ಬೀದರ್ | ಬರಪೀಡಿತ ಜಿಲ್ಲೆ ಘೋಷಿಸಿ; ಕೂಲಿಗಾಗಿ ಕಾಳು ಯೋಜನೆ ಆರಂಭಿಸಲು ಒತ್ತಾಯ

Date:

ಬೀದರ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆಯೆಂದು ಘೋಷಿಸಿ, ರೈತರು, ಕಾರ್ಮಿಕರಿಗೆ ಪರಿಹಾರ ಒದಗಿಸುವುದು, ಕೂಲಿಗಾಗಿ ಕಾಳು ಯೋಜನೆ ಜಾರಿಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ಕೃಷಿ ಕಾರ್ಮಿಕರ ಹಾಗೂ ಗ್ರಾಮೀಣ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಹುಮನಾಬಾದ್‌ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

- Advertisement -

ಹುಮನಾಬಾದ್ ಪಟ್ಟಣದ ಪ್ರವಾಸಿ ಮಂದಿರದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ತಹಸೀಲ್ದಾರ್ ಕಚೇರಿವರೆಗೆ ತೆರಳಿತು. ಬಳಿಕ ತಹಸೀಲ್ದಾರ್ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಮುಖಂಡರು ಮಾತನಾಡಿ, “ಈ ವರ್ಷ ಮಳೆಯ ಕೊರತೆಯಿಂದ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, ರೈತರು ಹಾಗೂ ಕೃಷಿ ಕೂಲಿಕಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜೀವನೋಪಾಯ ನಡೆಸುವುದೇ ದುಸ್ತರವಾಗಿದ್ದು, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಸಮಸ್ಯೆಯೂ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

“ರೈತರಿಗೆ ಬೆಳೆಹಾನಿ ಪರಿಹಾರವನ್ನು ಶೀಘ್ರ ಬಿಡುಗಡೆ ಮಾಡಬೇಕು. ಕೃಷಿ ಕೂಲಿಕಾರರಿಗೆ ವಿಬಿ-ಜಿ ರಾಮ್‌ ಜಿ ಯೋಜನೆಯಡಿ ಸಮರ್ಪಕವಾಗಿ ಉದ್ಯೋಗ ಕಲ್ಪಿಸಬೇಕು. ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಹಾಗೂ ಜಾನುವಾರುಗಳಿಗೆ ಮೇವು ಒದಗಿಸಬೇಕು. ರೈತರ ಸಾಲ ವಸೂಲಾತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಅಗತ್ಯ ನೆರವು ನೀಡಬೇಕು. ಬಡ ಕುಟುಂಬಗಳಿಗೆ ಆಹಾರ ಧಾನ್ಯ ಹಾಗೂ ಅಗತ್ಯ ವಸ್ತುಗಳನ್ನು ಸಮರ್ಪಕವಾಗಿ ವಿತರಿಸಬೇಕು” ಎಂದು ಆಗ್ರಹಿಸಿದರು.

WhatsApp Image 2026 07 25 at 12.22.49 PM

ವೃದ್ಧಾಪ್ಯ ವೇತನ, ಅಂಗವಿಕಲರ ವೇತನ ಹಾಗೂ ವಿಧವಾ ವೇತನವನ್ನು ಪುನಃ ಆರಂಭಿಸಬೇಕು. ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಬೆಳೆ ಹಾನಿ ಪರಿಹಾರ ನೀಡಬೇಕು. ವಿಬಿ-ಜಿ ರಾಮ್‌ ಜಿ ಯೋಜನೆಯಡಿ 200 ದಿನಗಳ ಉದ್ಯೋಗ ಹಾಗೂ ₹600 ದಿನಗೂಲಿ ನೀಡಬೇಕು. ಜಾನುವಾರುಗಳಿಗೆ ಮೇವು ಮತ್ತು ನೀರಿನ ಕೇಂದ್ರಗಳನ್ನು ಆರಂಭಿಸಬೇಕು. “ಕೂಲಿಗಾಗಿ ಕಾಳು” ಯೋಜನೆಯನ್ನು ಜಾರಿಗೊಳಿಸಬೇಕು. ಬೆಲೆ ಏರಿಕೆಯನ್ನು ನಿಯಂತ್ರಿಸಲು ಅಗತ್ಯ ವಸ್ತುಗಳ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ, ಜೀವನಾವಶ್ಯಕ ವಸ್ತುಗಳನ್ನು ಅದರ ವ್ಯಾಪ್ತಿಗೆ ತರಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಇದನ್ನೂ ಓದಿ : ಬೀದರ್‌ | ಬ್ರಿಮ್ಸ್‌ನಲ್ಲಿ ʼಮಮತೆಯ ತೊಟ್ಟಿಲುʼ ಉದ್ಘಾಟಿಸಿದ ಡಿಸಿ ಶಿಲ್ಪಾ ಶರ್ಮಾ

ಪ್ರತಿಭಟನೆಯಲ್ಲಿ ಕರ್ನಾಟಕ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಇಸಾಮೋದ್ದಿನ್‌,ಕಾರ್ಯದರ್ಶಿ ಅಂಬುಬಾಯಿ ಮಾಳಗೆ ಸೇರಿದಂತೆ ಪ್ರಮುಖರಾದ ದೇವಾನಂದ ಗಾಯಕವಾಡ, ಅಮರ ಹುಣಸಗೇರಾ, ಸಿದ್ರಾಮ ಡಾಂಗೆ, ಸೂರ್ಯಕಾಂತ ಸಂತೋಷಕರ್‌, ಕಂಟೆಪ್ಪ ಪೂಜಾರಿ, ಹುಸೇನ್‌ ಸಾಬ್‌, ಸೋಮನಾಥ ಹುಣಸಗೇರಾ, ರಮೇಶ ಕನಕಟ್ಟಾ ಹಾಗೂ ಮತ್ತಿತರರಿದ್ದರು.

      eedina
      ಈ ದಿನ ಡೆಸ್ಕ್‌
      Website | + posts

      ಪೋಸ್ಟ್ ಹಂಚಿಕೊಳ್ಳಿ:

      ಪೋಸ್ಟ್ ಹಂಚಿಕೊಳ್ಳಿ:

      ಈ ಹೊತ್ತಿನ ಪ್ರಮುಖ ಸುದ್ದಿ

      ವಿಡಿಯೋ

      ಇದೇ ರೀತಿಯ ಇನ್ನಷ್ಟು ಲೇಖನಗಳು
      Related

      ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

      ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

      ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

      ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

      ಬೀದರ್‌ | 125 ಎಕರೆಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ : ಸಚಿವ ಈಶ್ವರ ಖಂಡ್ರೆ

      ಬೀದರ್ ನಗರದ ಸಮೀಪ 125 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ...