ಬೀದರ್‌ | ಮರ್ಯಾದೆ ಹತ್ಯೆ ತಡೆ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ

Date:

ಕರ್ನಾಟಕ ರಾಜ್ಯದಲ್ಲಿ ಮರ್ಯಾದೆ ಹತ್ಯೆ ತಡೆ ಕಾಯ್ದೆ ಕೂಡಲೇ ಜಾರಿಗೆ ತರುವಂತೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಬುಧವಾರ ಪ್ರತಿಭಟನೆ ನಡೆಯಿತು.

- Advertisement -

ಬೀದರ್‌ ನಗರದ ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದಲ್ಲಿ ಜಮಾಯಿಸಿದ ಒಕ್ಕೂಟದ ಪದಾಧಿಕಾರಿಗಳು ಮೊದಲಿಗೆ ಹೋರಾಟ ಗೀತೆಗಳು ಹಾಡಿದರು. ಬಳಿಕ ʼಜಾತಿವಾದಿಗಳಿಗೆ ಧಿಕ್ಕಾರʼ, ʼಮರ್ಯಾದೆ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ಆಗಲೇಬೇಕುʼ ಎಂಬ ಘೋಷಣೆ ಕೂಗುತ್ತಾ ಭಗತ್‌ ಸಿಂಗ್‌ ವೃತ್ತದ ಮಾರ್ಗವಾಗಿ ತಹಸೀಲ್‌ ಕಚೇರಿಗೆ ತೆರಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಪ್ರತಿಭಟನೆ ನೇತ್ರತ್ವ ವಹಿಸಿದ ಹಿರಿಯ ಹೋರಾಟಗಾರ ಬಾಬುರಾವ ಹೊನ್ನಾ ಮಾತನಾಡಿ, ʼಹುಬ್ಬಳ್ಳಿಯಲ್ಲಿ ಈಚೆಗೆ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣದಿಂದ ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವಂತಾಗಿದೆ. ದಲಿತ ಸಮುದಾಯದ ಹುಡುಗನನ್ನು ಮದುವೆಯಾಗಿದ್ದಾಳೆ ಎಂಬ ಕಾರಣಕ್ಕೆ ಲಿಂಗಾಯತ ಸಮುದಾಯಕ್ಕೆ ಸೇರಿದ ಯುವತಿಯ ತಂದೆ ಮಗಳನ್ನು ಕೊಲೆ ಮಾಡಿರುವುದು ಅತ್ಯಂತ ಅಮಾನವೀಯ ಕೃತ್ಯ. ಸಮಸಮಾಜ ರೂಪಿಸಲು ಹೋರಾಡಿದ ಅನೇಕ ಮಾಹಾತ್ಮರ ನೆಲದಲ್ಲಿ ಇಂಥ ಪ್ರಕರಣ ನಡೆದಿರುವುದು ಆತಂಕಕಾರಿಯಾಗಿದೆʼ ಎಂದು ಕಳವಳ ವ್ಯಕ್ತಪಡಿಸಿದರು.

ಮಹಿಳಾ ಒಕ್ಕೂಟದ ಜಿಲ್ಲಾಧ್ಯಕ್ಷೆ ಶೀಲಾ ಸಾಗರ ಮಾತನಾಡಿ, ʼದೇಶದಲ್ಲಿ ಇತ್ತೀಚೆಗೆ ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಹುಬ್ಬಳ್ಳಿಯಲ್ಲಿ ಅನ್ಯ ಜಾತಿಯ ಯುವಕನನ್ನು ಮದುವೆ ಆಗಿರುವ ಕಾರಣಕ್ಕೆ ಹೆತ್ತ ಮಗಳನ್ನೇ ತಂದೆ ಕೊಲೆಗೈದ ಘಟನೆ ನಿಜಕ್ಕೂ ಘನಘೋರ. ಇಂತಹ ಘಟನೆ ಮರುಕಳಿಸದಂತೆ ರಾಜ್ಯದಲ್ಲಿ ಕಠಿಣ ಕಾನೂನು ರೂಪಿಸಬೇಕು. ಮಗಳು ʼಮಾನ್ಯʼಳನ್ನು ಕೊಂದಿರುವ ಆರೋಪಿ ತಂದೆಗೆ ಉಗ್ರಶಿಕ್ಷೆಗೆ ಗುರಿಪಡಿಸಬೇಕು. ಇಲ್ಲದಿದ್ದರೆ ರಾಜ್ಯ, ದೇಶದಲ್ಲಿ ಪ್ರತಿಭಟನೆ ತೀವ್ರಗೊಳ್ಳುತ್ತದೆʼ ಎಂದು ಎಚ್ಚರಿಸಿದರು.

