ಬೀದರ್‌ | ಪ್ರತಿ ಟನ್‌ ಕಬ್ಬಿಗೆ ₹5,500 ದರ ನಿಗದಿಗೆ ಆಗ್ರಹ: ನಾಳೆ ಡಿಸಿ ಕಚೇರಿ ಮುತ್ತಿಗೆ

Date:

ಪ್ರತಿ ಟನ್‌ ಕಬ್ಬಿಗೆ ₹5,500 ದರ ನಿಗದಿಪಡಿಸುವುದು, ಸಕ್ಕರೆ ಕಾರ್ಖಾನೆಗಳಲ್ಲಿ ತಕ್ಷಣ ಕಬ್ಬು ನುರಿಸುವಿಕೆ ಆರಂಭಿಸುವುದು ಹಾಗೂ ರೈತರಿಗೆ ಕನಿಷ್ಠ ₹4,000 ಮುಂಗಡ ಹಣ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಮನ್ವಯ ಸಮಿತಿಯು ಮಂಗಳವಾರ ನಾಳೆ (ನ. 3) ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿದೆ.

- Advertisement -

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ, “ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವ ವಿಚಾರದಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಪರಸ್ಪರ ಜವಾಬ್ದಾರಿ ಹೊರಿಸುತ್ತಿದ್ದು, ರೈತರ ಹಿತಾಸಕ್ತಿಗಿಂತ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಮಧ್ಯವರ್ತಿಗಳ ಹಿತಾಸಕ್ತಿಗೆ ಆದ್ಯತೆ ನೀಡುತ್ತಿವೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಮಣಿಪುರವನ್ನು ಜನಾಂಗೀಯ ಘರ್ಷಣೆಯ ದಳ್ಳುರಿಗೆ ತಳ್ಳಿ ಕೈಚೆಲ್ಲಿದೆ ಮೋ-ಶಾ...

ಮ್ಯಾನ್ಮಾರ್‌ನೊಂದಿಗೆ ಸುಮಾರು 400 ಕಿಲೋಮೀಟರ್ ಗಡಿ ಹಂಚಿಕೊಳ್ಳುವ ಈಶಾನ್ಯ ಭಾರತದ ಗಡಿ ರಾಜ್ಯ ಮಣಿಪುರದಲ್ಲಿ ಶತಮಾನಗಳಿಂದ ಬೆಳೆದು ಬಂದಿದ್ದ ಸೌಹಾರ್ದತೆಯ ಬೇರುಗಳನ್ನು ಸಂಪೂರ್ಣವಾಗಿ ಕೊಳೆತು ಹೋಗಲು ಕೇಂದ್ರ ಸರ್ಕಾರ ಬಿಟ್ಟಂತಿದೆ. 2023ರಿಂದ ನಡೆಯುತ್ತಿರುವ...

“ಕಳೆದ ಎರಡು ತಿಂಗಳಿಂದ ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ರೈತರು ನಿರಂತರ ಹೋರಾಟ ನಡೆಸುತ್ತಿದ್ದರೂ ಸರ್ಕಾರಗಳು ಸಮಸ್ಯೆ ಬಗೆಹರಿಸಲು ಮುಂದಾಗಿಲ್ಲ. ಬೇಡಿಕೆಗಳ ಈಡೇರಿಕೆಗಾಗಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರೂ ರೈತರ ಬೇಡಿಕೆಗಳಿಗೆ ಸ್ಪಂದಿಸಿಲ್ಲ. ರೈತರನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಫುಟ್ಬಾಲ್‌ನಂತೆ ಆಡಿಸುತ್ತಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಬ್ಬು ಕಟಾವು ಹಾಗೂ ನುರಿಸುವಿಕೆ ವಿಳಂಬದಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಬರಗಾಲದ ಪರಿಣಾಮ ಕಬ್ಬು ಒಣಗುತ್ತಿದ್ದು, ಕೆಲವೆಡೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಳೆ ಹಾನಿಯಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿಯೂ ಕಾರ್ಖಾನೆಗಳು ನುರಿಸುವಿಕೆ ಆರಂಭಿಸದಿರುವುದು ರೈತರ ಆತಂಕ ಹೆಚ್ಚಿಸಿದೆ. ಸಕ್ಕರೆಯ ಕನಿಷ್ಠ ಮಾರಾಟ ಬೆಲೆ ಪ್ರತಿ ಕೆ.ಜಿ.ಗೆ ₹31 ಇದ್ದು, ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದೆ. ಆದರೆ ಇದರ ಲಾಭ ಕಬ್ಬು ಬೆಳೆಗಾರರಿಗೆ ತಲುಪುತ್ತಿಲ್ಲ. ಕೇಂದ್ರ ಸರ್ಕಾರ ಸಕ್ಕರೆಯ ಕನಿಷ್ಠ ಮಾರಾಟ ಬೆಲೆ ₹60ಕ್ಕೆ ಹೆಚ್ಚಿಸಿ, ಹೆಚ್ಚುವರಿ ಆದಾಯದ ಪ್ರಯೋಜನ ರೈತರಿಗೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಈ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಮನಹರಿಸಬೇಕು ಎಂದು ಒತ್ತಾಯಿಸಿದರು.

