ಬೀದರ್‌ | ಅಲಿಯಂಬರ್‌ ಗ್ರಾಮದ ಮುಖ್ಯರಸ್ತೆ ಪೂರ್ಣಗೊಳಿಸಲು ಆಗ್ರಹ

Date:

ಬೀದರ್ ತಾಲ್ಲೂಕಿನ ಅಲಿಯಂಬರ್‌ ಗ್ರಾಮದ ಮುಖ್ಯರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು ಹಾಗೂ ಗ್ರಾಮದ ಭವಾನಿ ಮಂದಿರ ಹತ್ತಿರದ ಮುಖ್ಯರಸ್ತೆಯಲ್ಲಿ ಹೊಸ ಸೇತುವೆ ನಿರ್ಮಿಸಬೇಕು ಎಂದು ಕರ್ನಾಟಕ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿಗ್ರಹ ಸಮಿತಿ ಒತ್ತಾಯಿಸಿದೆ.

- Advertisement -

ಸಮಿತಿಯ ಪದಾಧಿಕಾರಿಗಳು ನಗರದಲ್ಲಿ ಬುಧವಾರ ಈ ಕುರಿತು ಜಿಲ್ಲಾಧಿಕಾರಿ ಅವರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ʼಅಲಿಯಂಬರ್ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆವರೆಗಿನ ರಸ್ತೆ ಎರಡು ವರ್ಷವಾದರೂ ಪೂರ್ಣಗೊಂಡಿಲ್ಲ. ಕೂಡಲೇ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು. ವಿಳಂಬಕ್ಕೆ ಕಾರಣರಾದ ಗುತ್ತಿಗೆದಾರರು ಹಾಗೂ ಕಿರಿಯ ಎಂಜಿನಿಯರ್ ವಿರುದ್ಧ ಕ್ರಮ ಜರುಗಿಸಬೇಕುʼ ಎಂದು ಆಗ್ರಹಿಸಿದರು.

ʼಗ್ರಾಮದ ಭವಾನಿ ಮಂದಿರ ಹತ್ತಿರದ ಮುಖ್ಯರಸ್ತೆಯಲ್ಲಿನ ಸೇತುವೆ ಮಳೆಗಾಲದಲ್ಲಿ ಸ್ವಲ್ಪ ಮಳೆಯಾದರೂ ಮುಳುಗಡೆಯಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಶಾಲಾ,  ಕಾಲೇಜಿಗೆ ತೆರಳಲು, ರೋಗಿಗಳಿಗೆ ಆಸ್ಪತ್ರೆಗೆ ಒಯ್ಯಲು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರ ಸಂಚಾರಕ್ಕೆ ತೊಂದರೆಯಾಗುತ್ತಿದೆʼ ಎಂದು ಹೇಳಿದರು.

ʼಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಅವರು ಕಳೆದ ವರ್ಷ ಸೇತುವೆ ವೀಕ್ಷಿಸಿ ₹5 ಕೋಟಿ ಅಥವಾ ₹6 ಕೋಟಿ ಅನುದಾನ ಒದಗಿಸುವ ಭರವಸೆ ನೀಡಿದ್ದರು. ಆರು ತಿಂಗಳಾದರೂ ಈ ದಿಸೆಯಲ್ಲಿ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲʼ ಎಂದು ತಿಳಿಸಿದರು.

ಇದನ್ನೂ ಓದಿ : ಬೀದರ್‌ | ಬೈಕ್‌ಗೆ ಟಿಪ್ಪರ್‌ ಡಿಕ್ಕಿ : ಸ್ಥಳದಲ್ಲೇ ದಂಪತಿ ಸಾವು

ಸಮಿತಿಯ ಕಲಬುರಗಿ ವಿಭಾಗೀಯ ಅಧ್ಯಕ್ಷ ಸಂಗಮೇಶ ಬಾವಿದೊಡ್ಡಿ ನಿಯೋಗದ ನೇತೃತ್ವ ವಹಿಸಿದ್ದರು. ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ವಿಶಾಲ್ ದೊಡ್ಡಿ, ಗ್ರಾಮದ ರಮೇಶ್ ಆರ್.ಬಾವಿದೊಡ್ಡಿ, ರೇವಣಸಿದ್ದ ಹಡಪದ, ಶಾಮರಾವ್ ಗಂಜೆ, ಜಗನ್ನಾಥ ಶಿಂಧೆ, ಸಂಗಮೇಶ ಧನ್ನೂರೆ, ದೇವೇಂದ್ರ ರಾಜನಾಳ ಹಾಗೂ ಬೀರಗೊಂಡ ಘೋಡಂಪಳ್ಳಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿ ಮುತ್ತಿಗೆ

ಬೀದರ್‌ ತಾಲೂಕಿನ ಅಮಲ್ಲಾಪುರ ಗ್ರಾಮದ ಸರ್ವೇ ನಂ.71ರ ಜಾಗವನ್ನು ದಲಿತ ಸಮುದಾಯದ...

ಬೀದರ್‌ | ಸೆ.27ರಂದು ಹೂಗಾರ ಮಾದಯ್ಯನವರ ಜಯಂತಿ ಅದ್ದೂರಿ ಆಚರಣೆ

ಅಖಂಡ ಕರ್ನಾಟಕ ಹೂಗಾರ ಮಹಾಸಭಾ ಬೀದರ್ ಜಿಲ್ಲಾ ಘಟಕದ ವತಿಯಿಂದ ಸೆ.27ರಂದು...

ಭಾಲ್ಕಿ | ಮಡಿವಾಳ ಮಾಚಿದೇವರ ಕಾಯಕ ನಿಷ್ಠೆ ಸಮಾಜಕ್ಕೆ ಆದರ್ಶ: ಮಹಾಲಿಂಗ ಸ್ವಾಮೀಜಿ

ಕಾಯಕ ಹಾಗೂ ವಿಶಿಷ್ಟ ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ಮಾಡಿದ...

ಬೀದರ್‌ನಲ್ಲಿ ಸೆ.28ರಂದು ಉದ್ಯೋಗ ಮೇಳ

ಬೀದರ್ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 28ರಂದು ಬೆಳಿಗ್ಗೆ...