ ಅಂಗನವಾಡಿ ನೌಕರರನ್ನು ಕನಿಷ್ಠ ಕೂಲಿ ಕಾಯ್ದೆಯ ವ್ಯಾಪ್ತಿಗೆ ತಂದು ಇಎಸ್‌ಐ, ಪಿಎಫ್‌ ಕೊಡಬೇಕು. ಅಂಗನವಾಡಿ ಕೇಂದ್ರಕ್ಕೆ ಸರಬರಾಜು ಮಾಡುವ ಆಹಾರ ಪದಾರ್ಥಗಳು ಗುಣಮಟ್ಟ ಸರಿ ಇಲ್ಲದ ಕಾರಣ ಬಿಎಸ್ ಪರವಾನಿಗೆ ರದ್ದುಗೊಳಿಸಿ ಸ್ಥಳೀಯವಾಗಿ ಸಿಗುವ ಆಯಾ ಪ್ರದೇಶಕ್ಕೆ ಅನುಗುಣವಾಗಿ ಸ್ಥಳೀಯ ಆಹಾರ ಸರಬರಾಜು ಮಾಡಬೇಕು. ಶಿಶು ಅಭಿವೃದ್ಧಿ ಯೋಜನೆಗಾಗಿ ದುಡಿದು ಬರಿಗೈಯಲ್ಲಿ 2011 ರಿಂದ 2023 ಮಾರ್ಚ್ ತನಕ ನಿವೃತ್ತರಾದ ಕಾರ್ಯಕರ್ತೆ-ಸಹಾಯಕಿಯರಿಗೂ 183 ಕೋಟಿ ಗ್ರಾಚ್ಯುಟಿ ಹಣ ಕೂಡಲೇ ಬಿಡುಗಡೆ ಮಾಡಬೇಕುʼ ಎಂದು ಆಗ್ರಹಿಸಿದರು.

ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ-ಸಹಾಯಕಿ, ಮೇಲ್ವಿಚಾರಕಿ ಹಾಗೂ ಸಿಡಿಪಿಒ ಹುದ್ದೆಗಳನ್ನು ಭರ್ತಿ ಮಾಡುವುದು, ಬಿಎಲ್‌ಒ ಚುನಾವಣಾ ಕರ್ತವ್ಯಗಳಿಂದ ಅಂಗನವಾಡಿ ನೌಕರರನ್ನು ಬಿಡುಗಡೆ ಮಾಡುವುದು, ಸಾಮೂಹಿಕ ಆರೋಗ್ಯ ವಿಮೆ ಜಾರಿ, ಕನಿಷ್ಠ ವೇತನ ನೀಡುವುದು, ನಿವೃತ್ತರಿಗೆ ಮಾಸಿಕ 10 ಸಾವಿರ ಪಿಂಚಣಿ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕಾರ್ಯಕರ್ತೆಯರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ರಾಜ್ಯದ 1 ಲಕ್ಷಕ್ಕೂ ಅಧಿಕ ಮೃತ ಫಲಾನುಭವಿಗಳ ಖಾತೆಗೆ ʼಗೃಹಲಕ್ಷ್ಮಿʼ ಹಣ ಜಮೆ

ಈ ಸಂದರ್ಭದಲ್ಲಿ ಸಿಐಟಿಯು ತಾಲೂಕಾಧ್ಯಕ್ಷೆ ಪದ್ಮಾವತಿ ಸ್ವಾಮಿ, ಕಾರ್ಯದರ್ಶಿ ನರಸಮ್ಮ, ಖಜಾಂಚಿ ಸುದೇಶನಾ ಸೇರಿದಂತೆ ಔರಾದ್-ಕಮಲನಗರ ತಾಲೂಕಿನ ಸಂಘಟನೆಯ ಪ್ರಮುಖರಾದ ಉಮಾದೇವಿ, ಸತ್ಯವತಿ, ಸುಧಾರಾಣಿ, ಸುವರ್ಣ, ವಿಮಲ, ಲಕ್ಷ್ಮಿ, ರಂಜನಾ ರೂಪಾ, ಕಾವೇರಿ, ಸವಿತಾ, ಸುನಂದಾ, ಸುಲೋಚನಾ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಲ್ಯಾಣ ಕರ್ನಾಟಕದ ಪ್ರಗತಿಗೆ ಗುಣಮಟ್ಟದ ಶಿಕ್ಷಣ ಅಗತ್ಯ : ಮೀನಾಕ್ಷಿ ಬಿರಾದರ್

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕ , ಔದ್ಯೋಗಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ...

ಬೀದರ್‌ | ಹಾಲಿಗಿಂತ ನೀರು ದುಬಾರಿಯಾಗುವ ಕಾಲ ದೂರವಿಲ್ಲ: ಮಾರುತಿ ಬೌದ್ಧೆ

ನಿಸರ್ಗದತ್ತವಾಗಿ ಉಚಿತವಾಗಿ ದೊರೆಯಬೇಕಾದ ನೀರು ಮುಂದೊಂದು ದಿನ ಹಾಲಿನ ದರಕ್ಕಿಂತಲೂ ದುಬಾರಿಯಾಗಿ...

ಬೀದರ್ ಕಾರುಣ್ಯ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಬೀದರ್ ಕಾರುಣ್ಯ ಸೌಹಾರ್ದ ಸಹಕಾರಿ ಸಂಘದಿಂದ 2025-26ನೇ ಸಾಲಿನಲ್ಲಿ 1,970 ಮಂದಿಗೆ...

ಬಸವಕಲ್ಯಾಣ | ಅಲ್ಲಮ ಜಗತ್ತಿನ ಶ್ರೇಷ್ಠ ಅನುಭಾವಿ

ಅಲ್ಲಮಪ್ರಭು ಅವರು ಜಗತ್ತಿನ ಶ್ರೇಷ್ಠ ಅನುಭಾವಿಗಳಾಗಿದ್ದು, ಅವರ ಚಿಂತನೆ ಹಾಗೂ ವಚನಗಳ...