WhatsApp Image 2026 10 10 at 7.46.08 PM 31

ಕಬ್ಬಿಗೆ ವೈಜ್ಞಾನಿಕ ಬೆಲೆ ದೊರೆಯಲು ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು. ಸಕ್ಕರೆ ಕಾರ್ಖಾನೆಗಳನ್ನು ರಾಷ್ಟ್ರೀಕರಣಗೊಳಿಸುವ ಕುರಿತು ಸರ್ಕಾರ ಗಂಭೀರವಾಗಿ ಚಿಂತಿಸಬೇಕು. ಹೊರ ರಾಜ್ಯಗಳಿಂದ ಕಬ್ಬು ಆಮದು ಮಾಡಿಕೊಳ್ಳುವುದನ್ನು ತಡೆದು ಸ್ಥಳೀಯ ಬೆಳೆಗಾರರಿಗೆ ಆದ್ಯತೆ ನೀಡಬೇಕು. ರೈತರು ಮತ್ತು ಕೃಷಿ ಕಾರ್ಮಿಕರ ಮಕ್ಕಳ ಶಿಕ್ಷಣ ಹಾಗೂ ಕುಟುಂಬಗಳ ಆರ್ಥಿಕ, ಸಾಮಾಜಿಕ ಅಭಿವೃದ್ಧಿಗಾಗಿ ಪ್ರತ್ಯೇಕ ರೈತ ಕ್ಷೇಮಾಭಿವೃದ್ಧಿ ಮಂಡಳಿ ರಚಿಸಬೇಕು. ಸಕ್ಕರೆ ಮಾರಾಟದಿಂದ ಸರ್ಕಾರಕ್ಕೆ ದೊರೆಯುವ ತೆರಿಗೆ ಆದಾಯದ ಒಂದು ಭಾಗವನ್ನು ಮಂಡಳಿಗೆ ಮೀಸಲಿಡಬೇಕು. ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಸಕ್ಕರೆ ಕಾರ್ಖಾನೆಗಳ ಮಾಲೀಕರು ಮತ್ತು ರಾಜಕೀಯ ಮುಖಂಡರ ನಡುವಿನ ಹೊಂದಾಣಿಕೆಯಿಂದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದ ಮಲ್ಲಿಕಾರ್ಜುನ ಸ್ವಾಮಿ, ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸರ್ಕಾರ ತಕ್ಷಣ ಸಂಬಂಧಪಟ್ಟವರ ಸಭೆ ಕರೆದು ನಿರ್ಧಾರ ಕೈಗೊಳ್ಳಬೇಕು. ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಸ್ಥಗಿತಗೊಳಿಸುವುದು ಸೇರಿದಂತೆ ಹೋರಾಟ ತೀವ್ರಗೊಳಿಸಲಾಗುವುದು. ರೈತರ ಸಹನೆಯನ್ನು ಸರ್ಕಾರ ಪರೀಕ್ಷಿಸಬಾರದು. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ರೈತರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು ಎಂದು ಎಚ್ಚರಿಸಿದರು.

ಮಂಗಳವಾರ ಬೆಳಿಗ್ಗೆ 11 ಗಂಟೆಗೆ ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಿಂದ ರೈತರ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಿದೆ. ಬೇಡಿಕೆಗಳಿಗೆ ಸ್ಪಂದನೆ ದೊರೆಯದಿದ್ದರೆ ಜೈಲ್ ಭರೋ ಚಳವಳಿ ನಡೆಸಲಾಗುವುದು. ಅಗತ್ಯವಿದ್ದರೆ ಜಿಲ್ಲೆಯ ಸಾವಿರಾರು ರೈತರು ಬೆಳಗಾವಿಯಲ್ಲಿ ನಡೆಯುತ್ತಿರುವ ರೈತರ ಹೋರಾಟದಲ್ಲಿಯೂ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

