ಬೀದರ್‌ | ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು : ಎಡಿಸಿ ಸುರೇಖಾ ಕಿಣಗಿ

Date:

ಕರ್ನಾಟಕದ ಇತಿಹಾಸದಲ್ಲಿ ಸಾಮಾಜಿಕ ಸುಧಾರಣೆಯ ಹರಿಕಾರರಾಗಿ ಅನನ್ಯ ಕೊಡುಗೆ ನೀಡಿದ ಶ್ರೇಯಸ್ಸು ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರಿಗೆ ಸಲ್ಲುತ್ತದೆ. ಶೋಷಿತರ ಬದುಕಿನಲ್ಲಿ ನವ ಮನ್ವಂತರ ಸೃಷ್ಟಿಸಿದ ಮಹಾನ್ ನಾಯಕ ಎಂದು ಅಪರ ಜಿಲ್ಲಾಧಿಕಾರಿ ಸುರೇಖಾ ಕಿಣಗಿ ಹೇಳಿದರು.

- Advertisement -

ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೀದರ್ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಡಿ.ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸುನೀತಾ ಶಿವಾನಂದ ಮಾತನಾಡಿ, “ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸ್ಥಾಪಕರಾದ ದೇವರಾಜ ಅರಸು ಅವರು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಹೊಸ ದಾರಿ ತೆರೆದರು. ಅವರ ಸಾಮಾಜಿಕ ಕಾಳಜಿ ಮತ್ತು ಶೈಕ್ಷಣಿಕ ಕ್ಷೇತ್ರದ ಕೊಡುಗೆ ಅಪಾರವಾಗಿದೆ” ಎಂದು ಹೇಳಿದರು.

ಶಿಕ್ಷಕ ಬಾಲಾಜಿ ಅಮರವಾಡಿ ಉಪನ್ಯಾಸ ನೀಡಿದ ಅವರು, “ದೇವರಾಜ ಅರಸು ಅವರು ಸಮಾಜದ ಹಿಂದುಳಿದ ವರ್ಗಗಳು, ದಲಿತರು ಹಾಗೂ ಅಲ್ಪಸಂಖ್ಯಾತರ ಏಳಿಗೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಅವರು ಜಾರಿಗೆ ತಂದ ‘ಉಳುವವನೇ ಭೂಮಿಯ ಒಡೆಯ’ ಎಂಬ ಐತಿಹಾಸಿಕ ಭೂಸುಧಾರಣಾ ಕಾಯ್ದೆ ಲಕ್ಷಾಂತರ ಬಡ ರೈತರಿಗೆ ಭೂಮಿಯ ಹಕ್ಕು ದೊರಕಲು ಕಾರಣವಾಯಿತು. ಹಿಂದುಳಿದ ವರ್ಗಗಳ ಮೀಸಲಾತಿಗಾಗಿ ಹಾವನೂರು ಆಯೋಗದ ವರದಿ ಜಾರಿಗೆ ತಂದ ಕೀರ್ತಿಯೂ ದೇವರಾಜ ಅರಸು ಅವರಿಗೆ ಸಲ್ಲುತ್ತದೆ. ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂದು ನಾಮಕರಣ ಮಾಡಿದ ಹಿರಿಮೆಯೂ ಅವರದ್ದಾಗಿದೆ” ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಮಾತನಾಡಿ, “ಅರಸು ಅವರ ಕ್ರಾಂತಿಕಾರಿ ನಿರ್ಧಾರಗಳು ಹಾಗೂ ಧೀಮಂತ ವ್ಯಕ್ತಿತ್ವವನ್ನು ಇಂದಿನ ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕಿದೆ. ಅವರು ಕೇವಲ ಅಧಿಕಾರ ನಡೆಸಿದ ನಾಯಕರಲ್ಲ ಬದಲಿಗೆ ಸಾಮಾಜಿಕ ಬದಲಾವಣೆಯ ಹರಿಕಾರರಾಗಿದ್ದರು. ಅವರು ಜಾರಿಗೆ ತಂದ ಶೋಷಿತ ಹಾಗೂ ವಂಚಿತ ಸಮುದಾಯಗಳ ಸಬಲೀಕರಣ ಯೋಜನೆಗಳು ಇಡೀ ದೇಶಕ್ಕೇ ಮಾದರಿಯಾಗಿವೆ. ಅವರಲ್ಲಿದ್ದ ದೂರದೃಷ್ಟಿ, ಬದ್ಧತೆ ಮತ್ತು ದಿಟ್ಟ ನಿರ್ಧಾರ ತಳೆಯುವ ಸಾಮರ್ಥ್ಯ ಪ್ರತಿಯೊಬ್ಬ ಸಾರ್ವಜನಿಕ ಸೇವಕರಿಗೂ ಪ್ರೇರಣೆಯಾಗಿದೆ” ಎಂದರು.

WhatsApp Image 2026 08 14 at 11.58.13 AM 4
ಜಾಹೀರಾತು

ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್ ಮಾತನಾಡಿ, “ಸಾಮಾಜಿಕ ನ್ಯಾಯದ ಹರಿಕಾರರಾದ ದೇವರಾಜ ಅರಸು ಅವರ ಚಿಂತನೆಗಳು ಮತ್ತು ದೂರದೃಷ್ಟಿಯ ಆಡಳಿತ ವೈಖರಿ ಸದಾ ಸ್ಮರಣೀಯ” ಎಂದು ಹೇಳಿದರು.

ಇದನ್ನೂ ಓದಿ : ವಚನ ಕಲ್ಯಾಣ | ಬೇನೆ ಬಂದಡೆ ಒರಲು, ಜೀವ ಹೋದಡೆ ಸಾಯಿ, ಇದಕ್ಕಾ ದೇವರ ಹಂಗೇಕೆ!

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶರಣಬಸಪ್ಪ ಕೊಟಪ್ಪಗೊಳ್, ಬೀದರ್ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸಂಗೀತಾ ಬಿರಾದಾರ, ಕಚೇರಿ ವ್ಯವಸ್ಥಾಪಕಿ ಸುಜಾತಾ ಎಸ್. ಪ್ರಾಚಾರ್ಯ ಚನ್ನಬಸವ ಹೇಡೆ, ಪತ್ರಾಂಕಿತ ವ್ಯವಸ್ಥಾಪಕಿ ಕರಬಸಮ್ಮ ಸೇರಿದಂತೆ ಸಾರ್ವಜನಿಕರು, ವಿವಿಧ ಇಲಾಖೆ ಅಧಿಕಾರಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.2 ಮೀಸಲಾತಿ ಸ್ವಾಗತಾರ್ಹ: ಮುತ್ತಣ್ಣ ಮೇತ್ರಿ

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಗಳ ನೇಮಕಾತಿಯಲ್ಲಿ ಶೇ.2ರಷ್ಟು...

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...