ಬೀದರ್‌ | ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹ: ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ ಬಿಜೆಪಿ

Date:

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ಅಕ್ರಮ ವರ್ಗಾವಣೆ ಹಾಗೂ ಅವ್ಯವಹಾರ ಪ್ರಕರಣವನ್ನು ಖಂಡಿಸಿ, ಪ್ರಕರಣದ ನೈತಿಕ ಹೊಣೆ ಹೊತ್ತು ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಭಾರತೀಯ ಜನತಾ ಪಕ್ಷ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದೆ.

- Advertisement -

ಬಿಜೆಪಿ ಬೀದರ್ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ನಗರದ ಅಂಬೇಡ್ಕರ್ ವೃತ್ತದ ಸಮೀಪದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, ಬಿಜೆಪಿ ಮುಖಂಡರು, ಕಾರ್ಯಕರ್ತರು ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಮಾತನಾಡಿ, “ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮವು ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಇರುವ ಪ್ರಮುಖ ಸಂಸ್ಥೆಯಾಗಿದ್ದು, ನಿಗಮದ ಕೋಟ್ಯಂತರ ರೂಪಾಯಿ ಹಣವನ್ನು ಅಕ್ರಮವಾಗಿ ವಿವಿಧ ಖಾತೆಗಳಿಗೆ ವರ್ಗಾವಣೆ ಮಾಡಿರುವ ಸಚಿವ ಬಿ.ನಾಗೇಂದ್ರ ಅವರ ಮೇಲಿನ ಆರೋಪ ಅತ್ಯಂತ ಗಂಭೀರವಾಗಿದೆ. ಈ ಪ್ರಕರಣದಿಂದ ಹಿಂದುಳಿದ ವರ್ಗಗಳಿಗೆ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡಿದೆ ಎಂಬುದು ಸ್ಪಷ್ಟವಾಗುತ್ತದೆ” ಎಂದು ಆರೋಪಿಸಿದರು.

“ಪ್ರಕರಣ ರಾಜ್ಯಾದ್ಯಂತ ಚರ್ಚೆಯಾಗುತ್ತಿದ್ದರೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ಪ್ರಕರಣದ ನೈತಿಕ ಹೊಣೆ ಹೊತ್ತು ಬಿ.ನಾಗೇಂದ್ರ ರಾಜೀನಾಮೆ ನೀಡಬೇಕು. ಪ್ರಕರಣದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರ ವಿರುದ್ಧವೂ ಕಠಿಣ ಕಾನೂನು ಕ್ರಮ ಕೈಗೊಂಡು, ಸಾರ್ವಜನಿಕರ ಹಣವನ್ನು ಸಂಪೂರ್ಣವಾಗಿ ವಾಪಸ್ ಪಡೆಯಬೇಕು” ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಪೊಲೀಸ್ ಇಲಾಖೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸುಧಾರಣೆಯ ಅಗತ್ಯವಿದೆ. ಆದರೆ ಕಾಂಗ್ರೆಸ್ ಸರ್ಕಾರ ಜನರ ಮೂಲಭೂತ ಸಮಸ್ಯೆಗಳನ್ನು ಬದಿಗೊತ್ತಿ ಸಂಘ-ಸಂಸ್ಥೆಗಳ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದೆ ಎಂದು ಟೀಕಿಸಿದ ಅವರು, ರಾಜ್ಯದ ಪ್ರತಿಯೊಂದು ಜಿಲ್ಲಾ ಕೇಂದ್ರದಲ್ಲಿಯೂ ಬಿ.ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆಯ ಮುಖಾಂತರ ಜನಜಾಗೃತಿ ಮೂಡಿಸಲಾಗುವುದು. ಅಗತ್ಯವಿದ್ದರೆ ಬೆಂಗಳೂರಿನಲ್ಲಿಯೂ ಬೃಹತ್ ಹೋರಾಟ ನಡೆಸಲಾಗುವುದು” ಎಂದು ಹೇಳಿದರು.

“ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣದಲ್ಲಿ ಹೊಣೆಗಾರಿಕೆ ಹೊಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಿ, ಬಿ.ನಾಗೇಂದ್ರ ಅವರ ರಾಜೀನಾಮೆ ಪಡೆಯುವವರೆಗೆ ಬಿಜೆಪಿ ಹೋರಾಟ ಮುಂದುವರಿಯಲಿದೆ. ಮುಂದಿನ ದಿನಗಳಲ್ಲಿ ಪ್ರತಿಭಟನೆಯ ಸ್ವರೂಪವನ್ನು ಮತ್ತಷ್ಟು ವಿಸ್ತರಿಸಿ ರಾಜ್ಯಾದ್ಯಂತ ದೊಡ್ಡ ಮಟ್ಟದ ಹೋರಾಟ ನಡೆಸಲಾಗುವುದು” ಎಂದು ಖೂಬಾ ಸ್ಪಷ್ಟಪಡಿಸಿದರು.

WhatsApp Image 2026 08 14 at 11.58.13 AM 3
ಜಾಹೀರಾತು

ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ಮಾತನಾಡಿ, “ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಪಡೆಯುವವರೆಗೆ ಬಿಜೆಪಿ ಹೋರಾಟ ನಿಲ್ಲುವುದಿಲ್ಲ. ವಿಧಾನಸಭೆಯ ಒಳಗಡೆ ಹಾಗೂ ಹೊರಗಡೆಯೂ ಹೋರಾಟ ಮುಂದುವರಿಯಲಿದೆ” ಎಂದು ಹೇಳಿದರು.

ಇದನ್ನೂ ಓದಿ : ಬೀದರ್‌ | ಬಸವ ಪಂಚಮಿ : ಮೌಢ್ಯತೆ ಆಚರಣೆಯಿಂದ ಹೊರ ಬನ್ನಿ : ಪಟ್ಟದ್ದೇವರು

ಧರಣಿಯಲ್ಲಿ ಮಾಜಿ ಎಂಎಲ್ಸಿ ರಘುನಾಥರಾವ ಮಲ್ಕಾಪುರೆ ಸೇರಿದಂತೆ ಪಕ್ಷದ ಮುಖಂಡರಾದ ಪೀರಪ್ಪಾ ಯರನಳ್ಳಿ, ವಿಜಯಕುಮಾರ ಪಾಟೀಲ್ ಗಾದಗಿ, ಶಶಿಧರ ಹೊಸಳ್ಳಿ, ಬಾಬುವಾಲಿ, ಶ್ರೀನಿವಾಸ ಚೌದ್ರಿ, ಈಶ್ವರಸಿಂಗ್ ಠಾಕೂರ, ಗುರುನಾಥ ಜಾಂತಿಕರ್, ರಾಜಕುಮಾರ ನೇಮತಾಬಾದ, ದೀಪಕ ಗಾದಗೆ, ರಾಜಶೇಖರ ನಾಗಮೂರ್ತಿ, ರಾಜು ಚಿದ್ರಿ, ಅಶೋಕ ಹೊಕ್ರಾಣೆ, ಮಹೇಶ ಪಾಲಂ, ಮಹೇಶ್ವರ ಸ್ವಾಮಿ, ರಾಜು ಪೂಜಾರಿ, ಜಗನ್ನಾಥ ಜಮಾದಾರ, ನರೇಶ ಗೌಳಿ,‌ ವಿಜಯಲಕ್ಷ್ಮಿ ಕೌಟಗೆ, ಅನೀಲ ಪಸರಗಿ, ಉಲ್ಲಾಸಿನಿ ಮುದಾಳೆ, ಲುಂಬಣಿ ಗೌತಮ ಸೇರಿದಂತೆ ಬಿಜೆಪಿ ಜಿಲ್ಲಾ ಹಾಗೂ ಮಂಡಲ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...