ಬೀದರ್‌ | ʼವಂದೇ ಮಾತರಂ’ ಗೀತೆಗೆ ಅಗೌರವ: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನಿಸಿದ ಬಿಜೆಪಿ ಕಾರ್ಯಕರ್ತರು

Date:

ವಂದೇ ಮಾತರಂ ಗೀತೆಗೆ ಅಗೌರವ ತೋರಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಭಾನುವಾರ ಬೀದರ್‌ನ ಕಾಂಗ್ರೆಸ್ ಪಕ್ಷದ ಕಚೇರಿ ಎದುರು ಪ್ರತಿಭಟನೆ ನಡೆಸಿ ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

- Advertisement -

ಪ್ರತಿಭಟನೆಯಲ್ಲಿ ಬಿಜೆಪಿ ನಗರ ಅಧ್ಯಕ್ಷ ಹಾಗೂ ನಗರಸಭೆ ಸದಸ್ಯ ಶಶಿ ಹೊಸಳ್ಳಿ ಮಾತನಾಡಿ, ‘ವಂದೇ ಮಾತರಂ’ ಕೇವಲ ಒಂದು ಗೀತೆಯಲ್ಲ. ದೇಶದ ಸ್ವಾತಂತ್ರ‍್ಯ ಹೋರಾಟದ ಸಂದರ್ಭದಲ್ಲಿ ಕೋಟ್ಯಂತರ ಭಾರತೀಯರಲ್ಲಿ ರಾಷ್ಟ್ರಭಕ್ತಿ ಮತ್ತು ದೇಶಾಭಿಮಾನದ ಭಾವನೆ ಮೂಡಿಸಿದ ಮಹತ್ವದ ರಾಷ್ಟ್ರೀಯ ಗೀತೆ. ಇಂತಹ ಗೀತೆಗೆ ಅಗೌರವ ತೋರುವ ಯಾವುದೇ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

‘ವಂದೇ ಮಾತರಂ’ ಹಾಡುತ್ತಿದ್ದ ಸಂದರ್ಭದಲ್ಲಿ ಕೈ ಸನ್ನೆ ಮೂಲಕ ಅದನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆ ದೇಶದ ಪ್ರತಿಯೊಬ್ಬ ನಾಗರಿಕನ ಭಾವನೆಗಳಿಗೆ ನೋವುಂಟು ಮಾಡಿದೆ. ಈ ಕುರಿತು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.

ದೇಶದ ಸಂಸ್ಕೃತಿ, ಸಂಪ್ರದಾಯ, ಸ್ವಾತಂತ್ರ‍್ಯ ಹೋರಾಟದ ಇತಿಹಾಸ ಹಾಗೂ ರಾಷ್ಟ್ರಭಾವನೆಗೆ ಪ್ರತಿಯೊಬ್ಬರೂ ಗೌರವ ನೀಡಬೇಕು. ರಾಜಕೀಯ ಭಿನ್ನಾಭಿಪ್ರಾಯಗಳು ಏನೇ ಇದ್ದರೂ ರಾಷ್ಟ್ರಗೀತೆ, ರಾಷ್ಟ್ರಧ್ವಜ ಹಾಗೂ ದೇಶದ ರಾಷ್ಟ್ರೀಯ ಭಾವನೆಗಳಿಗೆ ಧಕ್ಕೆ ತರುವ ರೀತಿಯ ವರ್ತನೆ ಇರಬಾರದು ಎಂದು ಅವರು ಹೇಳಿದರು.

ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ ರೆಡ್ಡಿ ಮಾತನಾಡಿ, “ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಹಿರಿಯ ಹಾಗೂ ಅನುಭವೀ ನಾಯಕರು ಇದ್ದಾರೆ. ಈ ವಿಚಾರವನ್ನು ಪಕ್ಷದ ಹಿರಿಯ ನಾಯಕರು ಗಂಭೀರವಾಗಿ ಪರಿಗಣಿಸಿ, ಇಂತಹ ಘಟನೆಗಳು ಮರುಕಳಿಸದಂತೆ ತಮ್ಮ ಪಕ್ಷದ ನಾಯಕರಿಗೆ ಸೂಕ್ತ ನಿರ್ದೇಶನ ನೀಡಬೇಕು” ಎಂದು ಒತ್ತಾಯಿಸಿದರು.

WhatsApp Image 2026 08 16 at 8.03.12 PM

ತಪ್ಪು ನಡೆದಿದ್ದರೆ ಸಂಬಂಧಪಟ್ಟವರ ವಿರುದ್ಧ ಪಕ್ಷದ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕು. ‘ವಂದೇ ಮಾತರಂ’ಗೆ ಅಗೌರವ ತೋರಿಸುವುದು ಸಣ್ಣ ವಿಚಾರವಲ್ಲ. ಇದು ದೇಶದ ಸ್ವಾಭಿಮಾನ ಮತ್ತು ರಾಷ್ಟ್ರೀಯ ಭಾವನೆಗೆ ಸಂಬಂಧಿಸಿದ ವಿಷಯವಾಗಿದೆ. ರಾಜಕೀಯ ಲಾಭಕ್ಕಾಗಿ ರಾಷ್ಟ್ರೀಯ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆಗಳು ಅಥವಾ ಕೃತ್ಯಗಳನ್ನು ಯಾರೂ ಮಾಡಬಾರದು ಎಂದು ಹೇಳಿದರು.