WhatsApp Image 2026 10 10 at 6.59.42 PM 15

ರೈತರ ಹೋರಾಟಕ್ಕೆ ಪಕ್ಷ, ಜಾತಿ ಅಥವಾ ಸಂಘಟನೆಯ ಭೇದವಿಲ್ಲ. ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಅನ್ನದಾತರ ನ್ಯಾಯಯುತ ಬೇಡಿಕೆಗಳ ಪರವಾಗಿ ನಿಲ್ಲಬೇಕು. ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: ಬೀದರ್‌ | ಎಸ್‌ಐಆರ್‌ ರದ್ದತಿಗೆ ಆಗ್ರಹ: ನ.5ರ ಪ್ರತಿಭಟನೆಗೆ ಬೆಂಬಲ

ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಪ್ರಮುಖರಾದ ಬಾಬುರಾವ ಹೊನ್ನಾ, ಕೊಂಡಿಬಾರಾವ ಪಾಂಡ್ರೆ, ಮಲ್ಲಾರಡ್ಡಿ ಮುರಾಳ, ಸುಖೇಶ ರಡ್ಡಿ ಜೈನಾಪುರ, ಶಿವರಾಜ ಮುದಾಳೆ, ಮಲ್ಲಿಕಾರ್ಜುನ ಬಿರಾದಾರ, ಅಶೋಕ ಕಾರಬಾರಿ, ಧೂಳಪ್ಪ ಅಣದೂರ, ಶಂಕ್ರೆಪ್ಪ ಪಾಟೀಲ, ನಜಿರಮಿಯಾ ಚೊಂಡಿ, ಬಸವರಾಜ ಅಷ್ಟೂರ್, ವಿಜಯಕುಮಾರ ಬಾವಗಿ, ರಾಜಕುಮಾರ ಸ್ವಾಮಿ, ಆನಂದ ಕರಾಬಟ್ಟೆ, ಬಾಬುರಾವ ಭಾಸಗೆ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ರಾಮಲೀಲಾ ಪ್ರತಿಭಟನೆ ಐತಿಹಾಸಿಕ; ಪ್ರಚಂಡ ಜನಶಕ್ತಿಯಿಂದ ಮಾತ್ರವೇ ಸರ್ವಾಧಿಕಾರಿ ಶಕ್ತಿಗಳ ಧೂಳೀಪಟ ಸಾಧ್ಯ

ಬೃಹತ್ ಪ್ರತಿಭಟನೆಗಳಷ್ಟೇ ಸಾಲದು, ಪಕ್ಷಗಳ ಸಂಘಟನೆಗಳನ್ನು ಬಲಿಷ್ಠವಾಗಿ ಕಟ್ಟುವುದು ಪ್ರತಿಪಕ್ಷಗಳ ಮುಂದಿರುವ...

ಔರಾದ್‌ | ಕುಡಿಯುವ ನೀರು ಪೂರೈಕೆಯಲ್ಲಿ ಲೋಪವಾದರೆ ಕ್ರಮ: ಶಾಸಕ ಪ್ರಭು ಚವ್ಹಾಣ

ಔರಾದ್ (ಬಿ) ಮತ್ತು ಕಮಲನಗರ ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿ ಸಮರ್ಪಕ ಕುಡಿಯುವ...

ಯುವಜನರ ಭವಿಷ್ಯ ರೂಪಿಸುವ ‘ಬೆಂಗಳೂರು ಕೌಶಲ್ಯ ಶೃಂಗಸಭೆ 2026’ ನಾಳೆಯಿಂದ ಆರಂಭ

ಕರ್ನಾಟಕದ 'ಕಾರ್ಯಪಡೆ 2030' (Workforce 2030) ಕಾರ್ಯಸೂಚಿಗೆ ಹೊಸ ವೇಗ ನೀಡಲು...

ಶಿಕ್ಷಣ ಹಕ್ಕು ಕಾಯ್ದೆ ಸಮರ್ಪಕ ಜಾರಿಗೆ ಆಗ್ರಹಿಸಿ ನ. 26ರಿಂದ ಅನಿರ್ದಿಷ್ಟಾವಧಿ ಧರಣಿ

ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಉಳಿವಿಗೆ ಆಗ್ರಹಿಸಿ ಹಾಗೂ ಶಿಕ್ಷಣ ಹಕ್ಕು ಕಾಯ್ದೆ...