WhatsApp Image 2025 12 31 at 4.35.40 PM

ಸಾಮಾಜಿಕ ಕಾರ್ಯಕರ್ತರಾದ ಜಗದೀಶ್ವರ ಬಿರಾದರ್‌, ಓಂಪ್ರಕಾಶ ರೊಟ್ಟೆ, ರಾಜಕುಮಾರ ಮೂಲಭಾರತಿ, ನಿಜಾಮೋದ್ದಿನ್‌, ಮಹೇಶ ಗೊರನಾಳಕರ್‌, ಸಂದೀಪ ಕಾಂಟೆ ಮಾತನಾಡಿ, ʼಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಆರು ತಿಂಗಳ ಗರ್ಭಿಣಿ ಮಗಳನ್ನು ತಂದೆಯೊಬ್ಬ ಮೃಗೀಯವಾಗಿ ಕೊಂದಿರುವುದು ತೀವ್ರ ಖಂಡನೀಯ. ಇಂತಹ ಹೇಯ ಕೃತ್ಯವನ್ನು ಜಾತಿವಾದಿ ಸಮಾಜ ಸಮರ್ಥಿಸುತ್ತಿದೆ. ಜಾತಿ ದೌರ್ಜನ್ಯ, ಮರ್ಯಾದೆಗೇಡು ಹತ್ಯೆ ಹಾಗೂ ಜಾತೀಯತೆಯನ್ನು ತೊಡೆದು ಹಾಕಲು ಎಲ್ಲ ಸರ್ಕಾರಗಳು ಬದ್ಧತೆಯಿಂದ ಕೆಲಸ ಮಾಡಬೇಕು. ಇಂತಹ ಪ್ರಕರಣ ಮುಂದೆ ರಾಜ್ಯದಲ್ಲಿ ಮತ್ತೆ ಪುನರಾವರ್ತನೆ ಆಗದಂತೆ ಮರ್ಯಾದೆ ಹತ್ಯೆ ತಡೆ ಕಾಯ್ದೆ ಜಾರಿಗೆ ತರಬೇಕುʼ ಎಂದು ಆಗ್ರಹಿಸಿದರು.

ಭಾರತೀಯ ಸಂವಿಧಾನದಲ್ಲಿಯೇ ʼಸಂಗಾತಿಯ ಆಯ್ಕೆʼ ಹಕ್ಕು ಇದೆ. ʼಬಾಳ ಸಂಗಾತಿಯ ಆಯ್ಕೆʼ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಮೂರನೇ ವ್ಯಕ್ತಿಗೆ ಯಾವ ಅಧಿಕಾರವೂ ಇಲ್ಲ. ವಿವಾಹದ ಹಕ್ಕುಗಳಿಗೆ ಚ್ಯುತಿ ಉಂಟು ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಾಗಿದೆ. ಜಾತಿ ಪ್ರತಿಷ್ಠೆಗಾಗಿ ಇಂತಹ ಘಟನೆಗಳನ್ನು ಮರುಕಳಿಸುತ್ತಿವೆ. ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ರಾಜ್ಯ ಸರ್ಕಾರ ತಕ್ಷಣ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ಮರ್ಯಾದೆ ಕೊಲೆ ಪ್ರಕರಣವನ್ನು ವಿಶೇಷವಾಗಿ ಪರಿಗಣಿಸಿ, ಅಪರಾಧಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕುʼ ಎಂದು ಒತ್ತಾಯಿಸಿದರು.