‘ವಂದೇ ಮಾತರಂ’ಗೆ ಅಗೌರವ ತೋರಿಸಲಾಗಿದೆ ಎಂಬ ಆರೋಪದ ಕುರಿತು ಕಾಂಗ್ರೆಸ್ ಪಕ್ಷ ಸ್ಪಷ್ಟನೆ ನೀಡಬೇಕು. ಘಟನೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಯ ಭಾವನೆಗಳಿಗೆ ಧಕ್ಕೆ ತರುವ ಘಟನೆಗಳು ಮರುಕಳಿಸದಂತೆ ಕ್ರಮ ವಹಿಸಬೇಕು. ದೇಶದ ಸಂಸ್ಕೃತಿ, ಸ್ವಾತಂತ್ರ‍್ಯ ಹೋರಾಟದ ಪರಂಪರೆ ಹಾಗೂ ರಾಷ್ಟ್ರಭಕ್ತಿಗೆ ಎಲ್ಲ ರಾಜಕೀಯ ಪಕ್ಷಗಳು ಗೌರವ ನೀಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ : ವಚನ ಕಲ್ಯಾಣ | ಈ ವಿಕಾರದ ಹಿಂಡ ಬಿಡಿಸಿ, ನಿಜ ನಿಳಯ ನಿಮ್ಮಂಗವ ತೋರಿ, ಸುಸಂಗದಲ್ಲಿರಿಸು!

ಪ್ರತಿಭಟನೆಯಲ್ಲಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವೀರೇಶ ಸ್ವಾಮಿ ಸೇರಿದಂತೆ ಪ್ರಮುಖರಾದ ರಮೇಶ ಕಲ್ಲೂರ, ದೀಪಕ ಗಾದಗಿ, ರಾಜೇಂದ್ರ ಪೂಜಾರಿ, ಗಣೇಶ್ ಭೋಸ್ಲೆ, ರೋಷನ್ ವರ್ಮಾ, ನಿತಿನ್ ನವಲಕಲೆ, ನರೇಶ್ ಗೌಳಿ, ಸಚಿನ ಮಠಪತಿ, ಶರಣು ಸಿದ್ದವೀರ, ವೀರೇಂದ್ರ ಪಾಟೀಲ, ಬಾಲಾಜಿ ಪಾಟೀಲ, ಸತೀಶ ಶೇಟಗೊಂಡ, ಶಿವು ಸುಲ್ತಾಪುರೆ, ಸಾಯಿನಾಥ ಮಂಗಲಗಿ, ಬಸವ ಮೂಲಗೆ, ಗುರು ಪಂಪಡೇ, ಸಂಜು ಜಿರಗೆ ಹಾಗೂ ರೋಹಿತ್ ಮಂಗಲಗಿ ಸೇರಿದಂತೆ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲಮರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ: ಶೈಕ್ಷಣಿಕ ಸಾಮಗ್ರಿಗಳ ವಿತರಣೆ

ನವೆಂಬರ್ 14ರ ಮಕ್ಕಳ ದಿನಾಚರಣೆ ಹಾಗೂ ಜವಾಹರಲಾಲ್ ನೆಹರು ಅವರ ಜನ್ಮದಿನದ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ ವೇದಿಕೆಯಾಗಲಿ

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು...

ಆನ್‌ಲೈನ್‌ನಲ್ಲಿ 70 ಬಾಲಕಿಯರಿಗೆ ಲೈಂಗಿಕ ಶೋಷಣೆ: ಭಾರತೀಯ ವಿದ್ಯಾರ್ಥಿಗೆ ಯುಕೆಯಲ್ಲಿ 30 ವರ್ಷ ಜೈಲು!

ಬ್ರಿಟನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿ ಬಿಲಾಲ್ ಕಾಜಿಗೆ ಅಲ್ಲಿನ ನ್ಯಾಯಾಲಯವು 30 ವರ್ಷಗಳ...

ಪಂಜಾಬ್‌ನಲ್ಲಿ 5,000ಕ್ಕೂ ಹೆಚ್ಚು ಕೃಷಿ ತ್ಯಾಜ್ಯ ಸುಡುವ ಪ್ರಕರಣ ದಾಖಲು: 1 ಕೋಟಿ ರೂ. ದಂಡ ವಿಧಿಸಿದ ಸರ್ಕಾರ

ದೆಹಲಿ ಮತ್ತು ಉತ್ತರ ಭಾರತದಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದ ನಡುವೆಯೇ, ಪಂಜಾಬ್‌ನಲ್ಲಿ ಕೃಷಿ...