ʼಅಂತರಜಾತಿ–ಅಂತರ ಧರ್ಮ ವಿವಾಹವಾದ ದಂಪತಿಗಳಿಗೆ ಪೊಲೀಸ್ ರಕ್ಷಣೆ ಜೊತೆಗೆ ₹10 ಲಕ್ಷ ಪ್ರೋತ್ಸಾಹ ಧನ, ವಾಸಿಸಲು ಮನೆ, ಅರ್ಹತೆ ಆಧಾರದ ಮೇಲೆ ಸರ್ಕಾರಿ ಹುದ್ದೆ ಕೊಡಬೇಕು. ಧಾರ್ಮಿಕ, ಮೂಢ ನಂಬಿಕೆಯ ಹೆಸರಿನಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಪ್ರಾಣಿ ಹಿಂಸೆ ತಡೆಯಬೇಕು. ಅಂತಹ ಪ್ರಕರಣ ನಡೆದರೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಬೇಕುʼ ಎಂದು ಪ್ರತಿಭಟನಾಕಾರರು ಬೇಡಿಕೆಯಿಟ್ಟರು.

ರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಮನವಿಯನ್ನು ಗ್ರೇಡ್-‌2 ತಹಸೀಲ್ದಾರ್‌ ಅವರಿಗೆ ಸಲ್ಲಿಸಿದರು.

ಇದನ್ನೂ ಓದಿ : ಬೀದರ್‌ | ಸಾವಿನಲ್ಲಿ ಒಂದಾದ ದಂಪತಿ

ಪ್ರತಿಭಟನೆಯಲ್ಲಿ ಪ್ರಮುಖರಾದ ನಜೀರ್ ಅಹ್ಮದ್, ಎಂ.ಡಿ. ಖಮರ್ ಪಟೇಲ್, ಎಂ.ಡಿ. ಶಫಾಯತ ಅಲಿ,‌ ನಬೀ ಖುರೇಷಿ, ಜೈಶೀಲಕುಮಾರ, ಅರುಣ ಪಟೇಲ್‌, ರಾಜಕುಮಾರ ಸಿಂಧೆ, ಪ್ರಕಾಶ ರಾವಣ, ಮುಬಶೀರ್‌ ಸಿಂಧೆ, ವೀರಶೆಟ್ಟಿ ವಟಂಬೆ, ಚಂದ್ರಕಾಂತ ನಿರಾಟೆ, ಜಗನ್ನಾಥ ಹೊನ್ನಾ, ಮಾರುತಿ ಸೂರ್ಯವಂಶಿ, ಅಂಬೇಡ್ಕರ್ ಪಿ.ಬೌದ್ಧೆ, ಪ್ರಭು ತಗಣಿಕರ್, ಖದೀರಮಿಯ್ಯಾ, ರಾಜಕುಮಾರ ಗೂನಳ್ಳಿ, ಪ್ರಭು ಹೊಚಕನಳ್ಳಿ, ಮಲ್ಲಿಕಾರ್ಜುನ ಚಿಟ್ಟಾ, ರವಿರಾಜ ವಾಘಮಾರೆ, ವಸೀಮ್ ಕಿರಮಣಿ, ಸೂರ್ಯಕಾಂತ ಬರದಾಪುರ, ರಾಹುಲ್‌ ಡಾಂಗೆ, ಶಿವಾನಂದ ದದ್ದಾಪುರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಲಸೂರ | ಗಡಿಭಾಗದ ಸರ್ಕಾರಿ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಕಸಾಪ ಮನವಿ

ಮಹಾರಾಷ್ಟ್ರದ ಗಡಿಯೊಂದಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಉರ್ದು ಹಾಗೂ...

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...

ಔರಾದ್ | ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾಗಿ ರವಿ ಡೋಳೆ ಆಯ್ಕೆ

ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ‌ (6ರಿಂದ 8ನೇ) ಸಂಘದ ಔರಾದ್...

ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಬೀದರ್ ತಾಲೂಕು ಅಧ್ಯಕ್ಷರಾಗಿ ವೀರೇಂದ್ರಕುಮಾರ್

ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ (6ರಿಂದ 8ನೇ ತರಗತಿ) ಶಿಕ್ಷಕರ ಸಂಘದ...